ಹೊಂಡ- ಗುಂಡಿ ತುಂಬಿದ ರಸ್ತೆಯಲ್ಲಿ  ಸಂಚಾರ ಸಂಕಷ್ಟ 


Team Udayavani, Jun 19, 2018, 12:39 PM IST

19-june-7.jpg

ಸಸಿಹಿತ್ಲು: ಇಲ್ಲಿನ ಸಸಿಹಿತ್ಲು ಬೀಚ್‌ ರಸ್ತೆಯ ಕಾಂಕ್ರೀಟ್‌ ಕಾಮಗಾರಿಯನ್ನು ಮಳೆಯ ಕಾರಣ ನೀಡಿ ಅರ್ಧದಲ್ಲಿಯೇ
ನಿಲ್ಲಿಸಿರುವುದರಿಂದ ನಿತ್ಯ ಸಂಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಸಸಿಹಿತ್ಲು ದರ್ಗಾದಿಂದ ಮುಂಡ ಬೀಚ್‌ನ ಬಸ್‌ನಿಲ್ದಾಣದವರೆಗೆ ವಿಶ್ವಬ್ಯಾಂಕ್‌ನ ನೆರವಿನಿಂದ ರಾಷ್ಟ್ರೀಯ ಬಿರುಗಾಳಿ ವಿಪತ್ತು ಕುಗ್ಗಿಸುವ ಯೋಜನೆ (ಎನ್‌ಸಿಆರ್‌ಎಂಪಿ) 4.5 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಗೊಳ್ಳುತ್ತಿದ್ದು, ಈಗ ಸಸಿಹಿತ್ಲು ಭಗವತೀ ದೇವಸ್ಥಾನದ ದ್ವಾರದ ಬಳಿಯೇ ಮೊಟಕುಗೊಂಡಿದೆ.

ಶಿಲಾನ್ಯಾಸ ನಡೆದು ನಾಲ್ಕು ತಿಂಗಳಾದರೂ ಕಾಮಗಾರಿಯಲ್ಲಿ ಶೇ.30ರ ಪ್ರಗತಿಯನ್ನೂ ಕಾಣದಿರುವುದರಿಂದ ಇಲ್ಲಿನ ಜನರಿಗೆ ಸಂಚರಿಸಲು ತೊಂದರೆಯಾಗಿದೆ. ಭಗವತೀ ದೇವಸ್ಥಾನದ ದ್ವಾರದಿಂದ ಬೀಚ್‌ವರೆಗಿನ ಕಾಮಗಾರಿ ಮುಗಿದರೂ ಮುಕ್ಕದತ್ತ ತೆರಳುವ ಭಾಗದಲ್ಲಿ ರಸ್ತೆಯನ್ನೆಲ್ಲಾ ಅಗೆದು ರಸ್ತೆಯನ್ನು ಹೊಂಡ ಗುಂಡಿ ರಸ್ತೆಯನ್ನಾಗಿ ಪರಿವರ್ತಿಸಿರುವುದರಿಂದ ಸಂಚರಿಸಲು ತೀವ್ರ ತೊಂದರೆಯಾಗಿದೆ.

ಜೂ. 5ರಂದು ದೆಹಲಿಯ ವಿಶ್ವ ಬ್ಯಾಂಕ್‌ ಪ್ರತಿನಿಧಿಗಳ ತಂಡವು ಆಗಮಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸ್ಪಷ್ಟವಾದ ಸೂಚನೆ ನೀಡಿದ್ದರೂ ಸಹ ಕಾಮಗಾರಿ ಅರ್ಧದಲ್ಲಿಯೇ ನಿಲ್ಲಿಸಲಾಗಿದೆ.

ವನಮಹೋತ್ಸವ..!
ಸಸಿಹಿತ್ಲುವಿನ ದರ್ಗಾದಿಂದ ಹಿಡಿದು ಭಗವತೀ ದ್ವಾರದವರೆಗೆ ಇರುವ ಹೊಂಡ ಗುಂಡಿಗಳಿಗೆ ಸ್ಥಳೀಯ ನಾಗರಿಕರು ಹೂವಿನ ಹಾಗೂ ಬಾಳೆ ಗಿಡಗಳನ್ನು ನೆಟ್ಟು ರಸ್ತೆಯ ಅವ್ಯವಸ್ಥೆಯ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಸಿಲು ಬಂದ  ತತ್‌ಕ್ಷಣ ಆರಂಭ
ಸಸಿಹಿತ್ಲು ಬೀಚ್‌ನಿಂದ ದರ್ಗಾದವರೆಗೆ ಸುಮಾರು 6.1 ಕಿ.ಮೀ. ಉದ್ದದ ರಸ್ತೆಯನ್ನು ಒಂಭತ್ತು ತಿಂಗಳ ಕಾಲಾವಕಾಶದಲ್ಲಿ ನಿರ್ಮಿಸಲಾಗುತ್ತಿದೆ. ಭಗವತೀ ದ್ವಾರದ ಬಳಿಯ ರಸ್ತೆಯ 1.5 ಕಿ.ಮೀ. ನ ಒಂದು ಭಾಗವನ್ನು ಪೂರ್ಣಗೊಳಿಸಲಾಗಿದೆ. ಮಳೆಯಿಂದಾಗಿ ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸಿದ್ದು, ಬಿಸಿಲು ಬಂದ ತತ್‌ಕ್ಷಣ ಆರಂಭಿಸಲಾಗುವುದು.
– ರವಿಕುಮಾರ್‌,
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು,
ಲೋಕೋಪಯೋಗಿ ಇಲಾಖೆ, ಮಂಗಳೂರು

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.