ಸತ್ಕರ್ಮಗಳಿಂದ ಪುಣ್ಯಪ್ರಾಪ್ತಿ: ಒಡಿಯೂರು ಶ್ರೀ
Team Udayavani, Jan 1, 2018, 1:56 PM IST
ಮಂಗಳೂರು: ವ್ಯಕ್ತಿಯ ಬದುಕಿನಲ್ಲಿ ಸಮಸ್ಯೆಗಳು ಸಾಮಾನ್ಯವಾಗಿದ್ದು, ಆತ್ಮವಿಶ್ವಾಸವೇ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಿದೆ. ಆದರ್ಶಗಳನ್ನು ಬದುಕಿನ ಉಸಿರಾಗಿಸಿಕೊಂಡು ಸತ್ಕರ್ಮಗಳನ್ನು ಮಾಡಿದಾಗ ಭಗವಂತನ ಕೃಪೆಯಿಂದ ಪುಣ್ಯ ಪ್ರಾಪ್ತವಾಗುತ್ತದೆ ಎಂದು ಒಡಿಯೂರು ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು.
ಅವರು ರವಿವಾರ ನಗರದ ಪುರಭವನದಲ್ಲಿ ನಡೆದ ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗ ಮಂಗಳೂರು ವಲಯದ 12ನೇ ವಾರ್ಷಿಕೋತ್ಸವ, ಶ್ರೀ ಗುರುಪಾದುಕಾರಾಧನೆ ಹಾಗೂ 100 ಮಂದಿ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಕಡಲಿನಂತಿರೋಣ
ಕರಾವಳಿ ಭಾಗದ ನಾವು ಕಡಲನ್ನು ಗುರುವಾಗಿ ಸ್ವೀಕರಿಸಬೇಕು. ಕಡಲುಕ್ರಿಯಾಶೀಲತೆಗೆ ಉತ್ತಮ ಉದಾಹರಣೆಯಾಗಿದ್ದು, ಇದರಿಂದ ಜೀವನ ಸಾರ್ಥಕವಾಗುತ್ತದೆ. ಎಲ್ಲೋ ಒಂದು ಕಡೆ ರಾಮ ಮಂದಿರ ನಿರ್ಮಾಣಕ್ಕಿಂತಲೂ ಪ್ರತಿಯೊಬ್ಬರ ಮನಸ್ಸಿನಲ್ಲೂ ಮಂದಿರ ನಿರ್ಮಾಣವಾದರೆ ರಾಷ್ಟ್ರ ಪ್ರೇಮವೂ ಬೆಳೆಯುತ್ತದೆ. ತುಳು ಭಾಷೆ ಎಲ್ಲ ಅರ್ಹತೆಗಳನ್ನು ಹೊಂದಿದ್ದರೂ ರಾಜಕೀಯ ಇಚ್ಛಾ
ಶಕ್ತಿ ಅಥವಾ ತುಳುವರ ಇಚ್ಛಾಶಕ್ತಿಯ ಕೊರತೆಯಿಂದ ಇನ್ನೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಂಡಿಲ್ಲ. ಇದಕ್ಕಾಗಿ ಎಲ್ಲರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ತುಳುವಿಗೆ ಸಾಂವಿಧಾನಿಕ ಮಾನ್ಯತೆ ಲಭ್ಯವಾಗಲಿದೆ ಎಂದು ಸ್ವಾಮೀಜಿ ಆಶಿಸಿದರು.
ಒಡಿಯೂರು ಕ್ಷೇತ್ರದಲ್ಲಿ ನಡೆಯಲಿರುವ ತುಳುನಾಡ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಶ್ರೀಗಳು ಬಿಡುಗಡೆಗೊಳಿಸಿದರು.
ಅತಿಥಿಗಳಾಗಿ ಸಾಧ್ವಿ ಶ್ರೀ ಮಾತಾನಂದಮಯಿ, ಕರಾವಳಿ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಸ್. ಗಣೇಶ್ ರಾವ್, ಉದ್ಯಮಿಗಳಾದ ಮಹಾಬಲ ಕೊಟ್ಟಾರಿ, ಜಯಶೀಲ ಅಡ್ಯಂತಾಯ ಅಡ್ಯಾರುಗುತ್ತು, ಕೆ. ಯತೀಶ ಸಾಲ್ಯಾನ್, ಕೆ. ಅಚ್ಯುತ ಭಟ್, ಜಗನ್ನಾಥ ಶೆಟ್ಟಿ, ನ್ಯಾಯವಾದಿ ಅನಿತಾ ಕಿಣಿ, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಬಳಗದ ಗೌರವ ಸಲಹೆಗಾರ ಟಿ. ತಾರಾನಾಥ ಕೊಟ್ಟಾರಿ ಭಾಗವಹಿಸಿದ್ದರು.
ಸೇವಾ ಬಳಗದ ಮಂಗಳೂರು ಅಧ್ಯಕ್ಷ ಜಯಂತ ಜೆ. ಕೋಟ್ಯಾನ್ ಸ್ವಾಗತಿಸಿದರು. ಪ್ರಾಧ್ಯಾಪಕ ಭಾಸ್ಕರ ರೈ ಕುಕ್ಕುವಳ್ಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಪೂರ್ವದಲ್ಲಿ ಸಾಧ್ವಿ ಶ್ರೀ ಮಾತಾನಂದಮಯಿ ಅವರ ಉಪಸ್ಥಿತಿಯಲ್ಲಿ ಭಜನ ಸಂಕೀರ್ತನೆ ನಡೆಯಿತು.
ಗೌರವ, ನೆರವು ವಿತರಣೆ
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು, ಹೈನುಗಾರರು, ಮಹಿಳಾ ಕಲಾವಿದರು, ಸಮಾಜ ಸೇವಕರು, ಕೃಷಿಕರನ್ನು ಗೌರವಿಸಲಾಯಿತು. ಅಶಕ್ತರಿಗೆ ಕೃತಕ ಕಾಲು ಹಾಗೂ ಗಾಲಿ ಕುರ್ಚಿ ವಿತರಿಸಲಾಯಿತು ವಿದ್ಯಾರ್ಥಿಗಳು ಹಾಗೂ ಅನಾರೋಗ್ಯ ಪೀಡಿತರಿಗೆ ಸಹಾಯಹಸ್ತ ವಿತರಿಸ ಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.