“ಕಸದ ಜವಾಬ್ದಾರಿಯುತ ನಿರ್ವಹಣೆ ನಾಗರಿಕರ ಕರ್ತವ್ಯ’

ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನ

Team Udayavani, Apr 28, 2019, 6:19 AM IST

2704PBE1-SHRAMADAN

ಸುರತ್ಕಲ್‌: ಕಸದ ಜವಾಬ್ದಾರಿ ಯುತ ನಿರ್ವಹಣೆ ಪ್ರತಿಯೋರ್ವ ನಾಗರಿಕರ ಕರ್ತವ್ಯ, ನಮ್ಮ ಮನೆಯನ್ನು ಹೇಗೆ ಸ್ವಚ್ಛವಾಗಿಟ್ಟುಕೊಳ್ಳುತ್ತೇವೆಯೊ ಹಾಗೆಯೇ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಅಗತ್ಯವಿದೆ ಎಂದು ಸುರತ್ಕಲ್‌ ನ್ಪೋಟ್ಸ್‌ ಅಕಾಡೆಮಿಯ ಅಧ್ಯಕ್ಷ ಎಡ್ವಿನ್‌ ಚಾರ್ಲ್ಸ್‌ ಹೇಳಿದರು.

ರಾಮಕೃಷ್ಣ ಮಿಷನ್‌ ಮಂಗಳೂರು, ನಾಗರಿಕ ಸಲಹಾ ಸಮಿತಿ ಸುರತ್ಕಲ್‌, ವಿವಿಧ ಸಮಾನ ಮನಸ್ಕ ಸಂಘ – ಸಂಸ್ಥೆಗಳ ನೇತೃತ್ವದಲ್ಲಿ ಎಂ.ಆರ್‌.ಪಿ.ಎಲ್‌. ಸಂಸ್ಥೆಯ ನೆರವಿನೊಂದಿಗೆ ನಡೆಯುವ ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ 28ನೇ ವಾರದ ಶ್ರಮದಾನವನ್ನು ಶನಿವಾರ ಗೋವಿಂದದಾಸ ಕಾಲೇಜು ಪರಿಸರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರ ಸಹಕಾರದಿಂದ ಬದಲಾವಣೆ
ವಿದ್ಯಾರ್ಥಿಗಳು ಸಂಘ – ಸಂಸ್ಥೆಗಳು ಸ್ವತ್ಛತೆಗೆ ಸಹಕಾರಕೊಡುವುದರೊಂದಿಗೆ ಸ್ವಚ್ಛತಾ ಅರಿವು, ಶ್ರಮದಾನದಲ್ಲಿ ಭಾಗವಹಿಸಿದಲ್ಲಿ ಕ್ರಾಂತಿಕಾರಕ ಬದಲಾವಣೆ ಸಾಧ್ಯ ಎಂದರು.

ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದಲ್ಲಿ ನಮ್ಮ ಜನರಲ್ಲಿ ಸ್ವಚ್ಛತೆಯ ಅರಿವು ಕಡಿಮೆ ಪ್ರಮಾಣ ದಲ್ಲಿದ್ದು, ಪ್ರತಿಯೋರ್ವರು ಸ್ವತ್ಛತೆ ತಮ್ಮ ಆದ್ಯ ಕರ್ತವ್ಯವೆಂದು ತಿಳಿದಲ್ಲಿ ಸ್ವಚ್ಛ ಸುಂದರ ಭಾರತದ ಕನಸು ನನಸಾಗುವುದರಲ್ಲಿ ಯಾವುದೇ ಸಂದೇಹ ಬೇಡ. ರಾಮಕೃಷ್ಣ ಮಿಷನ್‌ ಮಾರ್ಗ ದರ್ಶನದಲ್ಲಿ ಸ್ವಯಂ ಸೇವಕರು ಸ್ವಚ್ಛತೆ ನಡೆಸುವುದರಿಂದ ಪ್ರೇರಣೆ ಪಡೆದು ಬಹಳಷ್ಟು ಜನರು ಸ್ವಯಂ ಸ್ಫೂರ್ತಿಯಿಂದ ಅಭಿಯಾನದಲ್ಲಿ ಪಾಲ್ಗೊಳ್ಳುವುದು ಶ್ಲಾಘನೀಯ ಎಂದರು.

ಸುರತ್ಕಲ್‌ ನ್ಪೋಟ್ಸ್‌ ಅಕಾಡೆಮಿ, ಗೋವಿಂದ ದಾಸ ಕಾಲೇಜು ನೇತೃತ್ವದಲ್ಲಿ ನಡೆಯುತ್ತಿರುವ ವಾರ್ಷಿಕ ಕ್ರೀಡಾ ತರಬೇತಿ ಶಿಭಿರದ ಸುಮಾರು ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ತಮ್ಮ ಅಧ್ಯಾಪಕ ರೊಂದಿಗೆ ಗೋವಿಂದ ದಾಸ ಕಾಲೇಜು ಮುಂಭಾಗ ಹಾಗೂ ಚರ್ಚ್‌ ರಸ್ತೆಗಳಲ್ಲಿ ಶ್ರಮದಾನ ನಡೆಸಿದರು.

ಕ್ರೀಡಾ ತರಬೇತುದಾರರಾದ ಸಂದೀಪ್‌ ಕಡಂಬೋಡಿ, ರಾಕೇಶ್‌ ಹೊಸಬೆಟ್ಟು, ಸಾದೀಕ್‌, ಉದಯ ಕುಮಾರ್‌, ವಿನೋದ್‌ ಕುಮಾರ್‌, ಸುಜಿತ್‌ ಕುಮಾರ್‌ ಜಮುನ ಸಿಂಗ್‌, ಮುಂತಾದವರ ನಾಯಕತ್ವದಲ್ಲಿ ವಿದ್ಯಾರ್ಥಿಗಳು ನಾಲ್ಕು ಗುಂಪುಗಳಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

ದೇಶ ಕಟ್ಟುವಲ್ಲಿ ಭಾಗವಹಿಸಿ
ನಾಗರಿಕ ಸಲಹಾ ಸಮಿತಿ ಸಂಚಾಲಕ ಡಾ|ಕೆ ರಾಜ್‌ಮೋಹನ್‌ ರಾವ್‌ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಏಕಾಗ್ರತೆ ಸಾಧಿ ಸುವ ಹಂಬಲ ತೀವ್ರವಾಗುತ್ತದೆ. ಅದರೊಂದಿಗೆ ಸ್ವಚ್ಛ ಸುರತ್ಕಲ್‌ ಅಭಿಯಾನವು ತಮ್ಮದೆಂದು ಭಾವಿಸಿ ದೇಶ ಕಟ್ಟುವ ಪ್ರಕ್ರಿಯೆಯಲ್ಲಿ ಪ್ರತಿಯೋರ್ವರೂ ಭಾಗವಹಿಸ ಬೇಕಾದ ಅಗತ್ಯವನ್ನು ತಿಳಿಸಿದರು.

ಸ್ವಚ್ಛತಾ ಜಾಗೃತಿ ಅರಿವು
ಗೋವಿಂದದಾಸ ಕಾಲೇಜಿನ ಉಪಪ್ರಾಂಶುಪಾಲ ಕೃಷ್ಣಮೂರ್ತಿ, ಪ್ರೊ| ರಮೇಶ್‌ ಭಟ್‌, ಶಿಕ್ಷಕಿ ಸಾವಿತ್ರಿ ರಮೇಶ್‌ ಭಟ್‌, ಶೇಖರ ದೇವಾಡಿಗ ಮೊದಲಾದವರ ನೇತೃತ್ವದಲ್ಲಿ ವರ್ತಕರಿಗೆ ಪರಿಸರವಾಸಿಗಳಿಗೆ ಸ್ವತ್ಛತೆಯ ಅರಿವು ಮೂಡಿಸಲಾಯಿತು. ರಾಮಕೃಷ್ಣ ಮಿಷನ್‌ ಸ್ವಚ್ಛ ಸುರತ್ಕಲ್‌ ಅಭಿಯಾನದ ಸಂಯೋಜಕ ಸತೀಶ್‌ ಸದಾನಂದ್‌ ಸ್ವಯಂ ಸೇವಕರಿಗೆ ಅಗತ್ಯ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

Mangaluru:ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ;ಅಧ್ಯಕ್ಷರಾಗಿ ಡಾ| ಪ್ರಭಾಕರ ಶಿಶಿಲ ಆಯ್ಕೆ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

ಜ. 11,12: ಮಂಗಳೂರಿನಲ್ಲಿ ಬೀಚ್‌ ಉತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.