ಜನವಿಕಾಸ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ
Team Udayavani, Jan 10, 2018, 11:29 AM IST
ಪುನರೂರು: ಯುವ ಮನಸ್ಸಿನಲ್ಲಿ ಸಮಾಜಮುಖಿ ಚಿಂತನೆ ಅರಳಲು, ಪುನರೂರು ಪ್ರತಿಷ್ಠಾನವು ಸಮಾಜ ಸೇವಾ ಕಾರ್ಯದ ಮೂಲಕ ಕಳೆದ ಒಂದು ವರ್ಷದಿಂದ ಯುವಜನರನ್ನು ಸಂಘಟಿಸಿಕೊಂಡು ಗ್ರಾಮೀಣ ಭಾಗದಲ್ಲಿನ ಶೈಕ್ಷಣಿಕ, ಸಾಂಸ್ಕೃತಿಕ, ಸಾಮಾಜಿಕವಾಗಿ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ. ಸಜ್ಜನರನ್ನು ಜನವಿಕಾಸದತ್ತ ಸಾಗಲು ಪ್ರೇರಣೆ ನೀಡುವ ಕಾರ್ಯಕ್ರಮಗಳು ನಿತ್ಯ ನಿರಂತರವಾಗಿ ನಡೆಯಬೇಕು ಎಂದು ಪುನರೂರು ಪ್ರತಿಷ್ಠಾನದ
ಅಧ್ಯಕ್ಷರಾದ ದೇವಪ್ರಸಾದ್ ಪುನರೂರು ಹೇಳಿದರು.
ಅವರು ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ ಪುನರೂರು ಪ್ರತಿಷ್ಠಾನದ ಸಹೋದರ ಸಂಸ್ಥೆಯಾದ ಮೂಲ್ಕಿ ಜನವಿಕಾಸ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ
ವಹಿಸಿ, ಮಾತನಾಡಿದರು. ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಮಾತನಾಡಿ, ದೇಶದ ಭವಿಷ್ಯವನ್ನು ರೂಪಿಸುವ ಬಹುದೊಡ್ಡ ಜವಾಬ್ದಾರಿ ಯುವಜನರಲ್ಲಿದೆ. ಅವರಿಗೆ ಸೂಕ್ತವಾದ ಸಮಯದಲ್ಲಿ ಉಪಯುಕ್ತ ಮಾರ್ಗದರ್ಶನ ನೀಡಿದಲ್ಲಿ ಮಾತ್ರ ಅವರು ಸಹ ಸನ್ಮಾರ್ಗದಲ್ಲಿ ಸಾಗಲು ಸಾಧ್ಯವಾಗುತ್ತದೆ ಎಂದರು.
ಪಟೇಲ್ ವಾಸುದೇವ ರಾವ್ ಪುನರೂರು ಶುಭಹಾರೈಸಿದರು. ನೂತನ ಅಧ್ಯಕ್ಷರಾದ ಗೀತಾ ಶೆಟ್ಟಿಯವರ ತಂಡಕ್ಕೆ ಅಧಿಕಾರವನ್ನು ಹಸ್ತಾಂತರಿಸಲಾಯಿತು. ಪುನರೂರು ಪ್ರತಿಷ್ಠಾನದ ಪ್ರ.ಕಾ. ಶ್ರೇಯಾ ಪುನರೂರು ಉಪಸ್ಥಿತರಿದ್ದರು.
ಉಪಾಧ್ಯಕ್ಷರಾದ ಭಾಗ್ಯ ರಾಜೇಶ್, ಜತೆ ಕಾರ್ಯದರ್ಶಿ ಪ್ರಶಾಂತಿ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರಾದ
ಪಿ. ಎಸ್. ಸುರೇಶ್ ರಾವ್, ಆನಂದ ಮೇಲಾಂಟ, ಶೋಭಾ ರಾವ್, ದಾಮೋದರ ಶೆಟ್ಟಿ, ಜೀವನ್ ಶೆಟ್ಟಿ, ಶಶಿಕರ ಕೆರೆಕಾಡು ಉಪಸ್ಥಿತರಿದ್ದರು. ಪ್ರಾಣೇಶ್ ಭಟ್ ದೇಂದಡ್ಕ ಸ್ವಾಗತಿಸಿ, ನಿರೂಪಿಸಿದರು. ಪ್ರ.ಕಾ. ಕೆ. ರಾಘವೇಂದ್ರ ಭಟ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.