ರೆಂಜಿಲಾಡಿ ಆರೋಗ್ಯ ಉಪಕೇಂದ್ರ: ಕೂಡಿಬಾರದ ಕಟ್ಟಡ ಭಾಗ್ಯ

ಜಮೀನು ಕಾದಿರಿಸಿದ್ದರೂ ಅನುದಾನ ಇಲ್ಲ ; ಬಾಡಿಗೆ ಕಟ್ಟಡದಲ್ಲಿ ಆರೋಗ್ಯ ಸೇವೆ

Team Udayavani, Feb 15, 2020, 5:35 AM IST

1402SUB4-1

ಕಲ್ಲುಗುಡ್ಡೆ: ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಉದ್ದೇಶಿತ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಸ್ಥಳ ಕಾದಿರಿಸಲಾಗಿದ್ದರೂ ಇನ್ನೂ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಇರುವುದರಿಂದ ಉಪಕೇಂದ್ರ ಕಟ್ಟಡ ಕನಸಾಗಿಯೇ ಉಳಿದಿದೆ. ಪ್ರಸ್ತುತ ಬಾಡಿಗೆ ಕಟ್ಟಡದಲ್ಲಿ ಆರೋಗ್ಯ ಸೇವೆ ನೀಡಲಾಗುತ್ತಿದೆ.

ಹಲವಾರು
ವರ್ಷಗಳ ಆಗ್ರಹ
ರೆಂಜಿಲಾಡಿ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರ ಪ್ರಾರಂಭಿಸಬೇಕೆಂಬ ಗ್ರಾಮಸ್ಥರ ಹಲವಾರು ವರ್ಷಗಳ ಆಗ್ರಹದಂತೆ ಉಪಕೇಂದ್ರ ಮಂಜೂರಾಗಿತ್ತು. ಆರೋಗ್ಯ ಸಹಾಯಕಿಯೋರ್ವರನ್ನು ನೇಮಿಸಲಾಗಿದೆ. ಆದರೆ ಜಾಗದ ಸಮಸ್ಯೆಯಿಂದಾಗಿ ಅಂದಿನಿಂದ ಇಂದಿನವರೆಗೂ ಆರೋಗ್ಯ ಕೇಂದ್ರ ಕಟ್ಟಡ ಪ್ರಾರಂಭಕ್ಕೆ ವಿಘ್ನಗಳೇ ಎದುರಾಗುತ್ತಿತ್ತು.

ನೂಜಿಬಾಳ್ತಿಲ ಗ್ರಾಮಸಭೆಗಳಲ್ಲಿ ಪ್ರತೀ ಬಾರಿಯು ಆರೋಗ್ಯ ಉಪಕೇಂದ್ರದ ಬಗ್ಗೆ ಚರ್ಚೆಗಳು ನಡೆದು, ಗದ್ದಲಗಳೇ ನಡೆಯುತ್ತಿತ್ತು. ನಿರ್ಣಯವನ್ನೂ ಕೈಗೊಳ್ಳಲಾಗಿತ್ತು. ಅಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಆರೋಗ್ಯ ಕೇಂದ್ರ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನುತ್ತಿದ್ದಾರೆಯೇ ವಿನಾ ಕಾರ್ಯಗತಗೊಂಡಿಲ್ಲ ಎನ್ನುತ್ತಾರೆ ಗ್ರಾಮಸ್ಥರು.

ಮೂರು ವರ್ಷದಿಂದ ಕಾರ್ಯ ಸ್ತಬ್ಧ!
ಜಾಗದ ಸಮಸ್ಯೆಯಿಂದ ಕಟ್ಟಡ ಪ್ರಾರಂಭಕ್ಕೆ ಸಾಧ್ಯವಾಗದಿದ್ದ ಸಂದರ್ಭ ಸ್ಥಳೀಯ ಗ್ರಾ.ಪಂ. ಸದಸ್ಯರ ಮುತುವರ್ಜಿಯಿಂದ ಪಂಚಾಯತ್‌ ನೆರವಿನೊಂದಿಗೆ ರೆಂಜಿಲಾಡಿ ಗ್ರಾಮದ ಮೀನಾಡಿಯಲ್ಲಿ ಆರೋಗ್ಯ ಉಪಕೇಂದ್ರಕ್ಕೆ ಸರ್ವೆ ನಂಬರ್‌ 73ರಲ್ಲಿ 0.10 ಎಕ್ರೆ ಸ್ಥಳವನ್ನು ಖಾಸಗಿಯವರಿಂದ ಪಡೆದು ಕಂದಾಯ ಇಲಾಖೆಯಿಂದ ಸ್ಥಳ ಪರಿಶೀಲಿಸಿ, ಉಪಕೇಂದ್ರದ ಹೆಸರಿಗೆ ಪಹಣಿ ಪತ್ರ ಹಾಗೂ ನಕಾಶೆ ತಯಾರಿಸಿ ಗಡಿ ಗುರುತು ಮಾಡಿ ಜಮೀನಿಗೆ ಸೂಕ್ತ ಬೇಲಿ ಹಾಕಿ ಬಂದೋಬಸ್ತ್ ವ್ಯವಸ್ಥೆಯನ್ನು ಮೂರು ವರ್ಷಗಳ ಹಿಂದೆಯೇ ಮಾಡಲಾಗಿದ್ದರೂ ಉಪಕೇಂದ್ರ ಕಟ್ಟಡ ನಿರ್ಮಾಣಕ್ಕೆ ಅನುದಾನದ ಬಗ್ಗೆ ಯಾವುದೇ ಮಾಹಿತಿ ಆರೋಗ್ಯ ಇಲಾಖೆಯಿಂದ ಇನ್ನೂ ಬಂದಿಲ್ಲ.

ಪ್ರಸ್ತಾವನೆ ಸಲ್ಲಿಸಿದ್ದೇವೆ
ಆರೋಗ್ಯ ಉಪಕೇಂದ್ರಕ್ಕೆ ಕಟ್ಟಡದ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದೇವೆ. ಅನುದಾನ ಬಿಡುಗಡೆಗೊಂಡ ಬಳಿಕ ಮುಂದಿನ ಕಾರ್ಯಕ್ಕೆ ಚಾಲನೆ ನೀಡಲಿದ್ದೇವೆ.
– ಡಾ| ರಾಮಕೃಷ್ಣ
ದ.ಕ. ಜಿಲ್ಲಾ ಆರೋಗ್ಯಾಧಿಕಾರಿ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.