ಮುಡಿಪು: ಗೋಡೆ ಕೊರೆದು ಜ್ಯುವೆಲ್ಲರಿ ದರೋಡೆ; ಮಾಲೀಕನ ನೆರವಿಗೆ ಬಂತು ತಂತ್ರಜ್ಞಾನ
Team Udayavani, Aug 6, 2021, 11:18 AM IST
ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಸಾವಿರಾರು ರೂ.ಮೌಲ್ಯದ ಬೆಳ್ಳಿ ಸಾಮಾಗ್ರಿ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ.
ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ.
ಇದನ್ನೂ ಓದಿ:ಮುಂದಿನ ನಾಲ್ಕು ತಿಂಗಳಲ್ಲಿ 136 ಕೋಟಿ ಡೋಸ್ ಭಾರತದಲ್ಲಿ ಲಭ್ಯ : ಕೇಂದ್ರ ಸರ್ಕಾರ
ದರೋಡೆ ತಡೆದ ತಂತ್ರಜ್ಞಾನ!
ಕಳ್ಳರು ಗೋಡೆ ಕೊರೆದು ಒಳನುಗ್ಗುತ್ತಿದ್ದಂತೆ ಸೈರನ್ ಮೊಳಗಿದೆ. ಆದರೂ ಬೆಳ್ಳಿ ಸರವನ್ನು ಎಗರಿಸಿದ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ. ಸಿಸಿಟಿವಿ ಆಪ್ ಜ್ಯುವೆಲ್ಲರಿ ಮಾಲೀಕರ ಮೊಬೈಲಿನಲ್ಲಿ ಇದ್ದುದರಿಂದ ಮೊಬೈಲ್ ಮೂಲಕ ಸೈರನ್ ಗೋಚರಿಸಿದ್ದು, 10 ನಿಮಿಷಗಳಲ್ಲಿ ಜ್ಯುವೆಲ್ಲರಿ ಮಾಲೀಕರು ಅಂಗಡಿ ತಲುಪಿದ್ದರು. ಅಷ್ಟರಲ್ಲಾಗಲೇ ಆಗಂತುಕರು ಬೆಳ್ಳಿ ಸರದೊಂದಿಗೆ ಪರಾರಿಯಾಗಿದ್ದಾರೆಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳವನ್ನು ಕರೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.