ಮದ್ಯದಂಗಡಿಗೆ ಅನುಮತಿ ನೀಡದಂತೆ ಮನವಿ
Team Udayavani, Aug 3, 2017, 8:00 AM IST
ಕಡಬ: ಬಿಳಿನೆಲೆ ಗ್ರಾ.ಪಂ.ವ್ಯಾಪ್ತಿಯಲ್ಲಿ ಹೊಸದಾಗಿ ಮದ್ಯದಂಗಡಿ ತೆರೆಯಲು ಅವಕಾಶ ನೀಡಬಾರದೆಂದು ಆಗ್ರಹಿಸಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಳಿನೆಲೆ ವಲಯದ ಒಕ್ಕೂಟದ ಸದಸ್ಯರು ಮಂಗಳವಾರ ಬಿಳಿನೆಲೆ ಗ್ರಾ.ಪಂ. ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ಮನವಿ ಸಲ್ಲಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಮೂಲಕ ಪ್ರತಿ ಗ್ರಾಮಗಳಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಮೂಡಿಸುವುದರೊಂದಿಗೆ ಮದ್ಯವರ್ಜನ ಶಿಬಿರಗಳನ್ನು ನಡೆಸಿ ಪಾನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಪಣ ತೊಟ್ಟಿದ್ದಾರೆ. ಇಡೀ ಸಮಾಜವೇ ಅವರೊಂದಿಗೆ ಕೈಜೋಡಿಸಿದೆ. ಬಿಳಿನೆಲೆ ಗ್ರಾಮದಲ್ಲಿಯೂ ಈ ನಿಟ್ಟಿನಲ್ಲಿ ಮದ್ಯವರ್ಜನ ಶಿಬಿರ, ಸ್ವಾಸ್ಥÂ ಸಂಕಲ್ಪ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಗ್ರಾಮದ ಜನರ ನೆರವಿನಿಂದ ನಡೆಸಲಾಗಿದೆ. ಇದೀಗ ನೆಟ್ಟಣದಲ್ಲಿ ಮುಚ್ಚುಗಡೆಯಾಗಿರುವ ಮದ್ಯದಂಗಡಿಯನ್ನು ಬಿಳಿನೆಲೆ ಗ್ರಾಮದ ಮೇರುಂಜಿಯಲ್ಲಿ ತೆರೆಯಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸುದ್ದಿ ಹರಡಿದೆ. ಗ್ರಾಮದ ಹಿತ ದೃಷ್ಟಿಯಿಂದ ಈ ವ್ಯಾಪ್ತಿಯಲ್ಲಿ ಯಾವುದೇ ಹೊಸ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಒಕ್ಕೂಟದ ಸದಸ್ಯರು ಹಾಗೂ ಸಾರ್ವಜನಿಕರು ಗ್ರಾ.ಪಂ. ಎದುರು ನಡೆದ ಸಭೆಯಲ್ಲಿ ಆಗ್ರಹಿಸಿದರು.
ಜನಜಾಗೃತಿ ವೇದಿಕೆ ಮಾಜಿ ವಲಯಾಧ್ಯಕ್ಷ, ತಾ.ಪಂ. ಸದಸ್ಯ ಗಣೇಶ್ ಕೈಕುರೆ, ಬಿಳಿನೆಲೆ ಒಕ್ಕೂಟಗಳ ವಲಯಾಧ್ಯಕ್ಷ ಭವಾನಿಶಂಕರ್, ಗ್ರಾಮಾಭಿವೃದ್ಧಿ ಯೋಜನೆಯ ಬಿಳಿನೆಲೆ ವಲಯ ಮೇಲ್ವಿಚಾರಕ ರಾಜು ಗೌಡ, ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ಗುಡ್ಡಪ್ಪ ಗೌಡ ಅಮೈ, ಐತ್ತೂರು ಒಕ್ಕೂಟದ ಅಧ್ಯಕ್ಷ ಶೇಷಪ್ಪ ಗೌಡ, ಕೈಕಂಬ ಒಕ್ಕೂಟದ ಅಧ್ಯಕ್ಷ ನಾಗರಾಜ್ ಎ., ಕೊಂಬಾರು ಒಕ್ಕೂಟದ ಅಧ್ಯಕ್ಷ ಲಿಂಗಪ್ಪ ಗೌಡ, ಸೇವಾ ಪ್ರತಿನಿಧಿಗಳಾದ ಹರಿಣಿ ಬಿಳಿನೆಲೆ-ಐತ್ತೂರು, ಪರಮೇಶ್ವರ ಕೊಂಬಾರು, ವಿನೋದ್ ಕೆ.ಸಿ. ಕೈಕಂಬ ಮುಂತಾದವರು ಉಪಸ್ಥಿತರಿದ್ದರು. ಬಿಳಿನೆಲೆ, ಐತ್ತೂರು, ಕೈಕಂಬ ಹಾಗೂ ಕೊಂಬಾರು ಒಕ್ಕೂಟದ ವತಿಯಿಂದಲೂ ಪ್ರತ್ಯೇಕ ಮನವಿ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.