ಪ್ಲಾಸ್ಟಿಕ್ ಧ್ವಜ ಬಳಕೆಯ ಮೇಲೆ ನಿರ್ಬಂಧ ಹೇರಲು ಮನವಿ
Team Udayavani, Jan 17, 2018, 11:39 AM IST
ಮಹಾನಗರ: ಪ್ರಜಾಪ್ರಭುತ್ವ ದಿನದಂದು ರಾಷ್ಟ್ರ ಧ್ವಜಕ್ಕೆ ಆಗುವ ಅಪಮಾನ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಅಪರ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದೆ.
ರಾಷ್ಟ್ರಧ್ವಜವು ದೇಶಭಕ್ತಿಯ ಪ್ರತೀಕವಾಗಿದ್ದು ಸಮಸ್ತ ಭಾರತೀಯರಿಗೆ ಪೂಜನೀಯವಾಗಿದೆ. ಆದರೆ ಇದರ ಬಳಕೆಯ ಮೇಲೆ ನಿಯಂತ್ರಣವಿಲ್ಲ. ಇದರಿಂದ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪ್ಲಾಸ್ಟಿಕ್ ಅಥವಾ ಕಾಗದದ ಧ್ವಜಗಳು ರಸ್ತೆಯ ಮೇಲೆ, ಸಣ್ಣ ಅಂಗಡಿಗಳಲ್ಲಿ ಮಾರಾಟಕ್ಕೆ ಕಂಡು ಬರುತ್ತವೆ ಎಂದು ಹಿಂದೂ ಜನಜಾಗೃತಿ ಸಮಿತಿ ಸಮನ್ವಯಕ ಚಂದ್ರ ಮೊಗೇರ ಹೇಳಿದರು.
ಪರಿಸರ ಮಾಲಿನ್ಯ ಮತ್ತು ರಾಷ್ಟ್ರಧ್ವಜದ ವಿಡಂಬನೆಯನ್ನು ತಡೆಗಟ್ಟಲು ಪ್ಲಾಸ್ಟಿಕ್ ಧ್ವಜಗಳ ಮೇಲೆ ನಿರ್ಬಂಧ ಹೇರುವುದು ಅವಶ್ಯಕವಾಗಿದೆ ಎಂದು ಮನವಿ ಮಾಡಿದ್ದಾರೆ. ಮನವಿ ನೀಡುವ ವೇಳೆ ಸಮಿತಿಯ ಚಂದ್ರ ಮೊಗೇರ, ಪ್ರಭಾಕರ್ ನಾಯ್ಕ, ಮಾಂಗಿರಾಮ್, ಯೋಗೀಶ್, ರಾಜೇಶ್ ಸೌ. ಪ್ರಮೀಳ, ತುಳುನಾಡ ರಕ್ಷಣಾ ಸಮಿತಿಯ ಜ್ಯೋತಿ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.