Republic Day; ಸಂವಿಧಾನವೇ ಧ್ವನಿರಹಿತರ ಬದುಕಿನ ಚೇತನ: ಖಾದರ್
ಆಳ್ವಾಸ್‌ನಲ್ಲಿ 30,000 ಮಂದಿಯ ಉಪಸ್ಥಿತಿಯಲ್ಲಿ ಗಣರಾಜ್ಯೋತ್ಸವ
Team Udayavani, Jan 27, 2024, 12:41 AM IST
ಮೂಡುಬಿದಿರೆ: ರೈತರು, ಶೋಷಿತರು, ಬಡವರು ಸೇರಿದಂತೆ ದೇಶದ ಧ್ವನಿರಹಿತರೆಲ್ಲ ಇಷ್ಟೊಂದು ಧೈರ್ಯದಿಂದ ಇಲ್ಲಿ ಜೀವಿಸಲು ಕಾರಣವೇ ಡಾ| ಬಿ.ಆರ್. ಅಂಬೇಡ್ಕರ್ ಪ್ರಣೀತ ಸಂವಿಧಾನ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯಪಟ್ಟರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯಲ್ಲಿ ನಡೆದ 75ನೇ ಗಣರಾಜ್ಯೋತ್ಸವ ಸಮಾರಂಭ ದಲ್ಲಿ ರಾಷ್ಟ್ರಧ್ವಜಾರೋಹಣಗೈದು ಸಂದೇಶ ನೀಡಿದ ಅವರು, ಗಾಂಧೀಜಿ ನೇತೃತ್ವದಲ್ಲಿ ಸ್ವಾತಂತ್ರ್ಯ ಲಭಿಸಿದರೆ ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ದೇಶದ ಏಕತೆಯನ್ನು ಉಳಿಸಿದೆ; ನಾವೆಲ್ಲರೂ ಈ ಸಂವಿಧಾನದ ಇತಿಹಾಸ, ಅರ್ಥ ತಿಳಿದುಕೊಳ್ಳಬೇಕು ಎಂದು ಕರೆ ನೀಡಿದರು.
ಆಳ್ವಾಸ್ ಮಿನಿ ಭಾರತ
ಕರ್ನಾಟಕದಲ್ಲಿ ಭಾರತದ ಸಂಸ್ಕೃತಿಯ ಸಾರವನ್ನು ಕಾಣಬಹುದಾದರೆ, ಆಳ್ವಾಸ್‌ನಲ್ಲಿ ಕರ್ನಾಟಕದ ಸಾಂಸ್ಕೃತಿಕ ಸಾರ ಗೋಚರವಾಗುತ್ತಿದೆ. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ. ಡಾ| ಅಳ್ವರ ದೇಶಪ್ರೇಮ ಎಲ್ಲರನ್ನೂ ಒಂದಾಗಿಸಿದೆ ಎಂದರು. ಆಳ್ವಾಸ್ ಸಂಸ್ಥೆಗಳ ಪರಿವಾರ, ಸಾರ್ವಜನಿಕರು ಸೇರಿದಂತೆ ಮೂವತ್ತು ಸಾವಿರಕ್ಕೂ ಅಧಿಕ ಮಂದಿ ಈ ದಾಖಲೆಯ ಗಣರಾಜ್ಯೋತ್ಸವಕ್ಕೆ ಸಾಕ್ಷಿಯಾದರು.
ತ್ರಿವರ್ಣದಲ್ಲಿ ಮೂಡಿದ ಆಳ್ವಾಸ್
ಪಕ್ಷಿ ನೋಟದಲ್ಲಿ ಕೇಸರಿ, ಬಿಳಿ, ಹಸುರು ವರ್ಣ, ಆಗಸಕ್ಕೆ ಚಿಮ್ಮಿದ ತ್ರಿವರ್ಣ ಚಿತ್ತಾರದ ಸಂಯೋಜನೆ, ಉಕ್ಕಿ ಬಂದ ದೇಶಪ್ರೇಮದ ಭಕ್ತಿ, ಮಾಜಿ ಸೈನಿಕರಿಂದ ಧ್ವಜಕ್ಕೆ ವಂದನೆ, ಸಭಾ ಮಧ್ಯೆ ತ್ರಿವರ್ಣದಲ್ಲಿ ಮೂಡಿದ ಆಳ್ವಾಸ್ ಎಲ್ಲವೂ ಈ ಗಣರಾಜ್ಯೋತ್ಸವದ ಸಂಭ್ರಮ ಸಾರಿದವು.
ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಇಂದ್ರೇಶ್ ಗೌಡ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಆ ಬಳಿಕ ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಹರ್ಷಾರೆಡ್ಡಿ ನೇತೃತ್ವದಲ್ಲಿ ಗೌರವ ವಂದನೆ ನೀಡಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಮಾಜಿ ಸಚಿವ ನಾಗರಾಜ ಶೆಟ್ಟಿ, ಪಿ.ಜಿ.ಆರ್. ಸಿಂಧ್ಯಾ, ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೇಗೌಡ 250ಕ್ಕೂ ಅಧಿಕ ಮಾಜಿ ಸೈನಿಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.