ರಾಮಕೃಷ್ಣ ಮಿಷನ್ ಸ್ವಚ್ಛ ಗ್ರಾಮ ಅಭಿಯಾನ ಉದ್ಘಾಟನೆ
Team Udayavani, Dec 30, 2018, 6:03 AM IST
ಮಂಗಳೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯವನ್ನು ಗೊಬ್ಬರವಾಗಿ ಪರಿವರ್ತಿಸಿ ಅತಿ ಹೆಚ್ಚು ಲಾಭ ಗಳಿಸುವ ಗ್ರಾ.ಪಂ.ಗೆ ಜಿಲ್ಲಾಡಳಿತದ ವತಿಯಿಂದ ಬಹುಮಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದರು.
ರಾಮಕೃಷ್ಣ ಮಿಷನ್ ಮಂಗಳೂರು ವತಿಯಿಂದ ದ.ಕ. ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ನಗರದ ರಾಮಕೃಷ್ಣ ಮಠದಲ್ಲಿ ಶನಿವಾರ ನಡೆದ ‘ರಾಮಕೃಷ್ಣ ಮಿಷನ್ ಸ್ವಚ್ಛ ಗ್ರಾಮ ಅಭಿಯಾನ’ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಮಕೃಷ್ಣ ಮಿಷನ್ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ನಡೆಸುತ್ತಿದೆ. ಇದರಿಂದಾಗಿ ಸ್ವಚ್ಛತೆಯ ಅರಿವು ಎಲ್ಲರಲ್ಲೂ ಮೂಡಿದೆ. ತ್ಯಾಜ್ಯದಿಂದಲೂ ಲಾಭ ಗಳಿಸಬಹುದು ಎಂಬ ಭಾವನೆ ಬೆಳೆದಾಗ ಜನರು ಸಹಜವಾಗಿ ಈ ಬಗ್ಗೆ ಜಾಗೃತರಾಗುತ್ತಾರೆ. ತ್ಯಾಜ್ಯದಿಂದ ಉತ್ಪಾದಿಸಿದ ಗೊಬ್ಬರವನ್ನು ಜಿಲ್ಲಾಡಳಿತ ಮತ್ತು ರಾಮಕೃಷ್ಣ ಮಠದ ಜತೆಗೂಡಿ ಸಂಗ್ರಹ ಮತ್ತು ಮಾರಾಟಕ್ಕೆ ಪ್ರಯತ್ನಿಸಲಾಗುವುದು ಎಂದರು.
ಸ್ವಚ್ಛ ಗ್ರಾಮ ಅಭಿಯಾನ
ಸ್ವಚ್ಛತಾ ಅಭಿಯಾನದ ಸಂಚಾಲಕ ಏಕಗಮ್ಯಾನಂದ ಸ್ವಾಮೀಜಿ ಮಾತನಾಡಿ, ರಾಮಕೃಷ್ಣ ಮಿಷನ್ ವತಿಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತಲಾ 100ರಂತೆ 200 ಗ್ರಾಮಗಳಲ್ಲಿ ಸ್ವಚ್ಛ ಗ್ರಾಮ ಅಭಿಯಾನ ನಡೆಯಲಿದೆ. 2019ರ ಅಕ್ಟೋಬರ್ 2ರ ವರೆಗೆ ನಡೆಯುವ ಅಭಿಯಾನದಲ್ಲಿ ಸುಮಾರು ಎರಡು ಸಾವಿರ ಸ್ವಚ್ಛತಾ ಶ್ರಮದಾನ ನಡೆಯಲಿದೆ. ಶ್ರಮದಾನಕ್ಕೆ ಬೇಕಾದ ಪೊರಕೆ ಸಹಿತ ಉಪಕರಣಗಳು, ಭಾಗವಹಿಸುವ ಸದಸ್ಯರಿಗೆ ಟೀಶರ್ಟ್‌ಗಳು, ಜಾಗೃತಿ ಕರಪತ್ರ, ಬ್ಯಾನರ್‌ಗಳು, ತ್ಯಾಜ್ಯ ಸಾಗಿಸಲು ವಾಹನದ ವ್ಯವಸ್ಥೆ, ಉಪಾಹಾರದ ವ್ಯವಸ್ಥೆಗಳನ್ನು ಮಂಗಳೂರು ರಾಮಕೃಷ್ಣ ಮಿಷನ್ ಒದಗಿಸಲಿದೆ. ಕೇಂದ್ರ ಸರಕಾರದ ವಿನಂತಿಯಂತೆ ಜನರಿಂದ ಜನರಿಗಾಗಿ ರಾಮಕೃಷ್ಣ ಮಿಷನ್ ಸ್ವಚ್ಛ ಭಾರತ್ ಅಭಿಯಾನ ನಡೆಸುತ್ತಿದೆ ಎಂದರು. ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಉದ್ಘಾಟಿಸಿದರು.
ದಕ್ಷಿಣ ಕನ್ನಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ದ.ಕ. ಜಿಲ್ಲಾ ಪಂಚಾಯತ್ ಸಿಇಒ ಡಾ| ಆರ್. ಸೆಲ್ವಮಣಿ, ಉಡುಪಿ ಜಿಲ್ಲಾ ಪಂಚಾಯತ್ ಸಿಂಧು ಬಿ.ರೂಪೇಶ್, ಎಂ.ಆರ್.ಪಿ.ಎಲ್. ಜಿಜಿಎಂ ಬಿ.ಎಚ್.ವಿ. ಪ್ರಸಾದ್ ಉಪಸ್ಥಿತರಿದ್ದರು. ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಸ್ವಾಗತಿಸಿದರು. ಉಪನ್ಯಾಸಕ ಸಂತೋಷ್ ನಿರೂಪಿಸಿದರು. ದ.ಕ., ಉಡುಪಿಯ ಇನ್ನೂರು ಗ್ರಾಮಗಳಿಂದ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪಿಡಿಒ ಮೊದಲಾದವರು ಪಾಲ್ಗೊಂಡಿದ್ದರು.
ಸಮ್ಮಾನ
ಕಳೆದ ವರ್ಷ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸ್ವಚ್ಛ ಗ್ರಾಮ ಅಭಿಯಾನದಲ್ಲಿ ಸಾಧನೆ ಮಾಡಿದ ಮಂಗಳೂರು ತಾಲೂಕಿನ ಬಜಪೆ, ಕೆಮ್ರಾಲ್, ಪಡುಪಣಂಬೂರು, ಕಿಲ್ಪಾಡಿ, ವಾಲ್ಪಾಡಿ, ಅತಿಕಾರಿಬೆಟ್ಟು, ಬಂಟ್ವಾಳ ತಾಲೂಕಿನ ಕೇಪು, ಮಂಚಿ, ಪುಣಚ, ಇರ್ವತ್ತೂರು ಗ್ರಾ.ಪಂ. ಪ್ರತಿನಿಧಿಗಳನ್ನು ಸಮ್ಮಾನಿಸಲಾಯಿತು.
ನಿರ್ವಹಣೆಗೆ ಯೋಜನೆ
ಬಯಲು ಶೌಚ ಮುಕ್ತವಾಗಿರುವ ಉಭಯ ಜಿಲ್ಲೆಗಳಲ್ಲಿ ಸಮರ್ಪಕ ಘನ ತ್ಯಾಜ್ಯ ನಿರ್ವಹಣೆ ನಡೆಯಬೇಕು. ಜಿಲ್ಲೆಯ 25 ಗ್ರಾ.ಪಂ.ಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಯೋಜನೆ ಹಾಕಲಾಗಿದೆ. ಜನವರಿಯಲ್ಲಿ ಇದು ಜಾರಿಯಾಗಲಿದೆ.
-ಡಾ| ಆರ್. ಸೆಲ್ವಮಣಿ, ದ.ಕ. ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.