ಸಚಿವ ರಮಾನಾಥ ರೈಗೆ ಗೃಹ ಖಾತೆ?


Team Udayavani, Jul 24, 2017, 8:10 AM IST

rai.jpg

ಮಂಗಳೂರು: ಡಾ| ಜಿ. ಪರಮೇಶ್ವರ್‌ ಅವರಿಂದ ತೆರವಾಗಿರುವ ಗೃಹಸಚಿವ ಸ್ಥಾನವನ್ನು ಸಚಿವ ರಮಾನಾಥ ರೈ ಅವರಿಗೆ ನೀಡಲಾಗುತ್ತಿದೆ ಎಂಬುದಾಗಿ ಕಳೆದ ಹಲವು ದಿನಗಳಿಂದ ಕೇಳಿ ಬರು ತ್ತಿರುವ ವದಂತಿಗಳಿಗೆ ಪುಷ್ಟಿ ನೀಡುವಂತೆ ಕೆಲವು ದಿಢೀರ್‌ ಬೆಳವಣಿಗೆಗಳು ಶನಿವಾರ ನಡೆದಿವೆ. ತುರ್ತಾಗಿ ಬೆಂಗಳೂರಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬಿ. ರಮಾನಾಥ ರೈ ಅವರಿಗೆ ಬುಲಾವ್‌ ಬಂದಿದ್ದು ಈ ಹಿನ್ನೆಲಯಲ್ಲಿ ರವಿವಾರ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಸಂಜೆ 4 ಗಂಟೆಗೆ ವಿಮಾನದ ಮೂಲಕ ಅವರು ಬೆಂಗಳೂರಿಗೆ ತೆರಳಿದ್ದಾರೆ.

ರಾಜ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಇತ್ತೀಚಿನ ವಿದ್ಯಮಾನಗಳು, ಕೆಲವೇ ತಿಂಗಳುಗಳಲ್ಲಿ ನಡೆ ಯುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ಯಲ್ಲಿ ರಮಾನಾಥ ರೈ ಅವರು ಗೃಹಸಚಿವ ಸ್ಥಾನ ವಹಿಸಿಕೊಳ್ಳಲು ಹೆಚ್ಚಿನ ಆಸಕ್ತಿ ವಹಿಸಿಲ್ಲ. ಗೃಹ ಸಚಿ ವಾಲಯ ಮಹತ್ವದ ಇಲಾಖೆಯಾಗಿದ್ದು ವಿಶೇಷ ಗಮನ ನೀಡಬೇಕಾಗುತ್ತದೆ. ಇದರಿಂದ ತನ್ನ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ  ಗಮನ ಹರಿಸಿ ಕೆಲಸ ಮಾಡಲು ಸಾಧ್ಯವಾಗಲಾರದು ಎಂಬ ಅಂಶಗಳು ಅವರು ಆಸಕ್ತಿ ವಹಿಸದಿರಲು ಕಾರಣ ವಾಗಿವೆ ಎಂದು ಮೂಲಗಳು ತಿಳಿಸಿವೆ.

ಆರು ಬಾರಿ ಶಾಸಕರಾಗಿರುವ ಬಿ. ರಮಾನಾಥ ರೈ ಅವರು ಪ್ರಸ್ತುತ ಸಿದ್ದರಾಮಯ್ಯ ಅವರ ಮಂತ್ರಿ ಮಂಡಲ ದಲ್ಲಿ ಹಿರಿಯ ಸಚಿವರಲ್ಲಿ ಓರ್ವರಾಗಿದ್ದು ಹಲವು ಖಾತೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿ ದ್ದಾರೆ. 1993-94ರಲ್ಲಿ ವೀರಪ್ಪ ಮೊಲಿ ಅವರ ಸಚಿವ ಸಂಪುಟದಲ್ಲಿ ಗೃಹ ರಾಜ್ಯ ಸಚಿವರಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ರಮಾನಾಥ ರೈ ಅವರ ಹೆಸರು ಗೃಹಸಚಿವ ಸ್ಥಾನಕ್ಕೆ ಮೊದಲ ಆದ್ಯತೆಯಾಗಿ ಪರಿಗಣಿಸಲ್ಪಟ್ಟಿದ್ದು ಪಕ್ಷದ ಹೈಕಮಾಂಡ್‌ ಕೂಡಾ ರಮಾನಾಥ ರೈ ಅವರ ಬಗ್ಗೆ ಒಲವು ವ್ಯಕ್ತ ಪಡಿಸಿದೆ ಎನ್ನಲಾಗಿದ್ದು ರಮಾನಾಥ ರೈ ಅವರಿಗೆ ಈಗ ಇರುವ ಖಾತೆಯ ಜತೆಗೆ ಗೃಹಖಾತೆಯ ಹೊಣೆಗಾರಿಕೆಯನ್ನು ವಹಿಸಿಕೊಡಲಾಗುತ್ತಿದೆ ಎಂಬ ಊಹಾಪೋಹಾ ಕಳೆದು ಕೆಲವು ದಿನಗಳಿಂದ ಕೇಳಿಬರತೊಡಗಿತ್ತು.  

ಶನಿವಾರ ರಮಾನಾಥ ರೈ ಅವರು ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಅರಣ್ಯ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು ಸಂಜೆಯ ವೇಳೆಗೆ ಮುಖ್ಯಮಂತ್ರಿಯವರು ದೂರ ವಾಣಿ ಕರೆ ಮಾಡಿ ಗೃಹಸಚಿವ ಸ್ಥಾನ ನೀಡುವ ಕುರಿತಂತೆ ಮಾಹಿತಿ ನೀಡಿದ್ದರು ಎಂದು ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ರಮಾನಾಥ ರೈ ಅವರನ್ನು ಶನಿವಾರ ರಾತ್ರಿ ಉದಯವಾಣಿ ಸಂಪರ್ಕಿಸಿದಾಗ “ಗೃಹಸಚಿವ ಸ್ಥಾನ ನೀಡುವ ಬಗ್ಗೆ ತನಗೆ ಮಾಹಿತಿ ಬಂದಿಲ್ಲ’ ಎಂದು ಉತ್ತರಿಸಿದ್ದರು. ರವಿವಾರ ಮುಖ್ಯಮಂತ್ರಿಯವರು ಮತ್ತೆ ಕರೆ ಮಾಡಿ ತುರ್ತಾಗಿ ಬೆಂಗಳೂರಿಗೆ ಬರುವಂತೆ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ನಗರದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಸಂಜೆ 4 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ತೆರಳಿದರು. 

ಆದರೆ ಸಿಎಂ ಸಿದ್ದರಾಮಯ್ಯ ಅವರ ಭೇಟಿ ಸಾಧ್ಯವಾಗದೆ ಸಚಿವ ರೈ ಅವರು ರವಿವಾರ ರಾತ್ರಿ ಬೆಂಗಳೂರಿನಿಂದ ವಾಪಸ್‌ ಹೊರಟಿರುವರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಮಾತುಕತೆ ವೇಳೆ ಪಕ್ಷದ ಹೈಕಮಾಂಡ್‌ ಗೃಹಸಚಿವ ಸ್ಥಾನವನ್ನು ವಹಿಸಿಕೊಳ್ಳುವಂತೆ ಸ್ಪಷ್ಟ ನಿರ್ದೇಶನ ನೀಡಿದರೆ ಆಗ ಅನಿವಾರ್ಯವಾಗಿ ರೈ ಒಪ್ಪಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಬಹುದು.

ಡಾ| ಜಿ. ಪರಮೇಶ್ವರ್‌ ಅವರು ಕೆಪಿಸಿಸಿ ಅಧ್ಯಕ್ಷ ರಾಗಿ ಪುನರಾಯ್ಕೆಗೊಂಡಿರುವ ಹಿನ್ನೆಲೆ ಯಲ್ಲಿ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಳೆದ 2 ತಿಂಗಳುಗಳಿಂದ ಈ ಖಾತೆ ಮುಖ್ಯಮಂತ್ರಿ ಯವರ ಬಳಿಯೇ ಇದೆ. ಇನ್ನು ಕೆಲವೇ ತಿಂಗಳು ಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯ ಲಿದ್ದು ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹೆಚ್ಚಿನ ಗಮನಹರಿಸಬೇಕಾಗಿರುವ ಹಿನ್ನೆಲೆ ಯಲ್ಲಿ ಈ ಹೊಣೆಗಾರಿಕೆಯನ್ನು ಇನ್ನೊಬ್ಬ ರಿಗೆ ವಹಿಸಿಕೊಡಲು ಮುಖ್ಯಮಂತ್ರಿ ನಿರ್ಧ ರಿಸಿ ದ್ದಾರೆ. ಈ ಸ್ಥಾನಕ್ಕೆ ಬೆಂಗಳೂರು ನಗರಾಭಿ ವೃದ್ಧಿ ಸಚಿವ ಕೆ.ಜೆ. ಜಾರ್ಜ್‌, ಅರಣ್ಯಸಚಿವ ರಮಾನಾಥ ರೈ, ಲೋಕೋಪ ಯೋಗಿ ಸಚಿವ ಎಚ್‌.ಸಿ. ಮಹಾದೇವಪ್ಪ ಬಗ್ಗೆ ಸಿದ್ದರಾಮಯ್ಯ ಒಲವು ತೋರ್ಪಡಿಸಿದ್ದರು ಎನ್ನಲಾಗಿದೆ.

ಟಾಪ್ ನ್ಯೂಸ್

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

8(1)

Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.