ಮತ್ತೆ ಉದಯಿಸುವುದು ಭಾರತೀಯ ಸಂಗೀತ: ಡಾ| ಹೆಗ್ಗಡೆ

ಧರ್ಮಸ್ಥಳ: ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ

Team Udayavani, Oct 13, 2019, 4:55 AM IST

e-42

ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಎ. ಕನ್ಯಾಕುಮಾರಿ ಮತ್ತು ಸಂಗೀತ ಕಲಾರತ್ನ ನೀಲಾ ರಾಂಗೋಪಾಲ್‌ ಅವರಿಗೆ ಪ್ರಶಸ್ತಿ ಪ್ರದಾನಗೈದು ಗೌರವಿಸಿದರು.

ಬೆಳ್ತಂಗಡಿ: ಪಾಶ್ಚಾತ್ಯ ಸಂಗೀತದ ಪ್ರಭಾವದಿಂದ ಭಾರತೀಯ ಸಂಗೀತ ಪ್ರಕಾರಗಳು ಮೂಲೆಗುಂಪಾಗುತ್ತವೆಯೋ ಎಂಬ ಭಯ ನಮ್ಮನ್ನಾವರಿಸುತ್ತದೆ. ಆದರೆ ವಿವಿಧ ಭಾರತೀಯ ಸಂಗೀತ ಕಲಾಪ್ರಕಾರಗಳನ್ನು ಅಭ್ಯಸಿಸುತ್ತಿರುವ ಯುವ ಕಲಾವಿದರ ಆಸಕ್ತಿಯಿಂದಾಗಿ ಭಾರತೀಯ ಸಂಗೀತ ಮತ್ತೆ ಉದಯಿಸಿ ಜಾಗತಿಕವಾಗಿ ಪಸರಿಸುತ್ತಿದೆ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನುಡಿದರು.

ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ಶನಿವಾರ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಂಗಳೂರಿನ ಸ್ವರಮೂರ್ತಿ ವಿ.ಎನ್‌. ರಾವ್‌ ಮೆಮೋರಿಯಲ್‌ ಟ್ರಸ್ಟ್‌ನ ಆಶ್ರಯದಲ್ಲಿ ನಡೆದ ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಶ್ವಾತ್ಯ ಸಂಗೀತದಿಂದ ಭಾರತೀಯ ಸಂಗೀತ ಕ್ಷೇತ್ರಕ್ಕೆ ಯಾವುದೇ ಅಪಾಯವಿಲ್ಲ. ವೀಣೆ ಶೇಷಣ್ಣ ಸಂಗೀತೋತ್ಸವದಂತಹ ಕಾರ್ಯಕ್ರಮಗಳು, ಹಿರಿಯ ಕಲಾವಿದರಿಗೆ ಗೌರವ, ವಿಚಾರ ಸಂಕಿರಣ, ಸಂಗೀತ ಕಲಿಯುವವರಿಗೆ ಪ್ರೋತ್ಸಾಹ ಇತ್ಯಾದಿಗಳ ಆಯೋಜನೆ ಭಾರತೀಯ ಸಂಗೀತ ಪರಂಪರೆಯನ್ನು ಉಳಿಸಿ – ಬೆಳೆಸಲು ಹೆಚ್ಚಿನ ಪ್ರೇರಣೆ ನೀಡುತ್ತವೆ. ಭಾರತೀಯ ಸಂಗೀತ ಪ್ರಕಾರದ ವಾದ್ಯಗಳನ್ನು, ಸಂಗೀತ ಪರಿಕರಗಳನ್ನು ಉಳಿಸುವ ಕಾರ್ಯ ಮಾಡಬೇಕು ಎಂದು ಡಾ| ಹೆಗ್ಗಡೆಯವರು ಸಲಹೆ ನೀಡಿದರು.

ಪ್ರಶಸ್ತಿ ಪುರಸ್ಕೃತರಾದ ಎ. ಕನ್ಯಾಕುಮಾರಿ ಮಾತನಾಡಿ, ತನ್ನ ಕಲಾಸಾಧನೆಗೆ ಪ್ರೋತ್ಸಾಹಿಸಿದ ಎಂ.ಎಲ್‌. ವಸಂತಕುಮಾರಿ, ಕದ್ರಿ ಗೋಪಾಲನಾಥ್‌ ಮೊದಲಾದವರನ್ನು ಕೃತಜ್ಞತೆಯಿಂದ ಸ್ಮರಿಸಿದರು. ಧರ್ಮಸ್ಥಳದಲ್ಲಿ ಪ್ರಶಸ್ತಿ ಸ್ವೀಕರಿಸಿ ತನ್ನ ಜನ್ಮಸಾರ್ಥಕವಾಗಿದೆ ಎಂದ ಅವರು, ಈ ಪ್ರಶಸ್ತಿಗೆ ಪಾತ್ರರಾಗಿರುವ ವಿಷಯ ಮೊದಲಿಗೆ ನನಗೆ ತಿಳಿಸಿದವರು ನಿನ್ನೆಯಷ್ಟೇ ವಿಧಿವಶರಾದ ಸಹೋದರ ಕದ್ರಿ ಗೋಪಾಲನಾಥ್‌ ಎಂದು ನೆನೆದು ಭಾವುಕರಾದರು.

ಪ್ರಶಸ್ತಿ ಪುರಸ್ಕೃತ ಇನ್ನೋರ್ವ ಹಿರಿಯ ಸಂಗೀತ ವಿದುಷಿ ನೀಲಾ ರಾಂಗೋಪಾಲ್‌ ಮಾತನಾಡಿ, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹದಿಂದ ಪ್ರಾಪ್ತಿಯಾದ ಸಮ್ಮಾನದಿಂದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಮುಂದೆಯೂ ನಿರಂತರ ಕಲಾಸೇವೆ ಮುಂದುವರಿಸುವುದಾಗಿ ಹೇಳಿದರು.

ಬೆಂಗಳೂರಿನ ಸ್ವರಮೂರ್ತಿ ವಿ.ಎನ್‌. ರಾವ್‌ ಮೆಮೋರಿಯಲ್‌ಟ್ರಸ್ಟ್‌ನ ಅಧ್ಯಕ್ಷ ಪ್ರೊ| ಮೈಸೂರು ವಿ. ಸುಬ್ರಹ್ಮಣ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ವೀಣೆ ಮತ್ತು ಮೈಸೂರಿಗೆ ಇರುವ ಅವಿನಾಭಾವ ಸಂಬಂಧವನ್ನು ವಿವರಿಸಿದರು. ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವದ ಮೂಲಕ ಅನೇಕ ಹಿರಿಯ ಕಲಾವಿದರನ್ನು ಗೌರವಿಸಲಾಗುತ್ತದೆ ಎಂದರು.

ಹೇಮಾವತಿ ವೀ. ಹೆಗ್ಗಡೆಯವರು ಸಮಾರಂಭ ಉದ್ಘಾಟಿಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮತ್ತು
ಡಾ| ನಿಡಘಟ್ಟ ಗಂಗಾಧರ್‌ ಪ್ರಶಸ್ತಿ ಪತ್ರ ವಾಚಿಸಿದರು. ಸುಪ್ರಿಯಾ ಹಷೇìಂದ್ರ ಕುಮಾರ್‌ ಉಪಸ್ಥಿತರಿದ್ದರು. ವೀಣೆ ಶೇಷಣ್ಣ ಸ್ಮಾರಕ ಸಂಗೀತೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಡಿ. ಹಷೇìಂದ್ರ ಕುಮಾರ್‌ ಸ್ವಾಗತಿಸಿದರು. ಶ್ಯಾಮಸುಂದರ ಶರ್ಮ ವಂದಿಸಿ
ದರು. ರಾಧಿಕಾ ಕಾರ್ಯಕ್ರಮ ನಿರ್ವಹಿಸಿದರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಬೆಂಗಳೂರಿನ ನ್ಯಾಶನಲ್‌ಎಜುಕೇಶನ್‌ ಸೊಸೈಟಿಯ ಅಧ್ಯಕ್ಷ ಎ.ಎಚ್‌. ರಾಮರಾವ್‌ ಮತ್ತು ಸುಧಾ ಆರ್‌. ರಾವ್‌ ಪ್ರಶಸ್ತಿಗಳನ್ನು ಪ್ರಾಯೋಜಿಸಿದ್ದಾರೆ.

ಪ್ರಶಸ್ತಿ ಪ್ರದಾನ
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ ಅವರಿಗೆ ವೀಣೆ ಶೇಷಣ್ಣ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಹಾಗೂ ಸಂಗೀತ ಕಲಾರತ್ನ ನೀಲಾ ರಾಂಗೋಪಾಲ್‌ ಅವರಿಗೆ ಸ್ವರಮೂರ್ತಿ ವಿ.ಎನ್‌. ರಾವ್‌ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದರು. ಜತೆಗೆ ವೀಣೆ ಶೇಷಣ್ಣನವರ ಪುತ್ಥಳಿ, ಸೀರೆ, ಮಂಗಳ ದ್ರವ್ಯಗಳು, ಬೆಳ್ಳಿಯ ಸ್ಮರಣಿಕೆ ನೀಡಿ ಸಮ್ಮಾನಿಸಿದರು. ಈ ಎರಡೂ ಪ್ರಶಸ್ತಿಗಳು ತಲಾ ಒಂದು ಲಕ್ಷ ರೂ. ನಗದು ಸಹಿತವಾಗಿವೆ.

ಸಂಗೀತ ಸುಧೆ
ಉಡುಪಿಯ ಪ್ರೊ| ಅರವಿಂದ ಹೆಬ್ಟಾರ್‌ ಮತ್ತು ಬಳಗದವರಿಂದ ವೃಂದ ಗಾಯನ, ಡಾ| ಸಹನಾ ಎಸ್‌.ವಿ. ಅವರಿಂದ ವೀಣಾ ವಾದನ ಕಛೇರಿ ನಡೆಯಿತು. ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಸಂಗೀತ ಕಲಾನಿಧಿ ಎ. ಕನ್ಯಾಕುಮಾರಿ ವಯಲಿನ್‌ ವಾದನ ಕಛೇರಿ ನಡೆಸಿಕೊಟ್ಟರು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವುMangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

Punjalkatte: ವಿದ್ಯುತ್‌ ಶಾಕ್‌ನಿಂದ ಕೂಲಿ ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.