ಅಮೂಲ್ಯ ಬಿಂಬಗಳ ರಕ್ಷಣೆ ಅಗತ್ಯ: ಡಾ| ಹೆಗ್ಗಡೆ

Team Udayavani, Oct 15, 2017, 9:34 AM IST

15–13.jpg

ಮೂಡಬಿದಿರೆ: ಜೈನಮಠದ ಆಡಳಿತಕ್ಕೊಳಪಟ್ಟ ಗುರುಗಳ ಬಸದಿಯ ಆವರಣದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಡೆಯಲಿರುವ “ಸಿದ್ಧಾಂತ ರತ್ನಬಿಂಬ ಮಂದಿರ’ದ ಪುನರ್‌ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ
ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ರಮಾರಾಣಿ ಶೋಧ ಸಂಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, “ದೇವರಿಗೆ ಭದ್ರತೆಯ ಆವಶ್ಯಕತೆ ಇರುವುದಿಲ್ಲ. ಆದರೆ ರತ್ನಬಿಂಬಗಳು ಅಮೂಲ್ಯವಾಗಿವೆ. ಅವುಗಳೊಂದಿಗೆ ನಮ್ಮ ಧಾರ್ಮಿಕ ಶ್ರದ್ಧೆ ಅವಿನಾಭಾವವಾಗಿದೆ. ಮುಂದಿನ ತಲೆಮಾರಿಗೆ ಧಾರ್ಮಿಕ ಶ್ರದ್ಧೆ ದಾಟಿಸಬೇಕಾಗಿರುವುದರಿಂದ ನಾವು ಈ ಬಿಂಬಗಳನ್ನು ರಕ್ಷಿಸಬೇಕು. ಎಲ್ಲರೂ ಈ ಮಹತ್ಕಾರ್ಯದಲ್ಲಿ ಸಮರ್ಪಣ ಭಾವದಿಂದ ತೊಡಗಿಸಿಕೊಳ್ಳಬೇಕು’ ಎಂದರು.

ಮೂರು ತಿಂಗಳಲ್ಲಿ ಸಿದ್ಧ
ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾ ಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ ಜೈನ ಧರ್ಮೀಯರ ವಿಶೇಷ ಪ್ರಾರ್ಥನೆ, ಸರ್ವ ಧರ್ಮೀಯರ ಸಹಕಾರದಿಂದ ಸಿದ್ಧಾಂತ ಬಿಂಬಗಳು ಮರಳಿ ಇಲ್ಲಿಗೆ ಬರುವಂತಾದದ್ದು ನಮ್ಮೆಲ್ಲರ ಪುಣ್ಯ. ಮೂರು ತಿಂಗಳಲ್ಲಿ ಅತ್ಯಾಧುನಿಕ ಸಿದ್ಧಾಂತ ಮಂದಿರವು ಸಿದ್ಧಗೊಳ್ಳಲಿದೆ ‘ ಎಂದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಕೆ. ಅಭಯಚಂದ್ರ  ಮಾತನಾಡಿ, ಸಾವಿರ ಕಂಬ ಬಸದಿಯ ಆವರಣಕ್ಕೆ ಶಿಲಾಹಾಸು, ಅಭಿವೃದ್ಧಿ ಯೋಜನೆಗೆ ಒಂದು ಕೋಟಿ ವಿನಿಯೋಗಕ್ಕೆ ಹಸಿರು ನಿಶಾನೆ ಸಿಕ್ಕಿದೆ. ಶೌಚಾಲಯ ಇತ್ಯಾದಿ ಮೂಲಸೌಕರ್ಯಗಳಿಗೆ 50 ಲಕ್ಷ ರೂ., ಕೊಂಡೆ ಬೀದಿಯ ಕಾಂಕ್ರಿಟೀಕರಣಕ್ಕೆ 15 ಲಕ್ಷ ಒದಗಿಸಲಾಗುವುದು’ ಎಂದರು. ಅಭಯಚಂದ್ರ ಹಾಗೂ ಕಾರ್ಕಳದ ಹಿರಿಯ ವಕೀಲ ಎಂ.ಕೆ. ವಿಜಯ ಕುಮಾರ್‌ ತಲಾ 1 ಲಕ್ಷ ದ ದಾನವನ್ನು ಪ್ರಕಟಿಸಿದರು.

ಶಿರ್ತಾಡಿ ಶಿಮುಂಜೆಗುತ್ತು ಸಂಪತ್‌ ಸಾಮ್ರಾಜ್ಯ, ವಿ.ಕೆ. ಜೈನ್‌ ಪುತ್ತೂರು, ಚೌಟರ ಅರಮನೆ ಎಂ. ವೀರೇಂದ್ರ, ಬಸದಿಗಳ ಮೊಕ್ತೇಸರರಾದ ಪಟ್ನಶೆಟ್ಟಿ ಸುಧೇಶ್‌ ಕುಮಾರ್‌, ದಿನೇಶ್‌ ಆನಡ್ಕ , ಮಠದ ವ್ಯವಸ್ಥಾಪಕ ಸಂಜಯಂತ ಕುಮಾರ್‌ ಉಪಸ್ಥಿತರಿದ್ದರು. ಶಿಲಾನ್ಯಾಸ ಸಂದರ್ಭ ಧನಕೀರ್ತಿ ಬಲಿಪ, ವಜ್ರನಾಭ ಚೌಟ ನಲ್ಲೂರು, ನೇಮಿರಾಜ್‌, ಶ್ರೀಪಾಲ್‌ ಎಸ್‌. ಮಂಜುಳಾ ಅಭಯಚಂದ್ರ, ವೃಂದಾ ರಾಜೇಂದ್ರ, ರೇಖಾ, ಕೆ.ಪಿ. ಜಗದೀಶ ಅಧಿಕಾರಿ, ವೇಣೂರು ನವೀನcಂದ್ರ ಬಲ್ಲಾಳ್‌, ಶಂಭವ ಕುಮಾರ, ಜಯರಾಜ ಕಂಬಳಿ ಇದ್ದರು. ಶೈಲೇಂದ್ರ ಕುಮಾರ್‌ ಆರೋಹ ಪ್ರಸ್ತಾವನೆಗೈದರು. ಪ್ರಭಾತ್‌ ಕುಮಾರ್‌ ಬಲಾ°ಡು ಕಾರ್ಯಕ್ರಮ ನಿರೂಪಿಸಿದರು.

ಸಿದ್ಧಾಂತ ರತ್ನಬಿಂಬ ಮಂದಿರಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆ ಶಿಲಾನ್ಯಾಸ ನೆರವೇರಿಸಿದರು.

ಟಾಪ್ ನ್ಯೂಸ್

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru ಲಂಚ: ಬಂಧಿತ ಮೂಲ್ಕಿ ಆರ್‌ಐ ಜಾಮೀನು ಅರ್ಜಿ ತಿರಸ್ಕೃತ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌…  ಕಲೆ, ಸಾಹಿತ್ಯ, ಜಾನಪದಗಳ ಸಂಗಮ

Mangaluru: ಜ.11, 12ರಂದು ಮಂಗಳೂರು ಲಿಟ್‌ ಫೆಸ್ಟ್‌… ಕಲೆ, ಸಾಹಿತ್ಯ, ಜಾನಪದಗಳ ಸಂಗಮ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

missing

Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.