20ವರ್ಷಗಳ ಜೋಪಡಿ ವಾಸ್ತವ್ಯಕ್ಕೆ ಮುಕ್ತಿ 


Team Udayavani, Oct 6, 2018, 11:08 AM IST

6-october-4.gif

ನೆಲ್ಯಾಡಿ: ಕಳೆದ 20 ವರ್ಷಗಳಿಂದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬಡ ಕುಟುಂಬಕ್ಕೆ ಕೌಕ್ರಾಡಿ ಗ್ರಾ.ಪಂ.ಅಧ್ಯಕ್ಷರ ಹಾಗೂ ಮೊಗೇರ ಜನಾಂಗ ಜಾಗೃತಿ ಟ್ರಸ್ಟ್‌ ನ ಮುತುವರ್ಜಿಯಿಂದ ತಾತ್ಕಾಲಿಕ ಮನೆ ನಿರ್ಮಾಣವಾಗಿದ್ದು ಕುಟುಂಬ ಇಂದು ನಿರಾಳವಾಗಿದೆ.

ಕೌಕ್ರಾಡಿ ಗ್ರಾಮದ ಮೂಡುಬೈಲು ಎಂಬಲ್ಲಿ ಡಾಮರ್‌ ರಸ್ತೆಯಿಂದ ಅನತಿ ದೂರದಲ್ಲಿರುವ ಮುದರ ಎಂಬವರು ತಮ್ಮ ಹೆಂಡತಿ ಗೀತಾ ಹಾಗೂ 5 ಮಕ್ಕಳೊಂದಿಗೆ ಟಾರ್ಪಲ್‌ ಅಳವಡಿಸಿದ ಗುಡಿಸಲು ಮಾದರಿಯ ಮನೆಯಲ್ಲಿ 20 ವರ್ಷಗಳಿಗಿಂತಲೂ ಹಿಂದಿನಿಂದ ಜೀವನ ಸಾಗಿಸುತ್ತಿದ್ದರು. ಹೆಸರಿಗೆ ಒಂದಷ್ಟು ಜಮೀನು ಇದ್ದರೂ, ಟಾರ್ಪಲು ವಾಸವೇ ಇವರದ್ದಾಗಿತ್ತು.

ಮಾಹಿತಿಯ ಕೊರತೆ
ಕೂಲಿ ಮಾಡಿ ಸಿಕ್ಕಿದ ಹಣ ಸಂಸಾರ ನಿರ್ವಹಣೆಗೆ ಸಾಕಾಗುತ್ತಿರಲಿಲ್ಲ. ಗಾಳಿ ಮಳೆ ಬಂದರೆ ಗುಡಿಸಲಿನ ಮನೆಯಲ್ಲಿ ನಿಲ್ಲಲು ಸಾಧ್ಯವಿಲ್ಲದ ಈ ಬಡ ಕುಟುಂಬವು ಮಕ್ಕಳನ್ನು ಕರೆದುಕೊಂಡು ಪಕ್ಕದ ಮನೆಗೆ ಹೋಗಿ ಆಶ್ರಯ ಪಡೆದುಕೊಳ್ಳುತ್ತಿತ್ತು. ವಿದ್ಯಾಭ್ಯಾಸವೂ ಇಲ್ಲದ ಕಾಣದಿಂದಲೋ ಏನೋ ಸರಕಾರದ ಅನುದಾನಗಳ ಬಗ್ಗೆ ಮಾಹಿತಿಯ ಕೊರತೆ. ಹೀಗೆ ಇದರ ಸಲುವಾಗಿ ಸಾಕಷ್ಟು ಬಾರಿ ಗ್ರಾ.ಪಂ.ಗೆ ಹೋಗಿ ಬಂದರೂ ಮನೆ ನಿರ್ಮಾಣದ ಭರವಸೆ ಕಾರ್ಯಗತವಾಗಿಲ್ಲ ಎಂದು ಮುದರರು ಪತ್ರಿಕೆಯ ಮೊರೆ ಹೋಗಿದ್ದರು.

ಈ ಕುರಿತು ಉದಯವಾಣಿ ಸುದಿನದಲ್ಲಿ ಸಚಿತ್ರ ವರದಿಯೊಂದನ್ನು ಪ್ರಕಟಿಸಲಾಗಿತ್ತು. ಇವರ ಜತೆಗೆ ಮೊಗೇರ ಜನಾಂಗ ಜಾಗೃತಿ ಟ್ರಸ್ಟ್‌ ನ ಅಧ್ಯಕ್ಷ ಸದಾಶಿವ ನಿಡ್ಲೆ ತಮ್ಮ ಸಂಘದ ಸದಸ್ಯರೊಂದಿಗೆ ಸೇರಿಕೊಂಡು ತಾತ್ಕಾಲಿಕ ಮನೆ ನಿರ್ಮಾಣ ಕಾರ್ಯ ಪೂರೈಸಿದ್ದಾರೆ. ಈ ಶ್ರಮದಾನ ಕಾರ್ಯಕ್ರಮದಲ್ಲಿ ಟ್ರಸ್ಟ್‌ ನ ಸದಸ್ಯರಾದ ವಿಠಲ ಬೂಡುಜಾಲು, ಶ್ರೀಧರ ನಿಡ್ಲೆ, ಆನಂದ ಬೂಡುಜಾಲು, ಚೆಲುವಯ್ಯ ಬೆಳಾಲು, ಕೃಷ್ಣಪ್ಪ ಎಂ. ಕೆ., ಕೌಕ್ರಾಡಿ ಗ್ರಾ.ಪಂ. ಸದಸ್ಯೆ ಜಾನಕಿ ಸಹಕರಿಸುತ್ತಿದ್ದಾರೆ.

ಭರವಸೆ
ಉದಯವಾಣಿ ಸುದಿನ ವರದಿ ಪ್ರಕಟವಾದ ಬೆನ್ನಲ್ಲೇ ಸ್ಥಳಕ್ಕೆ ಭೇಟಿ ನೀಡಿದ ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಇಬ್ರಾಹಿಂ ಅವರು ನಾನೇ ನಿಂತು ಮನೆಯ ವ್ಯವಸ್ಥೆ ಮಾಡಿಸುವೆ ಎಂದು ಭರವಸೆ ನೀಡಿದ್ದರು. ಇದೀಗ ಪಂ.ವತಿಯಿಂದ ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಬೇಕಾದ ಸಾಮಗ್ರಿ ಗಳನ್ನು ಒದಗಿಸುವ ಮೂಲಕ ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಶ್ವತ ಮನೆ ನಿರ್ಮಾಣಕ್ಕೆ ಬೇಕಾದ ಅಗತ್ಯ ದಾಖಲೆ ಗಳನ್ನು ಕ್ರೋಢೀಕರಿಸಿ ಶಾಶ್ವತ ಮನೆ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದಾರೆ. 

ಟಾಪ್ ನ್ಯೂಸ್

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್‌ ಟಿ20: ಆಸ್ಟ್ರೇಲಿಯ 3-0 ಜಯಭೇರಿ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.