ಪರಿಸರಕ್ಕೆ ಹಾನಿಯಾಗುವ ಪಟಾಕಿ ನಿಷೇಧಕ್ಕೆ ಮನವಿ
Team Udayavani, Oct 15, 2017, 11:15 AM IST
ಮಹಾನಗರ: ಪರಿಸರ ಮಾಲಿನ್ಯವನ್ನುಂಟು ಮಾಡುವ ಹಾಗೂ ಹಿಂದೂ ದೇವತೆಗಳು, ರಾಷ್ಟ್ರ ಪುರುಷರನ್ನು ಅಪಮಾನ ಮಾಡುವ ಪಟಾಕಿಗಳಿಗೆ ನಿಷೇಧ ಹೇರಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಚುನಾವಣಾ ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಕಮಿಷನರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
ದೀಪಾವಳಿಯ ಸಮಯದಲ್ಲಿ ಪಟಾಕಿಗಳ ಹೊದಿಕೆಗಳ ಮೇಲೆ ಶ್ರೀ ಲಕ್ಷ್ಮೀ, ಶ್ರೀ ಕೃಷ್ಣ ಮುಂತಾದ ದೇವತೆಗಳು, ರಾಷ್ಟ್ರಪುರುಷರ ಚಿತ್ರಗಳನ್ನು ಮುದ್ರಿಸಿ ಅಪಮಾನ ಮಾಡಲಾಗುತ್ತದೆ. ಜತೆಗೆ ಉತ್ಸವದ ಹೆಸರಿನಲ್ಲಿ ಪರಿಸರಕ್ಕೆ ಮಾಲಿನ್ಯ ಮಾಡಲಾಗುತ್ತಿದೆ. ಈಗಾಗಲೇ ಸರ್ವೋಚ್ಚ ನ್ಯಾಯಾಲಯವು ಹೊಸದಿಲ್ಲಿಯಲ್ಲಿ, ಮುಂಬಯಿ ಉಚ್ಚ ನ್ಯಾಯಾಲಯವು ಮುಂಬಯಿ ಜನವಸತಿ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಹೀಗಾಗಿ ಎಲ್ಲ ಕಡೆಯೂ ಪಟಾಕಿ ಸಿಡಿಸುವುದನ್ನು ನಿಷೇಧ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಲೋಕೇಶ್ ಕುತ್ತಾರ್, ಸುಮಾ ವೆಂಕಟೇಶ್, ಅರವಿಂದ, ಉಪೇಂದ್ರ ಆಚಾರ್ಯ, ಪ್ರಭಾಕರ್ ಪಡಿಯಾರ್ ಮೊದಲಾದವರು ನಿಯೋಗದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.