Fraud Case ರೇಟಿಂಗ್ ನೀಡುವ ಟಾಸ್ಕ್: 27.56 ಲ.ರೂ. ವಂಚನೆ
Team Udayavani, Dec 6, 2023, 12:31 AM IST
ಮಂಗಳೂರು: ಟೆಲಿಗ್ರಾಂ ಆ್ಯಪ್ ಮೂಲಕ ಪಾರ್ಟ್ ಟೈಂ ಜಾಬ್ ಎಂದು ರೇಟಿಂಗ್ ನೀಡುವ ಟಾಸ್ಕ್ ಕೊಟ್ಟು 27.56 ಲ.ರೂ. ವಂಚಿಸಿರುವ ಘಟನೆ ನಡೆದಿದೆ.
ದೂರುದಾರರಿಗೆ ಜೂ. 19ರಂದು ಟೆಲಿಗ್ರಾಂ ಆ್ಯಪ್ನಲ್ಲಿ ಹೊಟೇಲ್ ಮತ್ತು ಹೋಂ ಸ್ಟೇಗಳಿಗೆ ರೇಟಿಂಗ್ ನೀಡುವ ಟಾಸ್ಕ್ ಪೂರ್ಣಗೊಳಿಸುವ ಪಾರ್ಟ್ ಟೈಂ ಜಾಬ್ ಮಾಡಿ ಹಣ ಗಳಿಸಬಹುದು ಎಂದು ಅಪರಿಚಿತ ವ್ಯಕ್ತಿಯಿಂದ ಮೆಸೇಜ್ ಬಂದಿತ್ತು. ಅದನ್ನು ನಂಬಿದ ದೂರುದಾರರು Aditi MMT guru ಎಂಬ ಗ್ರೂಪ್ನಲ್ಲಿ 30 ಟಾಸ್ಕ್ ಪೂರ್ಣಗೊಳಿಸಿದ್ದರು.
ಅವರಿಗೆ ಅಪರಿಚಿತ ವ್ಯಕ್ತಿ 900 ರೂ.ಗಳನ್ನು ಲಾಭಾಂಶವೆಂದು ನೀಡಿದ್ದ. ಅದೇ ದಿನ ಮತ್ತೆ 11,000 ರೂ. ಹೂಡಿಕೆ ಮಾಡಿಸಿ ಒಮ್ಮೆ 20,000 ರೂ. ಹಾಗೂ ಇನ್ನೊಮ್ಮೆ 70,000 ರೂ.ಗಳನ್ನು ಲಾಂಭಾಂಶವೆಂದು ನೀಡಿದ್ದ. ಇದೇ ರೀತಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭಾಂಶ ನೀಡುವುದಾಗಿ ನಂಬಿಸಿ ಜೂ. 19ರಿಂದ ಆ. 26ರವರೆಗೆ ಹಂತಹಂತವಾಗಿ ಒಟ್ಟು 27,56,129 ರೂ.ಗಳನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿಕೊಂಡು ಅನಂತರ ಯಾವುದೇ ಲಾಭಾಂಶ ನೀಡದೆ ವಂಚಿಸಿದ್ದಾನೆ. ಈ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Manipal: ಅಪಘಾತ ತಡೆಯಲು ಹೀಗೆ ಮಾಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.