ನಗರದಲ್ಲಿ ಪ್ರತಿ ದಿನದ ಕಸ ಸಂಗ್ರಹದಲ್ಲಿ 70 ಟನ್ ಇಳಿಕೆ!
Team Udayavani, May 6, 2021, 4:40 AM IST
ಮಹಾನಗರ: ರಾಜ್ಯಾದ್ಯಂತ ಈಗಾಗಲೇ ಲಾಕ್‌ಡೌನ್ ಮಾದರಿ ಕರ್ಫ್ಯೂ ಘೋಷಣೆ ಮಾಡಲಾಗಿದ್ದು, ಒಂದು ವಾರದಿಂದ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ಸಂಗ್ರಹದಲ್ಲಿ ಇಳಿಕೆ ಕಂಡಿದೆ. ಸಾಮಾನ್ಯ ದಿನಗಳಿಗೆ ಹೋಲಿಕೆ ಮಾಡಿದರೆ ಮಂಗಳೂರಿನಲ್ಲಿ ಸುಮಾರು 70ರಿಂದ 80 ಟನ್ ಕಸ ಸಂಗ್ರಹ ಕಡಿಮೆಯಾಗಿದೆ.
ಲಾಕ್‌ಡೌನ್ ಪರಿಣಾಮವಾಗಿ ನಗರದಲ್ಲಿ ಬಹುತೇಕ ಅಂಗಡಿಗಳು ಬಂದ್ ಆಗಿವೆ. ಮಾಲ್‌ಗಳು, ವಾಣಿಜ್ಯ ಕಟ್ಟಡಗಳು, ಕೆಲವೊಂದು ಹೊಟೇಲ್‌ಗಳು, ಬಾರ್ ಆ್ಯಂಡ್ ರೆಸ್ಟೋರೆಂಟ್, ಕಲ್ಯಾಣ ಮಂಟಪ ಸಹಿತ ವಿವಿಧ ವಲಯಗಳು ಮುಚ್ಚಿವೆ. ಸಾಮಾನ್ಯವಾಗಿ ಈ ವಲಯಗಳಿಂದ ಹೆಚ್ಚಾಗಿ ಕಸ ಉತ್ಪಾದನೆಯಾಗುತ್ತದೆ. ಇದೀಗ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡ ಪರಿಣಾಮ ಕಸ ಸಂಗ್ರಹದ ಮೇಲೆ ಪರಿಣಾಮ ಬೀರಿದೆ. ನಗರದಲ್ಲಿ ಸಾರ್ವಜನಿಕ ಸಂಚಾರ ಕಡಿಮೆಯಾಗಿದೆ. ಇದೇ ಕಾರಣಕ್ಕೆ ನಗರದ ಬಹುತೇಕ ಅಂಗಡಿಗಳಲ್ಲಿ ವ್ಯಾಪಾರವಿಲ್ಲ. ಹಾಸ್ಟೆಲ್ ಅಥವಾ ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ಬಹುತೇಕ ವಿದ್ಯಾರ್ಥಿಗಳು, ಉದ್ಯೋಗಿಗಳು ಮನೆಗಳಿಗೆ ತೆರಳಿದ್ದಾರೆ. ಇದೂ ಕೂಡ ಕಸ ಸಂಗ್ರಹ ಇಳಿಕೆಗೆ ಕಾರಣ ಎನ್ನಬಹುದು.
ಮಂಗಳೂರಿನ ಸೆಂಟ್ರಲ್ ಮಾರುಕಟ್ಟೆ ಯಲ್ಲಿ ಹೆಚ್ಚಿನ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಸಾಮಾನ್ಯ ದಿನಗಳಲ್ಲಿ ರಾಶಿಗಟ್ಟಲೆ ಕಸ ಇಲ್ಲಿ ಬಿದ್ದಿರುತ್ತದೆ. ಆದರೆ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಂಟ್ರಲ್ ಮಾರುಕಟ್ಟೆ ವ್ಯಾಪಾರ ಸ್ಥಗಿತಗೊಳಿಸಲಾಗಿದೆ. ಆದ್ದರಿಂದ ಅಲ್ಲಿ ಯಾವುದೇ ರೀತಿಯ ವ್ಯಾಪಾರ- ವಹಿವಾಟು ನಡೆಯುತ್ತಿಲ್ಲ. ಇದೇ ಕಾರಣಕ್ಕೆ ಇಲ್ಲಿ ಉತ್ಪತ್ತಿಯಾಗುತ್ತಿರುವ ಕಸ ಸಂಗ್ರಹದಲ್ಲಿ ವ್ಯತ್ಯಯ ಉಂಟಾಗಿದೆ.
ಕರ್ಫ್ಯೂ ಇದ್ದರೂ ಮನೆ ಮನೆಗೆ ಕಸ ಸಂಗ್ರಹಕ್ಕೆ ಬರುವ ಸ್ವತ್ಛತ ಕಾರ್ಮಿಕರು ಪ್ರತೀ ದಿನ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ದಿನ ಬೆಳಗ್ಗೆ ನಗರದ ಪ್ರತೀ ಮನೆಗಳಿಗೆ ತೆರಳಿ ಎಂದಿನಂತೆ ಕಸ ಸಂಗ್ರಹ ನಡೆಯುತ್ತಿದೆ. ಪ್ರತೀ ದಿನ ಸಣ್ಣ ಗಾಡಿಗಳೆಲ್ಲ ಕರ್ತವ್ಯಕ್ಕೆ ಹೋಗುತ್ತಿದ್ದು, ಚಾಲಕರು ಕೂಡ ಕೆಲಸಕ್ಕೆ ಬರುತ್ತಿದ್ದಾರೆ. ಆದರೆ ಕಸ ಸಂಗ್ರಹ ಕಡಿಮೆ ಪರಿಣಾಮ 3ರಿಂದ 4 ದೊಡ್ಡ ಗಾಡಿಗಳು ನಿಂತಿವೆ. ಕೆಲವು ದಿನಗಳಿಂದ ಮನೆಗಳಲ್ಲಿ ಸಂಗ್ರಹವಾಗುವ ಪ್ರಮಾಣ ಏರಿಕೆಯಾಗಿದೆ ಎನ್ನುತ್ತಾರೆ ಸ್ವತ್ಛತ ಕಾರ್ಮಿಕರು.
ಕಸ ವಿಂಗಡಣೆಗೆ ಡೆಡ್‌ಲೈನ್ :
ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯವನ್ನು ವಿಂಗ ಡಿಸಿ ಮೂಲದಲ್ಲಿಯೇ ತ್ಯಾಜ್ಯ ಸಂಸ್ಕರಿಸುವ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಈಗಾಗಲೇ ಸೂಚನೆ ನೀಡಲಾಗಿದೆ. ಈ ಸಂಬಂಧ ಕೆಲವೊಂದು ಸಂಸ್ಥೆಗಳಲ್ಲಿ ಮಾತ್ರ ಘಟಕ ಸ್ಥಾಪಿಸಿ ತ್ಯಾಜ್ಯ ಸಂಸ್ಕರಣೆಗೊಳಿ ಸಲಾಗುತ್ತಿದೆ. ಉಳಿದಂತೆ ಬೃಹತ್ ತ್ಯಾಜ್ಯ ಉತ್ಪಾದಕರು ಪಾಲಿಕೆಯ ಸೂಚನೆ ಪಾಲನೆ ಮಾಡಿರುವುದಿಲ್ಲ. ಮೇ 15ರೊಳಗೆ ಕಡ್ಡಾಯ ವಾಗಿ ಅನುಷ್ಠಾನಗೊಳಿಸಬೇಕು ಎಂದು ಪಾಲಿಕೆ ಈಗಾಗಲೇ ಸಂಬಧಂಪಟ್ಟವರಿಗೆ ಸೂಚನೆ ನೀಡಿದೆ.
ಸಾಮಾನ್ಯ ದಿನಗಳಿಗೆ ಹೋಲಿಕೆ ಮಾಡಿದರೆ ಲಾಕ್‌ಡೌನ್ ಮಾದರಿ ಕರ್ಫ್ಯೂ ಹೇರಿಕೆಯಾದಾಗಿನಿಂದ ಮಂಗಳೂರಿನ ಕಸ ಸಂಗ್ರಹದಲ್ಲಿ ಇಳಿಕೆ ಕಂಡಿದೆ. ನಗರದ ಮಾಲ್‌ಗಳು, ಕೆಲವೊಂದು ಹೊಟೇಲ್‌ಗಳು, ವಾಣಿಜ್ಯ ಕಟ್ಟಡಗಳು ಬಂದ್ ಆಗಿದ್ದು, ಈ ಪರಿಣಾಮ ಕಸ ಸಂಗ್ರಹ ಕಡಿಮೆಯಾಗಿದೆ. ಸಾಮಾನ್ಯ ದಿನಗಳಲ್ಲಿ ಸುಮಾರು 320ರಿಂದ 340 ಟನ್ ಸಂಗ್ರಹವಾಗುತ್ತಿದ್ದು, ಸದ್ಯ ಸುಮಾರು ಸರಾಸರಿ 225 ಟನ್ ಸಂಗ್ರಹವಾಗುತ್ತಿದೆ. –ಪ್ರೇಮಾನಂದ ಶೆಟ್ಟಿ, ಪಾಲಿಕೆ ಮೇಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.