ಮಂಗಳೂರು: ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ಲೈಸನ್ಸ್‌ ರದ್ದು

ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು

Team Udayavani, Mar 27, 2023, 1:20 PM IST

ಮಂಗಳೂರು: ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ಲೈಸನ್ಸ್‌ ರದ್ದು

ಮಹಾನಗರ: ಪದೇ ಪದೇ ಸಂಚಾರ ನಿಯಮ ಉಲ್ಲಂಘನೆ ಮಾಡುವವರ ಚಾಲನಾ ಪರವಾನಿಗೆ ರದ್ದುಪಡಿಸಲು ಆರ್‌ಟಿಒಗೆ ಶಿಫಾರಸು ಮಾಡುವ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

ರವಿವಾರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಜರಗಿದ ಪರಿಶಿಷ್ಟ ಜಾತಿ, ಪಂಗಡದವರ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡಿದರು. ಕೆಲವರು ಪದೇ ಪದೇ ಸಂಚಾರ ನಿಯಮ ಉಲ್ಲಂ ಸಿ ದಂಡ ಪಾವತಿಸುತ್ತಾರೆ. ದಿನದಲ್ಲಿ ಒಮ್ಮೆ ದಂಡ ಪಾವತಿಸಿದರೆ ಅನಂತರ ನಿಶ್ಚಿಂತೆಯಿಂದ ಸಂಚಾರ ನಿಯಮ ಉಲ್ಲಂಘಿಸಬಹುದು ಎಂಬ ಮನೋಭಾವ ಇನ್ನು ಕೆಲವರಲ್ಲಿದೆ. ಅಂಥವರ ವಿರುದ್ಧ ಕಠಿನ ಕ್ರಮದ ಅಗತ್ಯವಿದೆ. ಹಾಗಾಗಿ ಹೆಲ್ಮೆಟ್‌ ರಹಿತ ಬೈಕ್‌ ಸವಾರಿ, ಟ್ರಿಪಲ್‌ ರೈಡ್‌ ಸಹಿತ ಸಂಚಾರ ನಿಯಮಗಳ ಉಲ್ಲಂಘನೆ ಪುನರಾವರ್ತನೆ ಮಾಡುವವರ ಡ್ರೈವಿಂಗ್‌ ಲೈಸನ್ಸ್‌ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಚಾಲಕರ ವಿರುದ್ಧ ದೂರಿಗೆ ವಾಟ್‌ಆ್ಯಪ್‌ ಸಂಖ್ಯೆ ಕೆಲವು ಖಾಸಗಿ ಬಸ್‌ಗಳ ಚಾಲಕರು ಇಯರ್‌ಫೋನ್‌ ಹಾಕಿಕೊಂಡೇ ಬಸ್‌ ಚಲಾಯಿಸುತ್ತಿರುವುದು ಸಹಿತ ಸಂಚಾರ ನಿಯಮ ಉಲ್ಲಂ ಸುತ್ತಿದ್ದಾರೆ. ಅದನ್ನು ಕೂಡಲೇ ಪೊಲೀಸರಿಗೆ ತಿಳಿಸಲು ಬಸ್‌ಗಳಲ್ಲಿ ವಾಟ್‌ಆ್ಯಪ್‌ ನಂಬರ್‌ ಪ್ರದರ್ಶಿಸಬೇಕು ಎಂದು ಸದಾಶಿವ ಉರ್ವಸ್ಟೋರ್‌ ಮನವಿ ಮಾಡಿದರು. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ಬೇರೆ ವಾಹನಗಳ ಚಾಲಕರು, ಸವಾರರು ವಾಹನ ಸಂಚಾರ ನಿಯಮ ಉಲ್ಲಂಘಿಸಿದರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಗಾಂಜಾ ಹಾವಳಿ
ಚೆಂಬುಗುಡ್ಡೆ ಪರಿಸರದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದ್ದು, ಸಣ್ಣ ವಯಸ್ಸಿನ ಹುಡುಗರು ಕೂಡ ಗಾಂಜಾ ಸೇವನೆ, ಮಾರಾಟದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿದೆ. ಪೊಲೀಸರು ಬೀಟ್‌ ಕರ್ತವ್ಯವನ್ನು ಸರಿಯಾಗಿ ಮಾಡಿ ಭಯ ಹುಟ್ಟಿಸುವ ಅಗತ್ಯವಿದೆ ಎಂದು ದಲಿತ ಮುಂದಾಳು ಓರ್ವರು ಹೇಳಿದಾಗ, ಇಂತಹ ಸೂಕ್ಷ್ಮ ವಿಚಾರಗಳನ್ನು ಪೊಲೀಸರಿಗೆ ತಿಳಿಸಲು ಸಭೆಗಳಿಗಾಗಿ ಕಾಯಬೇಕಿಲ್ಲ. ನೇರವಾಗಿ ಫೋನ್‌ನಲ್ಲಿಯೇ ಮಾಹಿತಿ ನೀಡಬಹುದು. ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ಪ್ರತಿಕ್ರಿಯಿಸಿದರು.

ಶಾಲಾ ಮೈದಾನದಲ್ಲೇ ಪಾರ್ಕಿಂಗ್‌ ಮಾಡಿಸಿ
ಬೆಂದೂರ್‌ವೆಲ್‌ನಲ್ಲಿ ಪ್ರತಿದಿನ ಟ್ರಾಫಿಕ್‌ ಜಾಮ್‌ ಆಗುತ್ತಿದೆ. ಇಲ್ಲಿರುವ ಎರಡು ಶಾಲೆಗಳ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಬರುವ ಅವರ ವಾಹನಗಳನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸುತ್ತಿರುವುದು ಇದಕ್ಕೆ ಮುಖ್ಯ ಕಾರಣ. ಹಾಗಾಗಿ ಅಂತಹ ವಾಹನಗಳನ್ನು ಶಾಲೆಗಳ ಮೈದಾನ ದಲ್ಲಿಯೇ ನಿಲ್ಲಿಸಲು ಸೂಚನೆ ನೀಡಬೇಕು ಎಂದು ಅನಿಲ್‌ ಕಂಕನಾಡಿ ಆಗ್ರಹಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶು ಕುಮಾರ್‌ ಉಪಸ್ಥಿತರಿದ್ದರು. ದಲಿತ ಮುಂದಾಳುಗಳಾದ ಎಸ್‌ಪಿ ಆನಂದ, ವಿಶ್ವನಾಥ ಚೆಂಡ್ತಿಮಾರು, ಅಮಲ ಜ್ಯೋತಿ, ಸುನಿಲ್‌, ಜಗದೀಶ್‌ ಪಾಂಡೇಶ್ವರ ಮೊದಲಾದವರು ವಿವಿಧ ವಿಷಯಗಳನ್ನು ಪ್ರಸ್ತಾವಿಸಿದರು.

ದೂರು ನೀಡಿ ವಾಪಸಾಗುವಾಗ ಬೆದರಿಕೆ!
ಮಟ್ಕಾ ದಂಧೆಯ ಬಗ್ಗೆ ಇತ್ತೀಚೆಗೆ ಪೊಲೀಸ್‌ ಅಧಿಕಾರಿಯೋರ್ವರಿಗೆ ಮಾಹಿತಿ ನೀಡಲಾಗಿತ್ತು. ಆದರೆ ದೂರುದಾರರು ಮನೆ ತಲುಪುವಾಗ ಅವರಿಗೆ ಮಟ್ಕಾ
ದಂಧೆಯವರಿಂದ ಬೆದರಿಕೆ ಕರೆ ಬಂದಿತ್ತು. ದೂರಿನ ವಿಷಯ ಸೋರಿಕೆಯಾಗಿದ್ದು ಹೇಗೆ ಎಂದು ಓರ್ವರು ಪ್ರಶ್ನಿಸಿದರು. ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್‌ ಕುಮಾರ್‌ ಹೇಳಿದರು.

ಪ್ರಸ್ತಾವಗೊಂಡ ಇತರ ಪ್ರಮುಖ ವಿಷಯಗಳು zಉಳ್ಳಾಲದಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್‌ ರಹಿತ ಸಂಚಾರ, ಟ್ರಿಪಲ್‌ ರೈಡ್‌ ಸಾಮಾನ್ಯವಾಗಿದೆ. ಪೊಲೀಸರು ಕೇಸು ಹಾಕಲು ಹೆದರುತ್ತಿದ್ದಾರೆ. zತಡರಾತ್ರಿವರೆಗೂ ಡಿಜೆ ಹಾಕುವುದನ್ನು ತಡೆಯಬೇಕು. ಡಿಜೆ ಆಪರೇಟರ್‌ಗಳ ಮಾಹಿತಿಯನ್ನು ಪೊಲೀಸರು ಸಂಗ್ರಹಿಸಿಟ್ಟುಕೊಳ್ಳಬೇಕು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

1-dhanjay

Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.