ಕಡಿದ ಮರಗಳು ರಸ್ತೆಯಲ್ಲಿ, ಬೀದಿ ದೀಪ ಮಾಯ!
Team Udayavani, Jun 21, 2018, 12:30 PM IST
ಮಹಾನಗರ: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದ ನಗರದ ಬಹುತೇಕ ಭಾಗ ಕೃತಕ ನೆರೆಯಿಂದ ಮುಳುಗಡೆಗೊಂಡು ಅನೇಕ ನಾಶನಷ್ಟಗಳು ಉಂಟಾಗಿತ್ತು. ಇದರಿಂದ ಎಚ್ಚೆತ್ತ ಪಾಲಿಕೆ ಚರಂಡಿ ಸ್ವಚ್ಛತೆ, ಅಪಾಯಕಾರಿ ಮರಗಳ ತೆರವು ಕಾರ್ಯ ಮುಂದಾಗಿತ್ತು. ಆದರೆ ಕೆಲವು ಭಾಗಗಳಲ್ಲಿ ಕಡಿದ ಮರಗಳನ್ನು ರಸ್ತೆಯಲ್ಲೇ ಬಿಟ್ಟು ಹೋಗಿರುವುದು ವಾಹನ ಸವಾರರ ಪಾಲಿಕೆ ಸಂಕಷ್ಟವಾಗಿ ಪರಿಣಮಿಸಿದೆ.
ದೇರೆಬೈಲು-ಎಯ್ನಾಡಿ ಸಂಪರ್ಕಿಸುವ ಹರಿಪದವು ರಸ್ತೆ ನೋಡಲು ಕಾಂಕ್ರೀಟ್ ಹಾಕಿ ಸುಂದರವಾಗಿಯೇ ಇದೆ. ಆದರೆ ಈ ಒಂದು ರಸ್ತೆಯಲ್ಲಿ ಹಲವು ಸಮಸ್ಯೆಗಳಿವೆ. ಅಪಾಯಕಾರಿ ಮರಗಳನ್ನು ಪಾಲಿಕೆ ಸಿಬಂದಿಗಳು ಇತ್ತೀಚೆಗೆ ಕಡಿದಿದ್ದರೂ ಅದನ್ನು ತೆರವು ಮಾಡುವಲ್ಲಿ ನಿರ್ಲಕ್ಷ್ಯ ತೋರಿರುವುದರಿಂದ ಸುಮಾರು ಒಂದು ತಿಂಗಳಿನಿಂದ ಮರ, ಗೆಲ್ಲುಗಳು ರಸ್ತೆಯಲ್ಲೇ ಬಿದ್ದಿವೆ. ಇದರಿಂದ ಈ ಭಾಗದಲ್ಲಿ ಓಡಾಡುವ ಜನರಿಗೆ ತೊಂದರೆಯಾಗುತ್ತಿದೆ.
ದಾರಿದೀಪವಿಲ್ಲ
ಹರಿಪದವು ರಸ್ತೆಯನ್ನು ಎಯ್ನಾಡಿಗೆ ತೆರಳಲು ಅಡ್ಡರಸ್ತೆಯಾಗಿ ಬಳಸಲಾಗುತ್ತದೆ. ಅಲ್ಲದೆ ಹಲವು ಮನೆಗಳಿರುವ ಮಂದಾರಬೈಲು ಭಾಗಕ್ಕೂ ಈ ರಸ್ತೆಯ ಮೂಲಕವೇ ಸಾಗಬೇಕು. ಅದರೊಂದಿಗೆ ಒಂದು ಖಾಸಗಿ ಆಸ್ಪತ್ರೆಯ ವಸತಿನಿಲಯ, ಬೃಹತ್ ಖಾಸಗಿ ಕಂಪೆನಿಯೂ ಇದೆ. ಈ ಹಿನ್ನಲೆಯಲ್ಲಿ ದಿನನಿತ್ಯ ಈ ಭಾಗದಲ್ಲಿ ನೂರಾರು ಜನ ಓಡಾಟ ನಡೆಸುತ್ತಾರೆ. ಆದರೆ ಈ ಭಾಗದಲ್ಲಿ ಬೀದಿ ದೀಪಗಳಿಲ್ಲದೆ ಜನರು ಕತ್ತಲಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ರಾತ್ರಿ ವೇಳೆ ಮಹಿಳೆಯರು ಈ ಭಾಗದಲ್ಲಿ ಸಂಚರಿಸಲು ಆತಂಕಕ್ಕೊಳಗಾಗುತ್ತಿದ್ದಾರೆ. ಅಲ್ಲದೆ ಈ ಕಾರಣದಿಂದ ಈ ಭಾಗದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುವ ಸಾಧ್ಯತೆ ಇದೆ ಎಂಬುದು ಸ್ಥಳೀಯರು ಆತಂಕ
ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪ್ರತಿನಿಧಿಯನ್ನು ಕೇಳಿದರೆ ಸೂಕ್ತ ಸ್ಪಂದನೆ ನೀಡುತ್ತಿಲ್ಲ ಎಂಬುದಾಗಿ ಅಲ್ಲಿನ ನಿವಾಸಿಯೊಬ್ಬರು ಸುದಿನಕ್ಕೆ ತಿಳಿಸಿದ್ದಾರೆ.
ಗುಡ್ಡ ಕುಸಿದು ತಿಂಗಳೂ ಕಳೆದರೂ ಕೇಳ್ಳೋರಿಲ್ಲ
ಮೇ 29ರಂದು ಸುರಿದ ಭಾರಿ ಮಳೆಗೆ ದೇರೆಬೈಲಿನಿಂದ ಹರಿಪದವು ರಸ್ತೆ ಆರಂಭವಾಗುವ ತಿರುವಿನಲ್ಲಿ ಗುಡ್ಡ ಕುಸಿದು ರಸ್ತೆಗೆ ಮಣ್ಣು ಬಿದ್ದಿದ್ದು, ಈವರೆಗೆ ಅದನ್ನು ತೆರವು ಗೊಳಿಸುವ ಕಾರ್ಯ ಪಾಲಿಕೆ ಮಾಡಿಲ್ಲ. ಮಳೆ ನೀರಿಗೆ ಮಣ್ಣುಗಳೆಲ್ಲಾ ರಸ್ತೆಯಲ್ಲೇ ಹರಿಯುತ್ತಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಕೆಸರಿನಲ್ಲೇ ಸಾಗಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪಾಲಿಕೆಯನ್ನು ಅನೇಕ ಬಾರಿ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.