ಆರ್‌ಎಂಎಸ್‌ಎ ಶಿಕ್ಷಕರ ಮುಷ್ಕರ ತಾತ್ಕಾಲಿಕ ಸ್ಥಗಿತ


Team Udayavani, Sep 6, 2018, 11:32 AM IST

6-september-8.jpg

ಬೆಳ್ತಂಗಡಿ: ತಾ|ನಲ್ಲಿ ಆರ್‌ಎಂಎಸ್‌ಎನಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 23 ಮಂದಿ ಶಿಕ್ಷಕರು ವೇತನಕ್ಕೆ ಆಗ್ರಹಿಸಿ ಇಲ್ಲಿನ ಬಿಇಒ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಬುಧವಾರ ಶಾಸಕ ಹರೀಶ್‌ ಪೂಂಜ ಭೇಟಿ ನೀಡಿ, ಸೆ. 6ರ ಸಂಜೆಯೊಳಗೆ ವೇತನ ಲಭಿಸದೇ ಇದ್ದರೆ ತಾನು ಶಿಕ್ಷಕರ ಪ್ರತಿನಿಧಿಗಳ ಜತೆಗೆ ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಶಿಕ್ಷಕರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ಈ ಶಿಕ್ಷಕರಿಗೆ 7 ತಿಂಗಳಿನಿಂದ ವೇತನ ಸಿಗದೆ ಸಂಬಂಧಪಟ್ಟವರಿಗೆ ಮನವಿ ನೀಡಿದ ಬಳಿಕವೂ ಸಮಸ್ಯೆ ಬಗೆಹರಿಯದೇ ಇರುವ ಹಿನ್ನೆಲೆಯಲ್ಲಿ ಸೆ. 4 ರಂದು ಮುಷ್ಕರ ಆರಂಭಿಸಿದ್ದರು. ಬುಧವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ, ತಾನು ಈಗಾಗಲೇ ಇಲಾಖೆಯ ಮುಖ್ಯ ಕಾರ್ಯದರ್ಶಿ ಜತೆ ಚರ್ಚೆ ನಡೆಸಿದ್ದೇನೆ. ಅವರು ಸಮಸ್ಯೆ ಬಗೆಹರಿಸುವ ಭರವಸೆಯನ್ನೂ ನೀಡಿದ್ದಾರೆ. ಸೆ. 6ರಂದು ಸಂಜೆಯೊಳಗೆ ವೇತನ ಆಗದೇ ಇದ್ದರೆ ಬೆಂಗಳೂರಿನಲ್ಲಿ ನಿಮ್ಮ ಸಂಘದ ಪ್ರಮುಖರನ್ನು ಕರೆದುಕೊಂಡು ಹೋಗಿ ಪ್ರತಿಭಟನೆ ನಡೆಸುತ್ತೇನೆ. ಹೀಗಾಗಿ ನೀವು ಮುಷ್ಕರ ಕೈಬಿಟ್ಟು ತರಗತಿಗಳಿಗೆ ತೆರಳಿ ಪಾಠ ಮಾಡುವಂತೆ ತಿಳಿಸಿದರು.

ಆಗ ಕೆಲವರಿಂದ ವಿರೋಧಗಳು ಬಂದಾಗ ಹಾಗಾದರೆ ನೀವು ಮುಷ್ಕರ ಮುಂದುವರಿಸಿ ಎಂದು ಶಾಸಕರು ಗರಂ ಆಗಿ ಉತ್ತರಿಸಿದರು. ಬಳಿಕ ಶಾಸಕರ ಭರವಸೆಯ ಮಾತಿಗೆ ಮನ್ನಣೆ ನೀಡಿ, ಈಗ ಪ್ರತಿಭಟನೆಯನ್ನು ಹಿಂಪಡೆಯುತ್ತೇವೆ. ಶನಿವಾರದೊಳಗೆ ವೇತನ ಸಿಗದೇ ಇದ್ದಲ್ಲಿ, ಶಿಕ್ಷಕರ ಸಂಘಗಳ ಸಹಕಾರದಿಂದ ದೊಡ್ಡ ಮಟ್ಟದ ಮುಷ್ಕರ ಆರಂಭಿಸುವುದಾಗಿ ತಿಳಿಸಿದರು. ನಿಮ್ಮ ವೇತನವನ್ನು ಹಿಡಿದುಕೊಂಡೇ ನಾನು ಬೆಂಗಳೂರಿನಿಂದ ಬರುವುದಾಗಿ ಶಾಸಕರು ಭರವಸೆ ನೀಡಿದರು.

ಬಳಿಕ ಇಲಾಖೆಯ ಸಿಬಂದಿ ಅಭಿಷೇಕ್‌ ಅವರನ್ನು ಕರೆದು ಶಿಕ್ಷಕರ ವೇತನ ಬಿಡುಗಡೆಯ ಕುರಿತು ಶಾಸಕರು ಮಾಹಿತಿ ಕೇಳಿದಾಗ ಸಿಬಂದಿ, ಸುಳ್ಳು ಉತ್ತರ ನೀಡಿ ಉಡಾಫೆಯಿಂದ ವರ್ತಿಸಿದರು. ಇದರಿಂದ ಅಸಮಾಧಾನಗೊಂಡ ಶಾಸಕರು ಸಿಬಂದಿ ಯನ್ನು ತತ್‌ಕ್ಷಣ ಅಮಾನತು ಮಾಡುವಂತೆ ತಿಳಿಸಿದರು. ಬಳಿಕ ಶಿಕ್ಷಕರು ಅವರು ಅನುಭವವಿಲ್ಲದೆ ಹಾಗೆ ಮಾತನಾಡಿದ್ದಾರೆ. ಹೀಗಾಗಿ ಈ ಬಾರಿ ಕ್ಷಮೆ ನೀಡಬೇಕು ಎಂದು ಮನವಿ ಮಾಡಿದರು. ಬಳಿಕ ಸಿಬಂದಿಗೆ ಮೆಮೋ ನೀಡಬೇಕು, ಜತೆಗೆ ಅವರನ್ನೇ ನೋಡಲ್‌ ಆಗಿ ನೇಮಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬಿಇಒ ಅವರನ್ನೂ ತರಾಟೆಗೆ ತೆಗೆದುಕೊಂಡರು.

ಸರಕಾರಿ ನೌಕರರ ಸಂಘದ ತಾ| ಅಧ್ಯಕ್ಷ ಜಯಕೀರ್ತಿ ಜೈನ್‌ ಅವರು, ಬಿಇಒ ಅವರ ವರ್ತನೆಯನ್ನು ತಿದ್ದಿಕೊಳ್ಳಬೇಕು. ಇಲ್ಲದೇ ಇದ್ದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ರಾಮಕೃಷ್ಣ ಶಿರೂರು, ಸಂಘಟನೆಗಳ ಪ್ರಮುಖರಾದ ರಮೇಶ ಮಯ್ಯ, ಮಹಮ್ಮದ್‌ ರಿಯಾಜ್‌, ನಾಗರಾಜ್‌, ಪ್ರಭಾಕರ ನಾರಾವಿ, ಚಂದ್ರಶೇಖರ ಶೆಟ್ಟಿ, ರಾಮಕೃಷ್ಣ ಭಟ್‌, ರಾಮಕೃಷ್ಣ ಎಸ್‌. ಕೆ, ಧರಣೇಂದ್ರ ಕೆ., ಶೇಖರ ಶಂಕು ಮೊದಲಾದವರಿದ್ದರು.

ಮುಷ್ಕರದಲ್ಲೇ ಶಿಕ್ಷಕರ ದಿನ
ಮುಷ್ಕರ ನಿರತ 23 ಮಂದಿ ಶಿಕ್ಷಕರು ಮುಷ್ಕರ ನಿರತ ಸ್ಥಳದಲ್ಲೇ ಡಾ| ರಾಧಾಕೃಷ್ಣನ್‌ ಅವರ ಭಾವಚಿತ್ರವಿಟ್ಟು ಅಲ್ಲೇ ಶಿಕ್ಷಕರ ದಿನವನ್ನು ಆಚರಿಸಿದರು. ಶಿಕ್ಷಕರ ದಿನಾಚರಣೆಯನ್ನು ಮುಗಿಸಿ ಬಂದ ಇತರ ಶಿಕ್ಷಕರು ಕೂಡ ಪ್ರತಿಭಟನೆಗೆ ಬೆಂಬಲ ನೀಡಿದರು. 

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.