ಇಂಟಕ್ ರಾಜ್ಯಾಧ್ಯಕ್ಷರಾಗಿ ರಾಕೇಶ್ ಮಲ್ಲಿ ಆಯ್ಕೆ
Team Udayavani, Mar 28, 2017, 10:03 AM IST
ಮಂಗಳೂರು: ಇಂಡಿಯನ್ ನ್ಯಾಶನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಇಂಟಕ್) ರಾಜ್ಯಾಧ್ಯಕ್ಷರಾಗಿ ರಾಕೇಶ್ ಮಲ್ಲಿ ಅವರು ಆಯ್ಕೆಯಾಗಿದ್ದಾರೆ. ಇಂಟಕ್ ಅಧ್ಯಕ್ಷ ಡಾ| ಜಿ. ಸಂಜೀವ ರೆಡ್ಡಿ ಅವರು ಇಂಟಕ್ ರಾಜ್ಯ ಶಾಖೆಯ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು, ಕಾರ್ಯಾಧ್ಯಕ್ಷರಾಗಿ ಎಸ್.ಎಸ್. ಪ್ರಕಾಶಂ, ಪೋಷಕರಾಗಿ ಸಚಿವ ಕೆ.ಜೆ.ಜಾರ್ಜ್, ಸಲಹೆಗಾರರಾಗಿ ಎನ್. ಎಂ.
ಅಡ್ಯಂತಾಯ, ಉಪಾಧ್ಯಕ್ಷರಾಗಿ ಸನತ್ ಕುಮಾರ್, ಎನ್.ಆರ್. ಹೆಗ್ಡೆ, ಎನ್.ಎಂ. ಮುತ್ತಪ್ಪ, ಎನ್.ರವೀಂದ್ರ, ಸಿ.ಎ. ರಹೀಮ್ ಮತ್ತು ಎಂ. ಕೆ. ಸುಹೈಲ್ ಅವರು ಆಯ್ಕೆಯಾಗಿರುತ್ತಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಕೇಶ್ ಮಲ್ಲಿಯವರು ಈ ಹಿಂದೆ ಜಿಲ್ಲಾ ಹಾಗೂ ರಾಜ್ಯ ಇಂಟಕ್ನ ಪದಾಧಿಕಾರಿಯಾಗಿದ್ದರು. ರಾಜ್ಯ ಅಮೆಚೂರು ಕಬಡ್ಡಿ ಸಂಸ್ಥೆಯ ಚೇರ್ಮನ್ ಹಾಗೂ ವಿಕಲಾಂಗ ಕ್ರೀಡಾ ಮತ್ತು ಸಂಸ್ಕೃತಿ ಅಕಾಡೆಮಿಯ ಗೌರವಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿ ಇಂಟಕನ್ನು ಸದೃಢವಾಗಿ ಬೆಳೆಸುವುದು. ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಏಳಿಗೆಗಾಗಿ ತೊಡಗಿಸಿಕೊಳ್ಳುವುದು. ಅವರಿಗೆ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡುವ ಜತೆಗೆ ಗ್ರಾಮೀಣ ಮಟ್ಟದಿಂದ ರಾಜ್ಯದವರೆಗೂ ಇಂಟಕ್ ಸಂಘಟನೆಯನ್ನು ಬಲಪಡಿಸುವ ಗುರಿ ಇದೆ ಎಂದು ಮಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Dakshina Kannada ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.