ರೋಡ್ ಶೋ, ಮತಯಾಚನೆ
Team Udayavani, Apr 9, 2019, 6:30 AM IST
ಕೋಟೆಕಾರು: ನೋಟು ರದ್ಧತಿಯಿಂದ ಬಡ, ಮಧ್ಯಮ, ಕೂಲಿ ಕಾರ್ಮಿಕರಿಗೆ ಸಹಿತ ನಿಷ್ಠಾವಂತರಿಗೆ ಯಾವುದೇ ತೊಂದರೆಯಾಗಿಲ್ಲ. ಆದರೆ ಸಮಾಜವನ್ನು ಲೂಟಿಗೈದವರಿಗೆ ತೊಂದರೆಯಾಗಿದೆ ಎಂದು ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಬಿಜೆಪಿ ಮಂಗಳೂರು ಕ್ಷೇತ್ರದ ವತಿಯಿಂದ ತೊಕ್ಕೊಟ್ಟುವಿನಿಂದ ಕೋಟೆಕಾರುವರೆಗೆ ನಡೆಸಿದ ರೋಡ್ ಶೋನಲ್ಲಿ ಭಾಗವಹಿಸಿ ಬಳಿಕ ಕೋಟೆಕಾರಿನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಮೋದಿ ಮತ್ತೂಮ್ಮೆ ಪ್ರಧಾನಿಯಾದಲ್ಲಿ ಮಾತ್ರ ದೇಶಕ್ಕೆ ಭವಿಷ್ಯವಿದೆ. ದೇಶದ ಮತದಾರರು ಪ್ರದಾನಿ ಮೋದಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಅದಕ್ಕಾಗಿ ಅಮೆರಿಕದ ಎಂಜಿನಿಯರ್ ಮೋದಿಗೆ ಮತ ಚಲಾಯಿಸಲು ದೇಶಕ್ಕೆ ಬರುವುದಾಗಿ ಹೇಳಿಕೊಂಡಿದ್ದಾಳೆ. ಕಳೆದ ಐದು ವರ್ಷಗಳಿಂದ ಭಾರತೀಯರಿಗೆ ವಿದೇಶದಲ್ಲಿ ವಿಶೇಷ ಗೌರವ ಸಿಗುವಂತಹ ಕೆಲಸವಾಗುತ್ತಿದೆ ಎಂದರು.
ಮಹಾಘಟಬಂಧನದಲ್ಲಿ ಪ್ರಧಾನಿ ಆಗುವುದು ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ದೇಶವನ್ನು ವರ್ಷಗಳಿಂದ ಆಳಿದ ಕಾಂಗ್ರೆಸ್ಸಿಗೆ ಉಡುಪಿಯಲ್ಲಿ ಚಿಹ್ನೆಯೇ ಇಲ್ಲದಿರುವುದು ದೃರಾದೃಷ್ಟಕರ ಎಂದರು.
ಮಂಗಳೂರು ಕ್ಷೇತ್ರ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಮಾತನಾಡಿ, ಜಿಲ್ಲೆಯ ಅಭ್ಯರ್ಥಿ 3 ಲಕ್ಷ ಮತಗಳ ಅಂತರದಲ್ಲಿ ಈ ಬಾರಿ ಜಯಗಳಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಜಾರಿಗೆ ತಂದಿರುವ ಯೋಜನೆಗಳು ತಳಮಟ್ಟದ ಕಾರ್ಯಕರ್ತರಿಗೆ ತಲುಪಿವೆ ಎಂದರು.
ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ, ದೇಶದ ಅಖಂಡತೆ, ಅಭಿವೃದ್ಧಿಗಾಗಿ ತ್ಯಾಗದ ಜೀವನವನ್ನು ನಡೆಸುತ್ತಿರುವ ಪ್ರಧಾನಿ ಮೋದಿಯವ ಪಕ್ಷಕ್ಕೆ ಜನ ಬೆಂಬಲಿಸಬೇಕಿದೆ ಎಂದರು.
ಈ ಸಂದರ್ಭ ಮುಖಂಡರಾದ ಚಂದ್ರಶೇಖರ್ ಉಚ್ಚಿಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂಪಲ, ಚಂದ್ರ ಹಾಸ್ ಉಳ್ಳಾಲ್, ಕ್ಷೇತ್ರ ಚುನಾವಣೆ ಉಸ್ತುವಾರಿ ರಾಧಾಕೃಷ್ಣ ಬೂಡಿಯಾರು, ನಮಿತಾ ಶ್ಯಾಂ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟುಗುತ್ತು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.