Mangaluru; ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ.ಪ್ರಕಾಶ್ ಶೆಟ್ಟಿ

Team Udayavani, Dec 24, 2023, 4:56 PM IST

Mangaluru; ಎಂ.ಆರ್.ಜಿ. ಗ್ರೂಪ್ ನಿಂದ ಅಶಕ್ತರಿಗೆ 4 ಕೋಟಿ ರೂ. ನೆರವು: ಕೆ. ಪ್ರಕಾಶ್ ಶೆಟ್ಟಿ

ಮಂಗಳೂರು: ನನ್ನ ಆದಾಯದ ಒಂದು ಭಾಗವನ್ನು ಸಮಾಜಕ್ಕೆ ಮೀಸಲಿಟ್ಟು ಅಶಕ್ತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ, ಅರೋಗ್ಯವನ್ನು ನೀಡುವ ಉದ್ದೇಶದಿಂದ ಎಂ.ಆರ್.ಜಿ. ಗ್ರೂಪ್ ಮೂಲಕ ಪ್ರತಿವರ್ಷ ನೆರವು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಪ್ರಾರಂಭದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಈ ಬಾರಿ 4 ಕೋಟಿ ರೂ. ನೆರವು ನೀಡಲು ಮುಂದಾಗಿದ್ದೇವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳಿಗೆ ಇದರ ಆರ್ಜಿ ನಮೂನೆಯನ್ನು ಕಳುಹಿಸಿ ಪ್ರತಿ ಭಾಗದಿಂದ 25ರಷ್ಟು ಅರ್ಜಿಯನ್ನು ಸ್ವೀಕರಿಸಿ ಅದನ್ನು ಪರಿಶೀಲಿಸಿ 2000 ಅರ್ಜಿಗಳಲ್ಲಿ 1800 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಸಮಾಜದ ನೊಂದವರು, ಅಶಕ್ತರಿಗೆ ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ಎಂ.ಆರ್.ಜಿ. ಗ್ರೂಪ್ ಚೇರ್ ಮೆನ್ ಕೆ. ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ ನೆರವು ಪ್ರದಾನ ಕಾರ್ಯಕ್ರಮ ಡಿಸೆಂಬರ್ 25ರಂದು ಸಂಜೆ 3 ಗಂಟೆಗೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಚಲನಚಿತ್ರ ನಟ, ನಿರ್ದೇಶಕ ರಮೇಶ್ ಅರವಿಂದ್, ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಆಡಳಿತ ನಿರ್ದೇಶಕ ಗೌರವ್ ಪಿ. ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುತ್ತಾರೆ. ಸಂಘ ಸಂಸ್ಥೆಗಳ ಮೂಲಕ ಆಯ್ಕೆ ಮಾಡಿರುವುದರಿಂದ ಫಲಾನುಭವಿಗಳನ್ನು ಕರೆದುಕೊಂಡು ಬರುವ ಹೊಣೆಗಾರಿಕೆಯನ್ನು ಆಯಾ ಪ್ರದೇಶದ ಸಂಘ ಸಂಸ್ಥೆಗಳಿಗೆ  ನೀಡಲಾಗಿದೆ. ಅವರ ಪ್ರಯಾಣ ವೆಚ್ಚವನ್ನು ನಮ್ಮ ಸಂಸ್ಥೆಯೇ ಭರಿಸುತ್ತದೆ. ನೆರವು ವಿತರಣೆ ಸಮಾರಂಭದಲ್ಲಿ 25 ಕೌಂಟರ್ ಗಳನು ತೆರೆಯಲಾಗುತ್ತದೆ. ಅಲ್ಲಿ ಫಲಾನುಭವಿಗಳು ತಮ್ಮ ಹೆಸರು ಹೇಳಿ ಮತ್ತು ಈಗಾಗಲೇ ವಿತರಣೆ ಮಾಡಿರುವ ಟೋಕನ್ ಗಳನ್ನು ತೋರಿಸಿ ಚೆಕ್ ಪಡೆಯಬಹುದು. ಎಲ್ಲಿಯೂ ಅನವಶ್ಯಕ ಗೊಂದಲ ಉಂಟಾಗದಂತೆ ನೋಡಿಕೊಳ್ಳಲಾಗಿದೆ” ಎಂದರು.

“ಮಾನಸಿಕ, ಅಂಗವೈಕಲ್ಯ, ದೀರ್ಘ ಕಾಲೀನ ಚಿಕಿತ್ಸೆ ಬೇಡುವ ಕ್ಯಾನ್ಸರ್ ನಂತಹ ರೋಗಗಳಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆಗೆ  ನೆರವು ನೀಡಲು ಆದ್ಯತೆ ಕೊಟ್ಟಿದ್ದೇವೆ. ಪ್ರತಿಭಾವಂತ ಆದರೆ ಕಷ್ಟದ ಪರಿಸ್ಥಿತಿಯಲ್ಲಿರುವ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಿದ್ದೇವೆ. ಉಳಿದಂತೆ ಕ್ರೀಡಾಳುಗಳು, ರಾಷ್ಟ್ರ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸಾಧಕರನ್ನು ಪ್ರೋತ್ಸಾಹಿಸಲು ಅವರನ್ನು ಗೌರವಿಸಲು ಪುರಸ್ಕಾರಕ್ಕಾಗಿ ಆಯ್ಕೆ ಮಾಡಲಾಗಿದೆ” ಎಂದು ಪ್ರಕಾಶ್ ಶೆಟ್ಟಿ ಹೇಳಿದರು.

ಮಾನವೀಯ ನೆರವು: ಬೆಂಗಳೂರಿನಲ್ಲಿ ನಡೆದ ಕಂಬಳವನ್ನು ವೀಕ್ಷಿಸಿ ಊರಿಗೆ ಮರಳುತ್ತಿದ್ದವರು ಅಪಘಾತದಲ್ಲಿ ಸಾವಿಗೀಡಾದ ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ ಮತ್ತು ಗಾಯಗೊಂಡವರಿಗೆ ಮಾನವೀಯ ನೆಲೆಯಲ್ಲಿ ನೆರವು ನೀಡಲಾಗುತ್ತಿದೆ. ಇದರಿಂದ ಆ ಕುಟುಂಬಕ್ಕಾದ ನಷ್ಟವನು ಭರಿಸಲಾಗದಿದ್ದರೂ ಅವರಲ್ಲೊಂದು ಧೈರ್ಯ ತುಂಬುವ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳುವ ಪ್ರಯತ್ನ ಮಾಡುತ್ತಿದ್ದೇವೆ.

ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ನೇಮಕ: ಸಮಾಜ ಸೇವಾ ರತ್ನ ಕಾಪು ಲೀಲಾಧರ ಶೆಟ್ಟಿ ಅವರು ಕಾಪುವಿನಲ್ಲಿ ಶಾಲೆಯನ್ನು ನಡೆಸುತ್ತಿದ್ದರು. ಶಿಕ್ಷಕರ ಕೊರತೆಯನ್ನು ಅವರು ಗೌರವ ಶಿಕ್ಷಕರ ನೇಮಕ ಮಾಡಿ ತಾವೇ ಖರ್ಚು ಭರಿಸುತ್ತಿದ್ದರು. ಅವರ ನಿಧನದ ಬಳಿಕ ಅಲ್ಲಿ ಶಿಕ್ಷಕರಿಗೆ ವೇತನದ ಸಮಸ್ಯೆಯಾಗಬಾರದು ಮತ್ತು ಮಕ್ಕಳು ವಿದ್ಯಾ ವಂಚಿತರಾಗಬಾರದು ಎಂದು ಇನ್ನ್ನು ಮುಂದಿನ ಕೆಲ ವರ್ಷ ಆ ಶಾಲೆಗೆ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತದ ಮೂಲಕ “ನೆರವು” ನೀಡಲಾಗುವುದು.

ಡಿಜಿಟಲ್ ಕಂದಕ ನಿವಾರಣೆಗೆ ಪ್ರಯತ್ನ: ತಮಗೆಲ್ಲ ಗೊತ್ತಿದೆ, ಆಧುನಿಕ ತಂತ್ರಜ್ಞಾನ ನಗರಗಳಲ್ಲಿ ಲಭ್ಯವಾದಷ್ಟು ಪ್ರಮಾಣದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಲಭ್ಯ ಇಲ್ಲ. ಇದು ಶಾಲಾ ಮಕ್ಕಳ ಕಲಿಕಾ ಸೌಲಭ್ಯಗಳಿಗೂ ಅನ್ವಯಿಸುತ್ತದೆ. ಬಂಟ್ವಾಳದ ಶಾಲೆಯೊಂದಕ್ಕೆ ಕಂಪ್ಯೂಟರ್ ನೀಡುವ ಮೂಲಕ ಅಲ್ಲಿಯ ಮಕ್ಕಳನ್ನು ಕಂಪ್ಯೂಟರ್ ಸಾಕ್ಶರರನ್ನಾಗಿಸುವ ಪ್ರಯತ್ನ ಮಾಡುತ್ತಿದ್ದೇವೆ. ಡಿಜಿಟಲ್ ಕಂದಕ ನಿವಾರಣೆಯ ನಿಟ್ಟಿನಲ್ಲಿ ನಮ್ಮದೊಂದು ಸಣ್ಣ ಪ್ರಯತ್ನ ಇದು.

ಶೌಚಾಲಯಕ್ಕೆ ನೆರವು: ನೈರ್ಮಲ್ಯಕ್ಕೆ ಶಾಲೆಗಳೇ ಮೊದಲ ಪಾಠ ಶಾಲೆ ಎನ್ನಬಹುದು. ಸಾರ್ವಜನಿಕ ಬದುಕಿನಲ್ಲಿ ನೈರ್ಮಲ್ಯ ಪಾಲನೆಯನ್ನು ಮಕ್ಕಳಿಗೆ ಕಲಿಸುವಲ್ಲಿ ಶಾಲೆಗಳ ಪಾತ್ರ ಮಹತ್ವದ್ದು. ಹೆಣ್ಣು ಮಕ್ಕಳ ಪಾಲಿಗೆ ಶೌಚಾಲಯ ಘನತೆಗೆ ಸಂಬಂಧಿಸಿದ ಸಂಗತಿ. ಕಾಪು ಕೈಪುಂಜಾಲಿನಲ್ಲಿ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಧ್ಯಕ್ಷರಾಗಿರುವ ವಿದ್ಯಾ ಸಾಗರ ಎಜ್ಯುಕೇಶನ್ ಟ್ರಸ್ಟ್ ಶಾಲೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ  ನೆರವು ವಿತರಿಸಲಾಗುವುದು.

ಕ್ರೀಡಾ ಪ್ರೋತ್ಸಾಹ: ಸರಕಾರದ ಖೇಲೋ ಇಂಡಿಯಾದಂತಹ ಯೋಜನೆಗಳು ಗ್ರಾಮೀಣ ಕ್ರೀಡಾಳುಗಳನ್ನು ಪ್ರೋತ್ಸಾಹಿಸುವ ಮಹತ್ವಾಕಾಂಕ್ಷಿ ಯೋಜನೆಗಳು. ಇದರಿಂದಾಗಿ ನಮ್ಮ ದೇಶದ ಅನೇಕ ಪ್ರತಿಭೆಗಳಿಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅವಕಾಶ ಲಭ್ಯವಾಗಿದೆ. ನಮ್ಮ ಈ ನೆರವಿನ ಯೋಜನೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿದ ನಮ್ಮ ಜಿಲ್ಲೆಯ ಕ್ರೀಡಾಳು ಆಯುಷ್ ಶೆಟ್ಟಿ ಅಮೆರಿಕಾದಲ್ಲಿ ನಡೆದ ವಿಶ್ವ ಜ್ಯೂನಿಯರ್ ಚಾಂಪಿಯನ್ ಶಿಪ್ ನಲ್ಲಿ ಕಂಚಿನ ಪದಕ ಪಡೆದವರು. ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಭಾರತದ ಹತ್ತನೇ  ಶಟ್ಲರ್ ಮತ್ತು ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪದಕ ಪಡೆದ ಕರ್ನಾಟಕ ಮೊದಲನೇ ಶಟ್ಲರ್ ಅರ್ಜುನ್ ಶೆಟ್ಟಿ ಅವರಿಗೆ ನೆರವು ನೀಡಲು ನಾವು ಹರ್ಷಿಸುತ್ತೇವೆ.

ಶೈಕ್ಷಣಿಕ ಸಾಧಕರಿಗೆ ವಿದ್ಯಾರ್ಥಿ ವೇತನ: ಪಿಯುಸಿಯಲ್ಲಿ 600/600 ಅಂಕ ಗಳಿಸಿದ ಅನನ್ಯ ಮತ್ತು ಎಸ್ಎಸ್ಎಲ್ಸಿಯಲ್ಲಿ 625/625 ಅಂಕ ಗಳಿಸಿದ ವೀಕ್ಷಿತಾ ಅವರನ್ನು   ಶೈಕ್ಷಣಿಕ ಸಾಧನೆಗಾಗಿ ಸನ್ಮಾನಿಸಿ ವಿದ್ಯಾರ್ಥಿ ವೇತನ ನೀಡಲಾಗುವುದು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.