‘ಹಳೆ ಬಂದರು ರಸ್ತೆ ಅಭಿವೃದ್ಧಿಗೆ 1ಕೋಟಿ ರೂ.’
Team Udayavani, Oct 20, 2017, 10:03 AM IST
ಸ್ಟೇಟ್‌ಬ್ಯಾಂಕ್: ಮಂಗಳೂರು ಹಳೆ ಬಂದರು ಅಭಿವೃದ್ಧಿಯನ್ನು ಕೇಂದ್ರವಾಗಿಟ್ಟುಕೊಂಡು ಪ್ರಸ್ತುತ ಹ್ಯಾಮಿಲ್ಟನ್ ವೃತ್ತದಿಂದ ಹಳೆ ಬಂದರಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟೀ ಕೃತಗೊಳಿಸಲು ರಾಜ್ಯ ಸರಕಾರದಿಂದ 1 ಕೋಟಿ ರೂ. ಮಂಜೂರು ಮಾಡಿಸಿರುವುದಾಗಿ ಶಾಸಕ ಜೆ.ಆರ್. ಲೋಬೋ ತಿಳಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಸ್ಟೇಟ್ಬ್ಯಾಂಕ್ ವೃತ್ತದಿಂದ ಹಳೆ ಬಂದರು ವೃತ್ತದವರೆಗೆ 1 ಕೋಟಿ ರೂ.ವೆಚ್ಚದಲ್ಲಿ ನಡೆಸಲಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಇಲಾಖೆ ಸಚಿವರೊಂದಿಗೆ ಮಾತುಕತೆ ಮಾಡಿ ವಿಶೇಷ ಅನುದಾನವಾಗಿ ಈ ಮೊತ್ತವನ್ನು ತರಲಾಗಿದೆ. ಹ್ಯಾಮಿಲ್ಟನ್ ವೃತ್ತದಿಂದ ಹಳೆ ಬಂದರಿಗೆ ಹೋಗುವ ರಸ್ತೆಯನ್ನು ಸುಸ್ಥಿತಿಗೆ ತರಲಾಗುವುದು ಎಂದರು.
ಮೀನುಗಾರಿಕೆ ಬಂದರು ಅಭಿವೃದ್ಧಿಗಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳು 100 ಕೋಟಿ ರೂಪಾಯಿ ಅನುದಾನ ಒದಗಿಸಿದ್ದು, ಈ ಪೈಕಿ ರಾಜ್ಯ ಸರಕಾರ ಶೇ. 60 ಮತ್ತು ಕೇಂದ್ರ ಸರಕಾರ ಶೇ. 40 ಅನುಪಾತದಲ್ಲಿ ಮೊತ್ತ ನೀಡಿದೆ. ಈ ಹಣದಿಂದ ಮಂಗಳೂರು ಬಂದರಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಬದ್ರಿಯಾ ಕಾಲೇಜಿನ ಪ್ರಾಂಶುಪಾಲ ಇಸ್ಮಾಯಿಲ್, ಕಾರ್ಪೊರೇಟರ್ ಅಬ್ದುಲ್ ಲತೀಫ್, ಭೂನ್ಯಾಯ ಮಂಡಳಿ ಸದಸ್ಯ ಡೆನ್ನೀಸ್ ಡೇಸಾ, ಅಸ್ಲಾಂ, ನೆಲ್ಸನ್ ಮೊಂತೇರೊ, ಮುಸ್ತಫಾ, ಎಇಇ ರವಿಕುಮಾರ್, ಎಇ ರತ್ನಾಕರ್ ಉಪಸ್ಥಿತರಿದ್ದರು.
ಲಕ್ಷದ್ವೀಪಕ್ಕೆ ನಿಯೋಗ : ಶಾಸಕ ಲೋಬೋ
ಮಹಾನಗರ, ಅ.19: ಲಕ್ಷದ್ವೀಪಕ್ಕೆ ಅ.29ರಿಂದ 31 ರ ವರೆಗೆ ಉನ್ನತಮಟ್ಟದ ನಿಯೋಗ ಕೊಂಡೊಯ್ಯುವುದಾಗಿ ಶಾಸಕ ಜೆ.ಆರ್.ಲೋಬೋ ತಿಳಿಸಿದರು. ಅವರು ಮಂಗಳೂರು ಹಳೆಬಂದರು ಅಭಿವೃದ್ಧಿಗೆ ಇತ್ತೀಚೆಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಲಕ್ಷದ್ವೀಪದೊಂದಿಗೆ ಮಾತುಕತೆ ನಡೆಸಿ ವ್ಯಾಪಾರ ವಹಿವಾಟು ಪುನರಾರಂಭ ಮಾಡುವ ನಿಟ್ಟಿನಲ್ಲಿ ನಿಯೋಗ ಕೊಂಡೊಯ್ಯಲಾಗುವುದು. ಲಕ್ಷ ದ್ವೀಪ ಹಿಂದೆ ಸಾಕಷ್ಟು ವಹಿವಾಟು ಮಾಡುತ್ತಿತ್ತು. ಈಗ ಅದು ನಿಲ್ಲಿಸಿದ್ದು, ವ್ಯಾಪಾರ ಪುನರಾರಂಭ ಮಾಡುವಂತೆ ಮನವೊಲಿಸಲಾಗುವುದು ಮತ್ತು ಮಂಗ ಳೂರು ಹಳೆ ಬಂದರಿನಲ್ಲಿ 70 ಕೋಟಿ ರೂ. ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲು ಮನವಿ ಮಾಡಲಾಗುವುದು ಎಂದರು.ಇವುಗಳು ಸಾಧ್ಯವಾದರೆ ಲಕ್ಷ ದ್ವೀಪಕ್ಕಾಗಿಯೇ ಪ್ರತ್ಯೇಕ ಜೆಟ್ಟಿ ಯಾಗುತ್ತದೆ. ಈ ಮೊತ್ತವನ್ನು ಲಕ್ಷ ದ್ವೀಪವೇ ಪಾವತಿಸುವಂತೆ ಮನವಿ ಮಾಡಲಾಗುವುದು. ತಾವೂ ಈಗಾಗಲೇ ಲಕ್ಷ ದ್ವೀಪದ ಸಂಸದರನ್ನು ಸಂಪರ್ಕಿಸಿದ್ದು, ಅವರು ಕೂಡ ಮಾತುಕತೆಗೆ ಆಸಕ್ತಿ ತೋರಿಸಿದ್ದಾರೆ ಎಂದು ಹೇಳಿದರು.ಲಕ್ಷದ್ವೀಪದೊಂದಿಗೆ ಮಾತು ಕತೆ ಫಲ ಪ್ರದವಾದರೆ ಮಂಗಳೂರು ಬಂದರಿನಲ್ಲಿ ಮತ್ತೆ ವಹಿವಾಟು ವೃದ್ಧಿಯಾಗುತ್ತದೆ ಎಂದ ಅವರು, ಈಗ ಲಕ್ಷ ದ್ವೀಪ ಕೇರಳಕ್ಕೆ ತನ್ನ ವಹಿವಾಟು ಮುಂದುವರಿಸಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.