ಪಿಜಕಳ ಕಾಲುಸಂಕ ಸಂಪರ್ಕ ರಸ್ತೆ ದುರಸ್ತಿ ಕಾರ್ಯಾಚರಣೆ
Team Udayavani, Jul 12, 2019, 5:01 AM IST
ಕಡಬ: ಪಿಜಕಳದ ಗೊಡಾಲು ಎಂಬಲ್ಲಿ ಲೋಕೋಪಯೋಗಿ ಇಲಾಖೆಯಿಂದ ಶಾಲಾ ಸಂಪರ್ಕ ಸೇತು ಯೋಜನೆಯಲ್ಲಿ 9.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಕಾಲು ಸಂಕಕ್ಕೆ ಸಂಪರ್ಕಿಸಲಾದ ರಸ್ತೆಗೆ ಅವೈಜ್ಞಾನಿಕವಾಗಿ ಮಣ್ಣು ಹಾಕಿದ ಪರಿಣಾಮ ಉಂಟಾಗಿದ್ದ ಸಮಸ್ಯೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸರಿ ಪಡಿಸಿದ್ದಾರೆ.
ನೂತನವಾಗಿ ನಿರ್ಮಾಣಗೊಂಡಿದ್ದ ಕಾಲು ಸಂಕದ ಸಂಪರ್ಕ ರಸ್ತೆಗೆ ಹಾಕಲಾಗಿದ್ದ ಮಣ್ಣು ಮಳೆ ನೀರಿನಲ್ಲಿ ಕೊಚ್ಚಿ ಹೋಗಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಈ ರಸ್ತೆಯಲ್ಲಿ ಸಂಚರಿಸಲು ತೊಂದರೆ ಎದುರಾಗಿತ್ತು. ಮಳೆನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ಮಣ್ಣು ಹಾಗೂ ಕೆಸರು ನೀರು ಸಮೀಪದ ಕೃಷಿ ಭೂಮಿಗೆ ಹರಿದು ಕೃಷಿಕರಿಗೂ ಸಮಸ್ಯೆ ಉಂಟಾಗಿತ್ತು. ದೂರಿನ ಹಿನ್ನೆಲೆಯಲ್ಲಿ ‘ಉದಯವಾಣಿ’ ಸುದಿನ ಸಹಿತ ಮಾಧ್ಯಮಗಳು ಸಚಿತ್ರ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿದ್ದವು. ಪ್ರತಿಕ್ರಿಯಿಸಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದ್ದರು. ಇದೀಗ ಲೋಕೋಪಯೋಗಿ ಇಲಾಖೆಯ ಅಧಿ ಕಾರಿಗಳ ಸೂಚನೆಯಂತೆ ಮೋರಿ ಅಳವಡಿಸಿ ರಸ್ತೆಯನ್ನು ಸಂಚಾರಕ್ಕೆ ಯೋಗ್ಯವನ್ನಾಗಿ ಮಾಡುವ ಜತೆಗೆ ಮಳೆನೀರು ಸರಾಗವಾಗಿ ಹರಿದುಹೋಗಲು ವ್ಯವಸ್ಥೆ ಮಾಡಲಾಗಿದೆ.
ಸಮಸ್ಯೆ ನಿವಾರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.