ಮಂಗಳೂರು ಅಭಿವೃದ್ಧಿಗೆ 2,500 ಕೋಟಿ ರೂ.: ಶಾಸಕ ಲೋಬೋ
Team Udayavani, Oct 31, 2017, 11:32 AM IST
ಜಪ್ಪಿನಮೊಗರು: ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸುಮಾರು 2,500 ಕೋಟಿ ರೂಪಾಯಿ ಅನುದಾನ ಮಂಜೂರಾಗುವ ನಿರೀಕ್ಷೆ ಇದೆ ಎಂದು ಶಾಸಕ ಜೆ.ಆರ್.ಲೋಬೋ ಹೇಳಿದರು. ನಗರದ ಜಪ್ಪಿನಮೊಗರು ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರನ್ನು ಮಾದರಿ ನಗರವಾಗಿ ಮಾಡುವ ದೃಷ್ಟಿಯಿಂದ ಎಡಿಬಿ ಎರಡನೇ ಹಂತದ ಕಾಮಗಾರಿಗೆ 600 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದರು.
ಅಂತಾರಾಷ್ಟ್ರೀಯ ಕ್ರೀಡಾ ಗ್ರಾಮ
ನನ್ನ ಕ್ಷೇತ್ರವಲ್ಲದಿದ್ದರೂ ನಾನು ಮುತುವರ್ಜಿ ವಹಿಸಿ ಪಂಜಿಮೊಗರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಗ್ರಾಮವನ್ನು
ಸ್ಥಾಪಿಸಲು ಸುಮಾರು 1,000 ಎಕರೆ ಭೂಮಿಯನ್ನು ಗುರುತಿಸಿದ್ದೇನೆ. ನೇತ್ರಾವತಿ ಸೇತುವೆಯಿಂದ ಕಣ್ಣೂರು ಮಸೀದಿ ವರೆಗೆ ನದಿ ತೀರದಲ್ಲಿ ಚತುಷ್ಪಥ ರಸ್ತೆಯನ್ನು ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಬೆಂಗಳೂರಿನಿಂದ ಅಧಿಕಾರಿಗಳ ತಂಡ ಬಂದು ಅಧ್ಯಯನ ನಡೆಸಿದೆ. ಇಲ್ಲಿ ಸುಮಾರು 350ರಿಂದ 400 ಕೋಟಿ ರೂಪಾಯಿ ಹೂಡಿಕೆ ಆಗಲಿದೆ. ಇದನ್ನು ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಈ ಯೋಜನೆ ಸಾಕಾರಗೊಂಡರೆ ಜಪ್ಪಿನಮೊಗರು ಪ್ರದೇಶ ಬೆಳೆಯುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು. ಮಂಗಳೂರು ಹಳೆ ಬಂದರು ಮತ್ತು ನವಮಂಗಳೂರು ಬಂದರಿಗೆ ಸಂಪರ್ಕ ಸಾಧಿಸುವ ಯೋಜನೆಯೂ ಇದೆ ಎಂದ ಅವರು, ಇವೆಲ್ಲವುಗಳಿಗೂ ಜನರ ಸಹಕಾರ ಅತಿ ಅಗತ್ಯ ಎಂದರು.
ಜಪ್ಪಿನಮೊಗರು ಪ್ರದೇಶವನ್ನು ಅಭಿವೃದ್ಧಿಪಡಿಸಲು ಮೊದಲ ಕಂತಾಗಿ 1.5 ಕೋಟಿ ರೂಪಾಯಿ ಮಂಜೂರಾಗಿದ್ದು,
ಜನರು ಆಸಕ್ತಿ ವಹಿಸಿ ಜಾಗ ಬಿಟ್ಟುಕೊಟ್ಟರೆ ಇನ್ನೂ ಹೆಚ್ಚಿನ ಅನುದಾನವನ್ನು ಮಂಜೂರು ಮಾಡಿಸಿ, ಇದನ್ನು ಮಾದರಿ ನಗರವಾಗಿ ಮಾಡುವ ಸಂಕಲ್ಪವಿದೆ ಎಂದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಸುರೇಂದ್ರ, ಪ್ರವೀಣಚಂದ್ರ ಆಳ್ವ, ಸದಾನಂದ ಆಳ್ವ, ಮಂಗಳೂರು ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಡೆನ್ನಿಸ್ ಡಿ’ಸಿಲ್ವ, ಹರ್ಬರ್ಟ್ ಡಿ’ಸೋಜಾ, ಅನಿಲ್ ಶೆಟ್ಟಿ, ದಿನೇಶ್ ಅಂಚನ್, ಪ್ರಕಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.