ಹೋಬಳಿ ಮಟ್ಟದಲ್ಲಿ ಕಂದಾಯ, ಪಿಂಚಣಿ ಅದಾಲತ್’
Team Udayavani, Jun 27, 2019, 5:42 AM IST
ಮಂಗಳೂರು: ವಿವಿಧ ರೀತಿಯ ಪಿಂಚಣಿ ಸೌಲಭ್ಯಗಳನ್ನು ಶೀಘ್ರ ಹಾಗೂ ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಪ್ರತೀ ಹೋಬಳಿ ಮಟ್ಟದಲ್ಲಿ ತಿಂಗಳಿಗೊಮ್ಮೆ ಕಂದಾಯ ಅದಾಲತ್ ಮತ್ತು ಪಿಂಚಣಿ ಅದಾಲತ್‌ಗಳನ್ನು ನಡೆಸಲು ನಿರ್ದೇಶಿಸಲಾಗಿದೆಎಂದು ಮುಖ್ಯಮಂತ್ರಿಗಳ ಸಂಸ ದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಕಂದಾಯ ಅದಾಲತ್ ಅಭಿಯಾನ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ವೇಳೆ ಜನಪ್ರತಿನಿಧಿಗಳು, ಎಲ್ಲ ಫಲಾನುಭವಿ ಗಳನ್ನು ಒಟ್ಟು ಸೇರಿಸಿ ಸಮಸ್ಯೆ ಪರಿಹಾ ರಕ್ಕೆ ಪ್ರಯತ್ನಿಸಲಾಗುವುದು ಎಂದರು.
ಕಂದಾಯ ಇಲಾಖೆಗೆ ಸಂಬಂಧಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಗತಿ ಪರಿಶೀಲನೆ ನಡೆಸಲಾಗುತ್ತಿದೆ. ಪಿಂಚಣಿ ಎಲ್ಲರಿಗೂ ಸರಿಯಾಗಿ ಸಿಗುತ್ತಿಲ್ಲ ಎನ್ನುವ ಮಾತುಗಳು ಅದಾಲತ್ ಸಮಯದಲ್ಲಿ ಕೇಳಿ ಬಂದಿವೆ. ಹೋಬಳಿ ಮಟ್ಟದಲ್ಲಿ ಗ್ರಾಮ ಲೆಕ್ಕಿಗರು ಪರಿಶೀಲನೆ ಮಾಡಿಕೊಂಡು ಬಳಿಕ ಪಿಂಚಣಿ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಮಾಡುವಂತೆ ಸೂಚಿಸಲಾಗಿದೆ. 2018ರ ಎ. 1ರಿಂದ ಮೇ 31ರ ವರೆಗೆ 22,502 ಪಿಂಚಣಿದಾರರನ್ನು ಗುರುತಿಸಲಾಗಿದೆ. ಬಾಕಿ ಉಳಿದಿದ್ದರೆ ಅವರಿಗೆ ವಿಶೇಷ ಪಿಂಚಣಿ ಅದಾಲತ್‌ಗಳನ್ನು ಮಾಡಲಾಗುತ್ತದೆ. 2019 ಎ. 1ರಿಂದ ಮೇ 31ರ ವರೆಗೆ ಕಂದಾಯ ಅದಾಲತ್‌ನಲ್ಲಿ ಸುಮಾರು 2,044 ಅರ್ಜಿಗಳನ್ನು ಇತ್ಯರ್ಥಗೊಳಿಸ ಲಾಗಿದೆ ಎಂದರು.
ಕೆಲವೆಡೆ ಅಧಿಕಾರಿಗಳು ಯೋಜನೆ ಜಾರಿಗೆ ತರುವಲ್ಲಿ ಕಾನೂನಿನ ತೊಡಕಿನ ಬಗ್ಗೆ ಪ್ರಗತಿ ಪರಿಶೀಲನೆಯ ವೇಳೆ ಗಮನಕ್ಕೆ ತಂದಿದ್ದು, ಈ ಕುರಿತು ಅಧಿವೇಶನದಲ್ಲಿ ಗಮನ ಸೆಳೆಯ ಲಾಗುವುದು. ಕಾನೂನಿನಲ್ಲೂ ಬದಲಾ ವಣೆ ತರುವ ಕುರಿತು ಮುಖ್ಯಮಂತ್ರಿ ಗಳ ಜತೆ ಚರ್ಚಿಸಲಾಗುವುದು. ನೂತನ ತಾಲೂಕು ಗಳಲ್ಲಿ ಇಲಾಖೆಯ ಅಧಿಕಾರಿಗಳು ಕೂಡಲೇ ಕಚೇರಿಯನ್ನು ತೆರೆದು ಕಾರ್ಯನಿರ್ವಹಿಸಬೇಕು. ಕಾನೂನು ಉಲ್ಲಂಘಿಸಿದರೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.