ಪಡಿತರ ಚೀಟಿ, ಕೃಷಿ ಯಂತ್ರ ಸಬ್ಸಿಡಿಗೆ ಆಗ್ರಹ


Team Udayavani, Jul 14, 2017, 2:50 AM IST

1307VTL-Alike-Gramasabhe.jpg

ವಿಟ್ಲ : ಪಡಿತರ ಚೀಟಿ ವ್ಯವಸ್ಥೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಕ್ರಮ ಹಾಕಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಪಡಿತರ ಅಂಗಡಿಗಳಲ್ಲಿ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ತಂದು ಗೊಂದಲ ಮೂಡಿಸಲಾಗುತ್ತಿದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ಲಭ್ಯವಾಗುತ್ತಿಲ್ಲ ಎಂದು ಅಳಿಕೆ ಗ್ರಾಮಸ್ಥರು ದೂರಿದ್ದಾರೆ.

ಸಮುದಾಯ ಭವನದಲ್ಲಿ  ಜರಗಿದ 2017-18ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ರೇಷನ್‌ ಕಾರ್ಡ್‌ ಗೊಂದಲದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪಡಿತರ ಚೀಟಿ ಪರಿಶೀಲನ ಕಾರ್ಯ ಪ್ರಗತಿಯಲ್ಲಿವೆ ಎಂದು ಗ್ರಾಮಕರಣಿಕ ಪ್ರಕಾಶ್‌ ತಿಳಿಸಿದರು. 94ಸಿ ಅಡಿಯಲ್ಲಿ ಮನೆ ಅಡಿಸ್ಥಳ ಮಂಜೂರಾತಿಗೆ ಅರ್ಜಿ ಸಲ್ಲಿಸಲು 3 ತಿಂಗಳ ಕಾಲಾವಕಾಶವಿದೆ ಎಂದವರು ಇದೇ ಸಂದರ್ಭದಲ್ಲಿ ತಿಳಿಸಿದರು.ಗ್ರಾ. ಪಂ.ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಅಧಿಕಾರಿಯಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಷಿ ಭಾಗವಹಿಸಿದ್ದರು.

ಸಹಾಯಧನಕ್ಕೆ ಒತ್ತಾಯ 
ವಿಟ್ಲ ಹೋಬಳಿಯ ಕೃಷಿಕರಿಗೆ ಕೃಷಿ ಇಲಾಖೆ ಬಾಡಿಗೆ ಆಧಾರಿತ ಕೃಷಿ ಯಂತ್ರಗಳನ್ನು ಒದಗಿಸುತ್ತಿದ್ದು, ಉತ್ತಮ ಯಂತ್ರಗಳಿಗೆ ಸಬ್ಸಿಡಿ ನೀಡುತ್ತಿಲ್ಲ. ಪರಿಣಾಮವಾಗಿ ಸಬ್ಸಿಡಿ ಪಡೆದ ವ್ಯಕ್ತಿಗೆ ಆ ಯಂತ್ರ ಪ್ರಯೋಜನವಿಲ್ಲದಂತಾಗುತ್ತದೆ ಎಂದು ಕೃಷಿಕರು ಆರೋಪಿಸಿದರು.

ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಎಸ್‌.ಕೆ. ಸರಿಕಾರ ಮಾತನಾಡಿ,  ಕೃಷಿ ಭಾಗ್ಯ ಯೋಜನೆಯಲ್ಲಿ ರೈತರ ಅಭಿವೃದ್ಧಿಗೆ ವಿವಿಧ ಯೋಜನೆಗಳಿವೆ. ಮೈರದಲ್ಲಿ ಕೃಷಿ ಬಾಡಿಗೆ ಆಧಾರಿತ ಯಂತ್ರಗಳ ಲಭ್ಯತೆ ಇದ್ದು, ಕೃಷಿಕರು ಬಳಸಿಕೊಳ್ಳಬಹುದಾಗಿದೆ. ಯಂತ್ರದ ಮೂಲಕ ಬತ್ತದ ಪೈರಿನ ನಾಟಿ ಕಾರ್ಯ ಮಾಡಿದರೆ 1,600 ರೂ. ಸಹಾಯಧನ ನೀಡಲಾಗುತ್ತಿದೆ ಎಂದರು.

ಉಚಿತ ಸಸಿ 
ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕೆ ಅಧಿಕಾರಿ ಸೇಸಪ್ಪ ಎಂ. ಮಾತನಾಡಿ ಮಲ್ಲಿಗೆ ಕೃಷಿ ಮಾಡುವ ರೈತರಿದ್ದರೆ ಸೂಕ್ತ 

ದಾಖಲೆಗಳೊಂದಿಗೆ ಅರ್ಜಿಸಲ್ಲಿಸಿದರೆ ಉಚಿತವಾಗಿ 25 ಸಸಿಗಳನ್ನು ನೀಡಲಾಗುತ್ತದೆ. ಬೇರೆ ಬೇರೆ ಸಸಿಗಳ ವಿತರಣೆಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ| ಜಯಪ್ರಕಾಶ್‌ ಕೆ.ಕೆ., ಪಶು ಸಂಗೋಪನ ಇಲಾಖೆಯ ಹಿರಿಯ ಪಶುವೈದ್ಯ ಪರಿವೀಕ್ಷಕ ಕಾಶಿಮಠ ಈಶ್ವರ ಭಟ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಲೋಲಾಕ್ಷಿ, ಶಿಕ್ಷಣ ಇಲಾಖೆಯ ಪಿ.ಕೃಷ್ಣ ಭಟ್‌, ಪಂಚಾಯತ್‌ರಾಜ್‌ ಂಜಿನಿಯರಿಂಗ್‌ ವಿಭಾಗದ ಅಜಿತ್‌, ಮೆಸ್ಕಾಂ ಇಲಾಖೆಯ ಆನಂದ ಅವರು ಮಾತನಾಡಿದರು.

ಜಿ.ಪಂ., ತಾ.ಪಂ. ಸದಸ್ಯರ ಗೈರು 
ಗ್ರಾಮ ಸಭೆಯಲ್ಲಿ ಜಿ.ಪಂ.ಸದಸ್ಯರಾಗಲೀ, ತಾ.ಪಂ.ಸದಸ್ಯರಾಗಲೀ ಭಾಗವಹಿಸಿರಲಿಲ್ಲ. ಜನಪ್ರತಿನಿಧಿಗಳು ಭಾಗವಹಿಸದೇ ಇರುವ ಬಗ್ಗೆ ಜಗತ್‌ಶಾಂತಪಾಲ ಚಂದಾಡಿ ಅವರು ಬೇಸರ ವ್ಯಕ್ತಪಡಿಸಿದರು. ಗ್ರಾ.ಪಂ.ಉಪಾಧ್ಯಕ್ಷೆ ಸೆಲ್ವಿನ್‌ ಡಿ’ಸೋಜಾ, ಸದಸ್ಯರಾದ ಮೋನಪ್ಪ, ಜಯಂತಿ, ಸರೋಜಿನಿ, ಮೂಕಾಂಬಿಕಾ ಭಟ್‌, ಸುಧಾಕರ ಮಡಿಯಾಲ, ಗಿರಿಜ, ಸರಸ್ವತಿ, ಕವಿತಾ, ರವೀಶ, ಜಗದೀಶ ಶೆಟ್ಟಿ ಮುಳಿಯ, ಅಬ್ದುಲ್ಲ  ರಹಿಮಾನ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅಶೋಕ ಎನ್‌.ಜಿ. ಉಪಸ್ಥಿತರಿದ್ದರು.

ರಸ್ತೆ, ಚರಂಡಿ  ದುರಸ್ತಿಗೆ ಆಗ್ರಹ 
ಅಳಿಕೆ ಗ್ರಾಮಕ್ಕೆ ಸಂಸದರ ಅನುದಾನ ಘೋಷಿಸುವ ಭರವಸೆಯಲ್ಲಿ ಹಲವು ರಸ್ತೆಗಳ ಅಭಿವೃದ್ಧಿಯಾಗುವುದೆಂದು ನಿರೀಕ್ಷಿಸಲಾಗಿತ್ತು. ಈ ವರೆಗೆ ಗ್ರಾಮಕ್ಕೆ ಅವರ ಅನುದಾನ ಎಷ್ಟು ಬಿಡುಗಡೆಯಾಗಿದೆ ಎಂದು ಗ್ರಾಮಸ್ಥರು ಪ್ರಶ್ನಿಸಿದರು. ಪಡಿಬಾಗಿಲು – ಅಳಿಕೆ ರಸ್ತೆಯ ಮಧ್ಯೆ ಚರಂಡಿ ದುರಸ್ತಿಪಡಿಸಿ ಐದು ವರ್ಷ ಕಳೆದುಹೋಗಿವೆ. ರಸ್ತೆಯಲ್ಲೇ ನೀರು ಹರಿಯುತ್ತಿದೆ. ಲೋಕೋಪಯೋಗಿ ಇಲಾಖೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕೆಂದು ಗ್ರಾ.ಪಂ.ನಿರ್ಣಯ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

Dawwod-Arrest

Mangaluru: ಕುಖ್ಯಾತ ರೌಡಿಶೀಟರ್‌ ದಾವೂದ್‌ ಬಂಧಿಸಿದ ಸಿಸಿಬಿ ಪೊಲೀಸರು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.