ರಸ್ತೆಗೆ ಮರುನಾಮಕರಣ ಅಲೋಶಿಯಸ್ ಶಿಕ್ಷಣ ಸಂಸ್ಥೆಯಿಂದ ಪ್ರತಿಭಟನೆ
Team Udayavani, Jul 3, 2017, 3:45 AM IST
ಮಹಾನಗರ: “ಸಂತ ಅಲೋಶಿಯಸ್ ಕಾಲೇಜು ರಸ್ತೆ’ಯನ್ನು “ಮೂಲ್ಕಿ ಸುಂದರರಾಂ ಶೆಟ್ಟಿ ರಸ್ತೆ’ ಎಂಬುದಾಗಿ ಮರು ನಾಮಕರಣ ಮಾಡಲು ಅನುಮೋದನೆ ನೀಡುವಾಗ ಕಾಲೇಜು ಆಡಳಿತವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಹಾ
ನಗರ ಪಾಲಿಕೆಯ ನಿಲುವನ್ನು ಖಂಡಿಸಿ ಸಂತ ಅಲೋಶಿಯಸ್ ಕಾಲೇಜು ಶಿಕ್ಷಣ ಸಂಸ್ಥೆಗಳ ಆಡಳಿತ ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದರು.
ಕಾಲೇಜಿನ ಆಡಳಿತ ವರ್ಗ, ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳ ಪ್ರತಿಭಟನ ಮೆರವಣಿಗೆಯು ಕಾಲೇಜು ಆವರಣದಿಂದ ಹೊರಟು ಜ್ಯೋತಿ ವೃತ್ತ, ಹಂಪನಕಟ್ಟೆ, ಕ್ಲಾಕ್ ಟವರ್ ವೃತ್ತವಾಗಿ ಸಾಗಿ ವಾಪಸ್ ಕಾಲೇಜಿನ ಆವರಣಕ್ಕೆ ತಲುಪಿ ಸಮಾಪನ ಗೊಂಡಿತು. ಸುಮಾರು 10,000ದಷ್ಟು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೆರವಣಿಗೆಯನ್ನು ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಮನ್ ಅಹ್ಮದ್ ಉದ್ಘಾಟಿಸಿದರು. ರೆಕ್ಟರ್ ಫಾ| ಡೈನೇಶಿಯಸ್ ವಾಸ್, ಕಾಲೇಜಿನ ಪ್ರಾಂಶುಪಾಲ ಫಾ| ಪ್ರವೀಣ್ ಮಾರ್ಟಿಸ್, ರಿಜಿಸ್ಟ್ರಾರ್ ಪ್ರೊ| ಎ.ಎಂ.ನರಹರಿ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಕೆಥೋಲಿಕ್ ಸಭಾ ಕೇಂದ್ರೀಯ ಸಮಿತಿ ಅಧ್ಯಕ್ಷ ಅನಿಲ್ ಲೋಬೋ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಸಿಪಿಐಎಂ ನಗರ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.
ಬೇಸರ ತಂದಿದೆ
ಈ ಶಿಕ್ಷಣ ಸಂಸ್ಥೆಗೆ 137 ವರ್ಷಗಳ ಇತಿಹಾಸ ಮತ್ತು ಪರಂಪರೆ ಇದ್ದು, ಕೆ.ಜಿ.ಯಿಂದ ಪಿಎಚ್.ಡಿ.ವರೆಗಿನ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿದ್ದಾರೆ. ಸಂಸ್ಥೆಯ ಹೆಸರಿನಲ್ಲಿದ್ದ ರಸ್ತೆಗೆ ಈಗ ಮರು ನಾಮಕರಣ ಮಾಡಿರುವುದು ನಮಗೆ ಬೇಸರ ತಂದಿದೆ. ನಮಗೆ ನ್ಯಾಯ ಬೇಕು ಎಂದು ಪ್ರಾಂಶುಪಾಲ ಫಾ| ಪ್ರವೀಣ್ ಮಾರ್ಟಿಸ್ ಹೇಳಿದರು.
ಈ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿರುವ ತಾನು “ಸಂತ ಅಲೋಶಿಯಸ್ ಕಾಲೇಜು ರಸ್ತೆ’ಗೆ ಅದೇ ಹೆಸರನ್ನು ಉಳಿಸಿಕೊಂಡು ಬರಲು ಪ್ರಯತ್ನಿಸುತ್ತೇನೆ; ಈ ವಿಷಯದಲ್ಲಿ ರಾಜಿ ಇಲ್ಲ ಎಂದು ಐವನ್ ಡಿ’ಸೋಜಾ ಹೇಳಿದರು.
ಇದೊಂದು ರಸ್ತೆಯ ಪ್ರಶ್ನೆಯಲ್ಲ; ಸಂಸ್ಥೆಗೆ ನೀಡುವ ಗೌರವ. ಆದ್ದರಿಂದ ನಾವು ಪ್ರತಿಭಟನೆ ನಡೆಸಬೇಕಾಯಿತು. ನ್ಯಾಯ ಸಿಗುವ ತನಕ ಹೋರಾಟ ನಡೆಸಲಾಗುವುದು ಎಂದು ರೆಕ್ಟರ್ ಫಾ| ಡೈನೇಶಿಯಸ್ ವಾಸ್ ಹೇಳಿದರು.
ಉಪನ್ಯಾಸಕ ನವೀನ್ ಮಸ್ಕರೇನ್ಹಸ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.