ದೋಹಾ ಪ್ರಯಾಣಿಕರಿಗೆ ಬದಲಿ ವಿಮಾನ ವ್ಯವಸ್ಥೆ
Team Udayavani, Jun 30, 2018, 8:36 AM IST
ಮಂಗಳೂರು: ತಾಂತ್ರಿಕ ದೋಷದಿಂದಾಗಿ ಗುರುವಾರ ರದ್ದುಗೊಂಡಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ ಮಂಗಳೂರಿನಿಂದ ದೋಹಾಕ್ಕೆ ಪ್ರಯಾಣಿಸಬೇಕಾಗಿದ್ದ ಪ್ರಯಾಣಿಕರನ್ನು ಶುಕ್ರವಾರ ಬದಲಿ ವಿಮಾನದ ಮೂಲಕ ಕಳುಹಿಸಿ ಕೊಡಲಾಗಿದೆ.
ತಾಂತ್ರಿಕ ದೋಷಕ್ಕೆ ಒಳಗಾಗಿದ್ದ ವಿಮಾನವನ್ನು ಗುರುವಾರ ರಾತ್ರಿಯೇ ದುರಸ್ತಿಗೊಳಿಸಲಾಗಿದ್ದು, ಆ ಬಳಿಕ ಅದು ಪ್ರಯಾಣಿಕರಿಲ್ಲದೆ ಮುಂಬಯಿ ವಿಮಾನ ನಿಲ್ದಾಣಕ್ಕೆ ತೆರಳಿದೆ. ಮಂಗಳೂರಿನಿಂದ ದೋಹಾಕ್ಕೆ ತೆರಳಬೇಕಾಗಿದ್ದ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷದಿಂದಾಗಿ ಗುರುವಾರ ರದ್ದುಗೊಂಡಿತ್ತು. ಆ ದಿನ ಸಂಜೆ 5.35ಕ್ಕೆ ಈ ವಿಮಾನವು ಮಂಗಳೂರಿನಿಂದ ಹೊರಡಬೇಕಾಗಿತ್ತು. ಆದರೆ ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದ ಪರಿಣಾಮ ವಿಮಾನದ ಹಾರಾಟವನ್ನೇ ರದ್ದುಗೊಳಿಸಿ, ಆ ವಿಮಾನದಲ್ಲಿ ಪ್ರಯಾಣಿಸಬೇಕಾಗಿದ್ದ ಎಲ್ಲ 140 ಮಂದಿ ಪ್ರಯಾಣಿಕರಿಗೆ ನಗರದ ಹೊಟೇಲ್‌ವೊಂದರಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಈ ಪ್ರಯಾಣಿಕರನ್ನು ಶುಕ್ರವಾರ ಬೆಳಗ್ಗೆ ಕೊಚ್ಚಿಯಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಮತ್ತೂಂದು ವಿಮಾನದಲ್ಲಿ ಮುಂಜಾನೆ 5 ಗಂಟೆಗೆ ದೋಹಾಕ್ಕೆ ಕಳುಹಿಸಿ ಕೊಡಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.