“ತುಳು ಭಾಷೆಯ ಬೇರು ಮೂಲ ಸಂಸ್ಕೃತಿ’


Team Udayavani, Aug 14, 2017, 7:30 AM IST

moola-samskruti.jpg

ವಿಟ್ಲ : ಅಯನ ಎಂದರೆ ನಡೆಯುವುದು; ನಡವಳಿಕೆ ಎಂದರ್ಥ. ಸೂರ್ಯನಿಗೆ ಎರಡು ಅಯನಗಳಿವೆ. ಒಂದು ಉತ್ತರಾಯಣ ಇನ್ನೊಂದು ದಕ್ಷಿಣಾಯಣ. ಜೀವನ ಸರಿಯಾದ ರೀತಿಯಲ್ಲಿ ನಡೆಯಬೇಕಾದರೆ ಧರ್ಮದ ಸೂತ್ರ ಬೇಕು. ಸಂಸ್ಕೃತಿ ಉಳಿಯಬೇಕು. ಭಾಷೆಯ ಹಿಂದೆ ಸಂಸ್ಕೃತಿಯೂ ಇದೆ. ತುಳು ಭಾಷೆಯ ಬೇರು ಮೂಲ ಸಂಸ್ಕೃತಿ. ಇದು ಜಲ ಸಂಸ್ಕೃತಿಯೂ ಹೌದು. ಮೂಲ ಸಂಸ್ಕೃತಿಯನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ತುಳುನಾಡು ಉಳಿಯಬೇಕಾದರೆ ನಮ್ಮ ಭಾಷೆ, ನೆಲ, ಜಲ ಉಳಿಸುವ ಕಾರ್ಯ ಆಗಬೇಕು. ಕಾಡವರ, ಕಡಲವರ, ನಾಡವರಿಂದ ಕೂಡಿದ ತುಳುನಾಡು ತುಳು ರಾಜ್ಯವಾಗಲಿ. ನಿರಂತರ ಪರಿಶ್ರಮದಿಂದ ಅತೀ ಶೀಘ್ರ ಫ‌ಲ ಲಭಿಸುವಂತಾಗಲಿ ಎಂದು ಶ್ರೀ  ಗುರುದೇವಾನಂದ ಸ್ವಾಮೀಜಿ ಹೇಳಿದರು.

ಒಡಿಯೂರು ಶ್ರೀ ಸಂಸ್ಥಾನದಲ್ಲಿ ಒಡಿಯೂರª ತುಳುಕೂಟ ಹಾಗೂ ಒಡಿಯೂರು ಶ್ರೀ ಗುರುದೇವ ವಿದ್ಯಾ ಪೀಠ ಜಂಟಿಯಾಗಿ ಆಯೋಜಿಸಿದ್ದ “ಆಟಿದ ಆಯನೊ’ ಹಾಗೂ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ “ಜೋಕ್ಲೆನ ತುಳುಕೂಟ’ ವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ, ಕಳಸೆಗೆ ಭತ್ತ ತುಂಬುವುದರೊಂದಿಗೆ ಚಾಲನೆಯಿತ್ತು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ದ.ಕ.ಜಿ.ಪಂ.ನ ಯೋಜನ  ನಿರ್ದೇಶಕ  ಟಿ.ಎಸ್‌. ಲೋಕೇಶ್‌ ಶುಭಹಾರೈಸಿ ಶ್ರೀ ಸಂಸ್ಥಾನದ ಎಲ್ಲ ಸಾಮಾಜಿಕ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ  ನೀಡುವುದಾಗಿ ತಿಳಿಸಿದರು. 

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕ ಎಚ್‌.ಕೆ. ಪುರುಷೋತ್ತಮ, ಒಡಿಯೂರು ಗುರುದೇವ ಸೇವಾ ಬಳಗ ಮಂಗಳೂರು ವಲಯದ ಅಧ್ಯಕ್ಷ  ಜಯಂತ ಜೆ. ಕೋಟ್ಯಾನ್‌, ಪ್ರೌಢಶಾಲಾ ಮುಖ್ಯ ಶಿಕ್ಷಕ ಎ. ಜಯಪ್ರಕಾಶ್‌ ಶೆಟ್ಟಿ, ಒಡಿಯೂರು ಶಾಲಾ ಜೋಕ್ಲೆನ ತುಳುಕೂಟದ ಅಧ್ಯಕ್ಷ ಮಂಜುನಾಥ  ಮತ್ತಿತರರು ಉಪಸ್ಥಿತರಿದ್ದರು. 

ಒಡಿಯೂರª ತುಳುಕೂಟದ ಅಧ್ಯಕ್ಷ  ಮಲಾರ್‌ ಜಯರಾಮ ರೈ ಸ್ವಾಗತಿಸಿದರು. ಒಡಿಯೂರು ಗ್ರಾಮಕಾಸ ಯೋಜನೆಯ ಪ್ರಧಾನ ಸಂಚಾಲಕ  ಟಿ. ತಾರಾನಾಥ ಕೊಟ್ಟಾರಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  ಮಾತೇಶ್‌ 
ಭಂಡಾರಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಸುಬ್ರಹ್ಮಣ್ಯ ಒಡಿಯೂರು  ವಂದಿಸಿದರು. 

ಒಡಿಯೂರª ತುಳುಕೂಟದ ಸದಸ್ಯರಿಂದ,  ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಆಟಿ ತಿಂಗಳ ತಿಂಡಿ-ತಿನಿಸುಗಳ ಸ್ಪರ್ಧೆಯಲ್ಲಿ ಸುಮಾರು 81 ಬಗೆಯ ವೈವಿಧ್ಯಮಯ ಖಾದ್ಯಗಳು ಪ್ರದರ್ಶನಗೊಂಡವು. 

ಟಾಪ್ ನ್ಯೂಸ್

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Shimoga; Congress – Statement against Muslims: Sumoto case against KS Eshwarappa

Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

8

Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.