ಸಂಸ್ಕೃತಿ-ಸಂಸ್ಕಾರ ಉಳಿವಿಗೆ ವೇದ ಪಾಠ ಅವಶ್ಯ: ನಾರಾಯಣ ಭಟ್
ಮಾಣಿ ಪೆರಾಜೆ ಮಠ: ವಸಂತ ವೇದಪಾಠ ಶಿಬಿರ ಸಂಪನ್ನ
Team Udayavani, May 13, 2019, 6:04 AM IST
ವಿಟ್ಲ: ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ ವಸಂತ ವೇದಪಾಠ ಶಿಬಿರದ ಸಮಾರೋಪ ಸಮಾರಂಭ ಶುಕ್ರವಾರ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್ ಮಾತನಾಡಿ, ಈ ಶಿಬಿರದಲ್ಲಿ ಪಡೆದ ಶಿಕ್ಷಣವನ್ನು ಸದುಪಯೋಗಪಡಿಸಬೇಕು. ನಿರಂತರವಾಗಿ ಮುಂದುವರಿಯಬೇಕು. ಸಂಸ್ಕೃತಿ-ಸಂಸ್ಕಾರಗಳ ಉಳಿವಿಗೆ, ಜ್ಞಾನ ಸಂಪಾದನೆಗೆ ವೇದ ಪಾಠ ಅವಶ್ಯ. ಈ ಶಿಕ್ಷಣಕ್ಕೂ ಹೆತ್ತವರು ಆದ್ಯತೆ ನೀಡಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ಯು.ಎಸ್. ವಿಶ್ವೇಶ್ವರ ಭಟ್ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಮಕ್ಕಳ ಬುದ್ಧಿಯನ್ನು ಚುರುಕುಗೊಳಿಸುತ್ತವೆ. ವೇದ ವಿದ್ಯೆಯನ್ನು ಪಡೆಯುವ ಆಸಕ್ತಿ ಹೆಚ್ಚಬೇಕು. ಆ ಮೂಲಕ ಸಮಾಜದ ಒಳಿತಾಗಬೇಕು ಎಂದರು. ವೇದ ಶಿಬಿರದ ಅಧ್ಯಾಪಕರಾದ ವಿಘ್ನೇಶ್ವರ ಭಟ್, ಸುಮಂತ್ ಹೆಗ್ಡೆ ಉಪಸ್ಥಿತರಿದ್ದರು. ಅನೂಪ್ ಶರ್ಮ ಸ್ವಾಗತಿಸಿ, ವೆಂಕಟಕೃಷ್ಣ ವಂದಿಸಿದರು. ಸತ್ಯನಾರಾಯಣ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.