ಪಡಿತರ ಚೀಟಿ: ಇ-ಕೆವೈಸಿಗೆ ಅಂತಿಮ ಅವಕಾಶ
Team Udayavani, Sep 2, 2021, 6:46 AM IST
ಉಡುಪಿ/ಮಂಗಳೂರು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇ-ಕೆವೈಸಿ ಆಗದೆ ಇರುವ ಪಡಿತರ ಚೀಟಿಯ ಸದಸ್ಯರು ಸೆ. 10ರೊಳಗೆ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ನೋಂದಾಯಿಸಿಕೊಳ್ಳಬಹುದು.
ಪರಿಶಿಷ್ಟ ಜಾತಿ, ಪಂಗಡದ ಪಡಿತರ ಚೀಟಿದಾರರು ಜಾತಿ ಪ್ರಮಾಣ ಪತ್ರ ಮತ್ತು ಅನಿಲ ಸಂಪರ್ಕ ಹೊಂದಿರುವ ಮಾಹಿತಿ, ಮೊಬೈಲ್ ಸಂಖ್ಯೆಯನ್ನು ನ್ಯಾಯಬೆಲೆ ಅಂಗಡಿಗೆ ಕಡ್ಡಾಯವಾಗಿ ಒದಗಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರ ಪ್ರಕ ಟನೆ ತಿಳಿಸಿದೆ.
2020ರ ಫೆಬ್ರವರಿ ಅನಂತರ ವಿತರಿಸಿರುವ ಹೊಸ ಹಾಗೂ ತಿದ್ದುಪಡಿ ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ (ಬಿಪಿಎಲ್) ಹಾಗೂ ಆದ್ಯತೇತರ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಬೇಕಾಗಿದೆ. ಇ-ಕೆವೈಸಿಯನ್ನು ಉಚಿತವಾಗಿ ಮಾಡಲಾಗುತ್ತಿದೆ.
ಯಾರಾದರೂ ಹಣ ಕೇಳಿದಲ್ಲಿ ಅಥವಾ ಏನಾದರೂ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಹಶೀಲ್ದಾರರು ಮತ್ತು ಮಂಗಳೂರಿನ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.