ಗುಂಡಿ ಬಿದ್ದ ರಸ್ತೆಗೆ ದುರಸ್ತಿ ಭಾಗ್ಯ!
ವಿಶೇಷ ವರದಿ
Team Udayavani, Apr 10, 2019, 6:00 AM IST
ಮಂಗಳೂರು ಅಂ.ವಿಮಾನ ನಿಲ್ದಾಣದಿಂದ ನಗರಕ್ಕೆ ಆಗಮಿಸುವ ಭಾಗದಲ್ಲಿ ರಸ್ತೆ ದುರಸ್ತಿ ನಡೆಸಲಾಗುತ್ತಿದೆ.
ಮಹಾನಗರ: ಪ್ರಧಾನಿ ನರೇಂದ್ರ ಮೋದಿ ಅವರು ಎ. 13ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ವ್ಯಾಪಕ ಸಿದ್ಧತೆ ನಡೆಸಿದ್ದು, ಮಂಗಳೂರು ಅಂ.ವಿಮಾನ ನಿಲ್ದಾಣದಿಂದ ನಗರದ ಕೇಂದ್ರ ಮೈದಾನದವರೆಗಿನ ರಸ್ತೆ ದುರಸ್ತಿಗೆ ದ.ಕ. ಜಿಲ್ಲಾಡಳಿತ ಮುಂದಾಗಿದೆ.
ವಿಮಾನ ನಿಲ್ದಾಣದಿಂದ ಪ್ರಧಾನಿಯವರು ಮಂಗಳೂರಿಗೆ ಕಾರಿನಲ್ಲಿ ಆಗಮಿ ಸುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿರುವ ಹೊಂಡ ಗುಂಡಿಗಳಿಗೆ ಇದೀಗ ಮುಕ್ತಿ ನೀಡ ಲಾಗುತ್ತಿದೆ. ಮಂಗಳೂರು ಅಂ.ವಿಮಾನ ನಿಲ್ದಾಣದಿಂದ ನಿರ್ಗಮನ ರಸ್ತೆಯಿಂದ ಮುಖ್ಯರಸ್ತೆಗೆ ಸಂಪರ್ಕಿಸುವ ಭಾಗದ ಸುಮಾರು 1 ಕಿ.ಮೀ. ವ್ಯಾಪ್ತಿಯಲ್ಲಿ ಹೊಂಡ ತುಂಬಿರುವ ಕಾರಣ ಇಲ್ಲಿ ದುರಸ್ತಿ ನಡೆಸಲಾಗುತ್ತಿದೆ. ಎರಡು ದಿನಗಳಿಂದ ಲೋಕೋಪಯೋಗಿ ಇಲಾಖೆಯಿಂದ ಡಾಮರು ಕಾಮಗಾರಿ ನಡೆಸಲಾಗುತ್ತಿದೆ. ಜತೆಗೆ, ಮಂಗಳೂರುವರೆಗಿನ ರಸ್ತೆಯಲ್ಲಿ ಹೊಂಡ ಗುಂಡಿ ಇರುವ ಭಾಗದಲ್ಲಿ ತೇಪೆ ಹಚ್ಚಲಾಗುತ್ತಿದೆ. ಭದ್ರತೆಯ ದೃಷ್ಟಿಯಿಂದ ದುರಸ್ತಿ ನಡೆಸಲಾಗುತ್ತಿದೆ. ಬುಧವಾರ, ಗುರುವಾರ ಈ ಕಾಮಗಾರಿ ನಡೆಯಲಿದೆ.
ರೈಲಿನಲ್ಲಿ ಬರಲಿವೆ ಕಾರುಗಳು!
ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದ ಮೂಲಕ ಎ. 13ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಅತಿ ಭದ್ರತೆಯ ಕಾರಿನ ಮೂಲಕ ಮಂಗಳೂರಿನ ಕೇಂದ್ರ ಮೈದಾನಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಧಾನಿ ಅವರು ಆಗಮಿಸುವ ಕಾರನ್ನು ರೈಲಿನಲ್ಲಿ ಮಂಗಳೂರಿಗೆ ತರಲಾಗುತ್ತದೆ. ಈ ಹಿಂದೆ ಒಮ್ಮೆ ವಿಮಾನದ ಮೂಲಕ ತರಲಾಗಿತ್ತು. ಉಳಿದ ಸಂದರ್ಭ ರೈಲಿನ ಮುಖೇನವೇ ತರಿಸಲಾಗಿತ್ತು.
ಈ ಬಾರಿ ಕೂಡ ರೈಲಿನಲ್ಲಿಯೇ ಎ. 11 ಅಥವಾ 12ರಂದು ಮಂಗಳೂರು ರೈಲು ನಿಲ್ದಾಣಕ್ಕೆ ತರಲು ನಿರ್ಧರಿಸಲಾಗಿದೆ. ಬಳಿಕ ಕಾರು ಗಳನ್ನು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಇರಿಸಲಾಗುತ್ತದೆ.
2 ಬಾರಿ ರಿಹರ್ಸಲ್
ವಿಮಾನ ನಿಲ್ದಾಣದಿಂದ ಕೇಂದ್ರ ಮೈದಾನದವರೆಗೆ ಅವರು ಸಾಗಿಬರುವ ರಸ್ತೆಯಲ್ಲಿ ಪೂರ್ಣ ಬಂದೋಬಸ್ತ್ ಮಾಡಲಾಗುತ್ತದೆ. ಭದ್ರತೆಯ ಹಿನ್ನೆಲೆ ಯಲ್ಲಿ ಪ್ರಧಾನಿ ಆಗಮನದ ಮುನ್ನಾ ದಿನ ಒಂದು ಬಾರಿ ರಿಹರ್ಸಲ್ ಮಾಡ ಲಾಗುತ್ತದೆ. ವಿಮಾನ ನಿಲ್ದಾಣದಿಂದ ಕೇಂದ್ರ ಮೈದಾನದವರೆಗೆ ಪ್ರಧಾನಿ ಸಂಚರಿಸುವ ಕಾರು ಹಾಗೂ ಬೆಂಗಾವಲು ವಾಹನಗಳು ಸಂಚರಿಸಲಿದೆ. ಎ. 13 ರಂದು ಕೂಡ ವಿಶೇಷ ವಿಮಾನ ಮಂಗಳೂರಿಗೆ ಬರುವ ಮುನ್ನವೂ ರಿಹಸಲ್ ನಡೆಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ವಿಶೇಷ ಭದ್ರತಾದಳ ಮಂಗಳೂರಿಗೆ
ಎ.13ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಪ್ರಧಾನಿ ಭದ್ರತೆ ಉಸ್ತುವಾರಿ ವಹಿಸಿರುವ ವಿಶೇಷ ಭದ್ರತಾ ದಳದ ಅಧಿಕಾರಿಗಳು ಪೂರ್ವಭಾವಿಯಾಗಿ ಎ. 10ರಂದು ಹೊಸದಿಲ್ಲಿಯಿಂದ ಮಂಗಳೂರಿಗೆ ಆಗಮಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾ ನ ನಿಲ್ದಾಣ, ನಗರದ ಕೇಂದ್ರ ಮೈದಾನಕ್ಕೆ ಆಗಮಿಸುವ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭದ್ರತೆ ದೃಷ್ಟಿಯಿಂದ ಕ್ರಮ
ಪ್ರಧಾನಿ ಮೋದಿ ಅವರ ಕಾರು ಸಂಚರಿಸುವ ಹಿನ್ನೆಲೆಯಲ್ಲಿ ಹೊಂಡ ಗುಂಡಿಗಳನ್ನು ದುರಸ್ತಿ ಮಾಡಲು ಭದ್ರತೆಯ ದೃಷ್ಟಿಯಿಂದ ಸೂಚಿಸಲಾಗಿದೆ. ಇದರಂತೆ ವಿಮಾನ ನಿಲ್ದಾಣ ರಸ್ತೆಯಿಂದ ಮಂಗಳೂರುವರೆಗಿನ ರಸ್ತೆಯಲ್ಲಿ ಕಾಮಗಾರಿ ನಡೆಸಲಾಗುತ್ತಿದೆ.
ಶಶಿಕಾಂತ್ ಸೆಂಥಿಲ್, ಜಿಲ್ಲಾಧಿಕಾರಿ, ದ.ಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.