Robbery,Theft Case: ನಾಲ್ವರು ಅಂತರ್ ಜಿಲ್ಲಾ ಆರೋಪಿಗಳ ಸೆರೆ
Team Udayavani, Oct 3, 2023, 10:44 PM IST
ಮೂಲ್ಕಿ: ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಡೆದ ದರೋಡೆ ಮತ್ತು ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಅಂತರ್ ಜಿಲ್ಲಾ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮೂಲ್ಕಿ ಠಾಣಾ ಪೊಲೀಸ್ ನಿರೀಕ್ಷಕ ವಿದ್ಯಾಧರ ಡಿ. ಬಾಯ್ಕೆàರಿಕರ್ ಅವರು ಸಿಬಂದಿ ಜತೆ ಪುನರೂರು ಚೆಕ್‌ಪೋಸ್ಟ್ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದವಾಗಿ ಬಂದ ಎರಡು ಬೈಕ್ ಮತ್ತು ಕಾರನ್ನು ನಿಲ್ಲಿಸಿ ವಿಚಾರಣೆಗೊಳಪಡಿಸಿದಾಗ ದರೋಡೆ ಮತ್ತು ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳಿಂದ ಎರಡು ಬೈಕ್, ಒಂದು ಕಾರು, ತುಂಡಾದ ಕರಿಮಣಿ ಸರವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣ ಇನ್ನೋರ್ವ ಆರೋಪಿ ದಾವಣಗೆರೆಯ ರಘುನನ್ನು ಈ ಹಿಂದೆ ಬಂಧಿಸಲಾಗಿತ್ತು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಇತರ ಆರೋಪಿಗಳ ಮಾಹಿತಿ ನೀಡಿದ್ದ.
ದಾವಣಗೆರೆಯ ಪ್ರಮೋದ್, ಎಚ್. ರವಿಕಿರಣ್, ದಾವಲ ಸಾಬ್ ಎಚ್. ಮತ್ತು ಮಂಜುನಾಥ್‌ನನ್ನು ಮಂಗಳವಾರ ಬಂಧಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅವರಲ್ಲಿ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಭಾರತ ಬಲಿಷ್ಠವಾಗಲು ಕೌಶಲಯುತ ಶಿಕ್ಷಣ ಅಗತ್ಯ: ಡಾ| ನಿರ್ಮಲಾನಂದನಾಥ ಸ್ವಾಮೀಜಿ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.