ಬಿಎಸ್ಸೆನ್ನೆಲ್ ಗುತ್ತಿಗೆ ನೌಕರರಿಂದ ಸಚಿವರಿಗೆ ಮನವಿ
Team Udayavani, Dec 25, 2018, 11:31 AM IST
ಸುಬ್ರಹ್ಮಣ್ಯ : ಸರಕಾರಿ ಸ್ವಾಮ್ಯದ ಸಂಸ್ಥೆಯ ಕಚೇರಿ ಮತ್ತು ದೂರವಾಣಿ ಕೇಂದ್ರದಲ್ಲಿ ಗುತ್ತಿಗೆ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರಿಗೆ ಕಳೆದ ಮೂರು ತಿಂಗಳಿಂದ ಸಂಸ್ಥೆ ವೇತನ ಪಾವತಿಸಿಲ್ಲ. ಈ ಕುರಿತು ಈ ಸಂಸ್ಥೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರನ್ನು ರವಿವಾರ ಭೇಟಿಯಾಗಿ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಸಲ್ಲಿಸಿದರು.
ಸುದೀರ್ಘ ಅವಧಿಯಿಂದ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ಇದುವರೆಗೆ ಮೂಲ ಸೌಕರ್ಯ ವಂಚಿತರಾಗಿ ಸೇವೆ ನೀಡಿರುವ ನಮಗೆ ಸಂಸ್ಥೆ ಕಾನೂನು ಬದ್ಧ ಸವಲತ್ತು ಮತ್ತು ಯಾವುದೇ ಉದ್ಯೋಗ ಭದ್ರತೆ ನೀಡಿಲ್ಲ. ನೌಕರರನ್ನು ಪದೇ ಪದೆ ಕೆಲಸದಿಂದ ವಜಾಗೊಳಿಸುತ್ತಿದ್ದಾರೆ. ಇದೀಗ ಕಳೆದ ಮೂರು ತಿಂಗಳಿಂದ ನಮಗೆ ಮಾಸಿಕ ವೇತನ ನೀಡಿಲ್ಲ. ಈ ಕುರಿತು ಸಂಬಂದಿಸಿದ ಗುತ್ತಿಗೆದಾರ ಮತ್ತು ದುಡಿಯುತ್ತಿರುವ ಸಂಸ್ಥೆಯ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದರೂ ಯಾವುದೇ ಸ್ಪಂದನೆ ದೊರಕಿಲ್ಲ. ಇದೀಗ ಮೂರು ತಿಂಗಳ ವೇತನ ಸಿಗದೆ ನಮ್ಮ ಜೀವನ ಅತ್ಯಂತ ಶೋಚನೀಯ ಸ್ಥಿತಿಯಲ್ಲಿದೆ. ಜತೆಗೆ ನಮ್ಮನ್ನೆ ನಂಬಿ ಜೀವನ ನಡೆಸುತ್ತಿರುವ ನಮ್ಮ ಅವಲಂಬಿತ ಕುಟುಂಬ ಸದಸ್ಯರು ಉಪವಾಸ ಬೀಳುವಂತಾಗಿದೆ. ಈ ಕುರಿತು ತಾವು ಸಂಬಂಧಿಸಿದ ಅಧಿಕಾರಿ ಗಳಿಗೆ ಮತ್ತು ಸರಕಾರ ಮಟ್ಟದಲ್ಲಿ ನಮಗೆ ನ್ಯಾಯ ಒದಗಿಸುವಂತೆ ಸಚಿವರ ಬಳಿ ಮನವಿ ಮಾಡಿದರು.
ಭರವಸೆ
ಮನವಿ ಮತ್ತು ಅಹವಾಲು ಸ್ವೀಕರಿಸಿದ ಕೇಂದ್ರ ಸಚಿವರು ನೌಕರರ ಸಮಸ್ಯೆ ಕುರಿತು ಅರಿವಿದೆ. ಸಂಬಂಧಿಸಿದ ಅಧಿಕಾರಿಗಳ ಬಳಿ ಮಾತನಾಡಿ, ಶೀಘ್ರದಲ್ಲಿ ಬಾಕಿ ವೇತನ ಪಾವತಿಗೆ ಕ್ರಮ ಜರಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ನೌಕರರಿಗೆ ಭರವಸೆ ನೀಡಿದರು.
ದಕ್ಷಿಣ ಕನ್ನಡ ಟೆಲಿಕಾಂ ಸಲಹಾ ಸಮಿತಿ ಸದಸ್ಯ ವೆಂಕಟ್ ದಂಬೆಕೋಡಿ, ಗುತ್ತಿಗೆ ನೌಕರರಾದ ಉದಯಕುಮಾರ ಕೊಲ್ಯ, ಕಿಶೋರ್ ಮಡಪ್ಪಾಡಿ, ತೀರ್ಥ ರಾಮ ಬಳ್ಳಡ್ಕ, ಸುಬ್ಬಯ್ಯ ಎ.ಕೆ., ನಿತ್ಯಾನಂದ ಬಿ. ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.