ಉಪ್ಪಿನಂಗಡಿ ಬಳಿ ಕಂಟೈನರ್ – ಜೀಪು ಡಿಕ್ಕಿ: ಓರ್ವ ಸಾವು, ಇಬ್ಬರು ಗಂಭೀರ
Team Udayavani, Dec 29, 2019, 3:35 PM IST
ಉಪ್ಪಿನಂಗಡಿ: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಜೀಪಿಗೆ ಕಂಟೈನರ್ ಒಂದು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿ ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಬೆದ್ರೋಡಿಯಲ್ಲಿ ನಡೆದಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬೆದ್ರೋಡಿ ಬಳಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜೀಪು ಚಾಲಕ ಸಿದ್ದಿಕ್ ಮೃತಪಟ್ಟಿದ್ದಾರೆ. ಜೀಪಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರಗೆ ದಾಖಲಿಸಲಾಗಿದೆ.
ಜೀಪು ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿತ್ತು. ಕಂಟೈನರ್- ಜೀಪು ಡಿಕ್ಕಿಯಾದ ಪರಿಣಾಮ ರಸ್ತೆಯಲ್ಲಿ ಸಂಚಾರ ವ್ಯವಸ್ಥೆಗೆ ಸ್ವಲ್ಪ ಮಟ್ಟಿನ ಅಡಚಣೆಯಾಗಿದೆ.
ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP ದೂರು ಬೆನ್ನಲ್ಲೇ ಗೆಹ್ಲೋಟ್ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್?
Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ
Koteshwara: ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಖಾದರ್, ಸೊರಕೆ ಭೇಟಿ
ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ
ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.