ಗಿಡ ಬೆಳೆಸಲು ಮಕ್ಕಳಿಗೆ 5 ರೂ. ಪ್ರೋತ್ಸಾಹ


Team Udayavani, Oct 26, 2022, 4:09 PM IST

ಗಿಡ ಬೆಳೆಸಲು ಮಕ್ಕಳಿಗೆ 5 ರೂ. ಪ್ರೋತ್ಸಾಹ

ಬೆಂಗಳೂರು: ಬಾಲ್ಯದಲ್ಲೆ ಶಾಲಾ ಮಕ್ಕಳಲ್ಲಿ ಪರಿಸರ ಪ್ರೇಮ ಬಿತ್ತುವ ನಿಟ್ಟಿನಲ್ಲಿ ಬೆಂಗಳೂರು ನಗರ ಜಿಪಂನ ಹೂಸ್ಕೂರ್‌ ಗ್ರಾಪಂ ದಾಪುಗಾಲಿರಿಸಿದೆ. ನೆರಳೆ, ಹಲಸು, ಮಾವು ಸೇರಿದಂತೆ ಮತ್ತಿತರ ಹಣ್ಣಿನ ಸಸಿಗಳನ್ನು ಬೆಳೆಸಿ ಗ್ರಾಪಂಗೆ ನೀಡುವ ಮಕ್ಕಳಿಗೆ ಪ್ರತಿ ಗಿಡಕ್ಕೆ 5ರೂ.ಗಳ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಿದೆ.

ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಗೆ ಸೇರುವ ಹುಸ್ಕೂರ್‌ ಗ್ರಾಪಂನಲ್ಲಿ ಹತ್ತಕ್ಕೂ ಅಧಿಕ ಗ್ರಾಮಗಳಿವೆ. ತೋಟಗೆರೆ, ಬೊಮ್ಮಶೆಟ್ಟಿಹಳ್ಳಿ, ರಾಮಪಾಳ್ಯ,ಅಗ್ರಹಾರ ಪಾಳ್ಯ, ಹೊಸಹಳ್ಳಿ ಪಾಳ್ಯ, ಹುಚ್ಚನ ಪಾಳ್ಯ, ಗೋವಿಂದಪುರ,ಹೊನ್ನಸಂದ್ರ, ವಡೇರಹಳ್ಳಿ, ಬೆತ್ತನಗೆರೆ ಗ್ರಾಮಗಳು ಹೂಸ್ಕೂರ್‌ ಗ್ರಾಪಂ ವ್ಯಾಪ್ತಿಗೆ ಸೇರಲಿವೆ. ಕಿರಿಯ ಪ್ರಾಥಮಿಕ ಶಾಲೆಯಿಂದ ಹಿರಿಯ ಪ್ರಾಥಮಿಕ ಶಾಲೆ ವರೆಗೂ ನೂರಾರು ಸಂಖ್ಯೆಯಲ್ಲಿ ಮಕ್ಕಳು ಕಲಿಕೆಯಲ್ಲಿ ನಿರತರಾಗಿದ್ದಾರೆ. ಶಾಲಾ ಹಂತದಲ್ಲೆ ವಿದ್ಯಾರ್ಥಿಗಳನ್ನು ಪರಿಸದತ್ತ ಆಕರ್ಷಿಸುವ ಸದುದ್ದೇಶ ಕೂಡ ಇದರಲ್ಲಿ ಸೇರಿದೆ.

ಈ ಕಾರ್ಯಕ್ರಮ ಯಶಸ್ವಿ ಸಂಬಂಧ ಹೂಸ್ಕೂರ್‌ ಗ್ರಾಪಂ ಪಣತೊಟ್ಟಿದ್ದು ಶಾಲಾ ಶಿಕ್ಷಕರನ್ನು ಒಳಗೂಡಿಸಿದೆ. ಗ್ರಾಪಂ ವ್ಯಾಪ್ತಿಯ ಎಲ್ಲ ಶಾಲಾ ಶಿಕ್ಷಕರಿಗೆ ಈ ಬಗ್ಗೆ ಪಂಚಾಯ್ತಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಕ್ಕಳು ಕೂಡ ಸಸಿಗಳ ಬೆಳೆಸುವ ಬಗ್ಗೆ ಆಸಕ್ತಿಯನ್ನು ಕೂಡ ತೋರಿಸುತ್ತಿದ್ದಾರೆ ಎಂದು ಪಂಚಾಯ್ತಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸರ ದಿನೇ ದಿನೆ ಕ್ಷೀಣಿಸುತ್ತಿದೆ. ಭವಿಷ್ಯತ್ತಿನ ದೃಷ್ಟಿಯಿಂದ ಗಿಡಮರಗಳನ್ನು ಬೆಳೆಸಬೇಕಾಗಿದೆ.ಆ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಲ್ಲಿ ಗಿಡ ಬೆಳೆಸುವ ಸಂಸ್ಕೃತಿಯ ಬಗ್ಗೆ ತಿಳಿವಳಿಕೆ ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಹುಸ್ಕೂರ್‌ ಗ್ರಾಪಂ ಇದೀಗ ಪ್ರಾಯೋಗಿಕ ಹೆಜ್ಜೆಯಿರಿಸಿದ್ದು ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಪರಿಸರದ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಹೇಳಿದ್ದಾರೆ.

ಹಣ್ಣುಗಳ ಗಿಡದ ಬಗ್ಗೆ ತಿಳಿವಳಿಕೆ: ಮಕ್ಕಳು ಮೊಬೈಲ್‌ ನಲ್ಲೆ ಮುಳುಗಿ ಹೋಗುತ್ತಿದ್ದಾರೆ. ಜತೆಗೆ ಕೆಲವು ಮಕ್ಕಳಿಗೆ ಹಣ್ಣು ಬಿಡುವ ಗಿಡಗಳ ಬಗ್ಗೆ ಪರಿಚಯವೇ ಇಲ್ಲ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಹಣ್ಣು ಬಿಡುವ ಗಿಡಗಳ ಬಗ್ಗೆ ತಿಳಿವಳಿಕೆ ಮೂಡಿಸುವುದು ಕೂಡ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಹೂಸ್ಕೂರ್‌ ಗ್ರಾಪಂನ ಪಿಡಿಒ ರಾಜೇಶ್‌ ಹೇಳುತ್ತಾರೆ. ಗ್ರಾಪಂನಿಂದಲೇ ಹಣ್ಣಿನ ಗಿಡ ಬೆಳೆಸಲು ಮಕ್ಕಳಿ ಪ್ಲಾಸ್ಟಿಕ್‌ ಕೊಟ್ಟೆಗಳನ್ನು ಕೂಡ ನೀಡಲಾಗುತ್ತದೆ. ಅವುಗಳಲ್ಲಿ ಗಿಡಗಳನ್ನು ಪೋಷಿಸಿ, ಸಂರಕ್ಷಣೆ ಮಾಡಿ ಮಕ್ಕಳು ಗ್ರಾಪಂಗೆ ನೀಡಿದರೆ ಅವರಿಗೆ 5.ರೂ.ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪಂಚಾಯ್ತಿಯ ಸ್ವನಿಧಿಯಿಂದ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಬಳಕೆ ಮಾಡಲಾಗುವುದು ಎಂದು ತಿಳಿಸುತ್ತಾರೆ.

ಕೃಷಿಯತ್ತ ಒಲವು ತೋರಲು ಸಹಕಾರಿ: ಮಕ್ಕಳಲ್ಲಿ ಪರಿಸರ ಆಸಕ್ತಿ ಮೂಡಿಸಲು ಇಂತಹ ಕಾರ್ಯ ಕ್ರಮಗಳು ಅನುಕೂಲವಾಗಲಿದೆ. ಭವಿಷ್ಯತ್ತಿನ ದೃಷ್ಟಿ ಯಿಂದ ಇಂತಹ ಕಾರ್ಯಕ್ರಮಗಳು ರೂಪಿತ ವಾಗಬೇಕು. ಮಕ್ಕಳಲ್ಲಿ ನಮ್ಮ ಸುತ್ತಮುತ್ತಲಿನ ಪರಿ ಸರದ ಬಗ್ಗೆ ಅರಿವು ಮೂಡುವುದರ ಜತೆಗೆ ಮುಂದಿ ದಿನಗಳಲ್ಲಿ ಮಕ್ಕಳು ಕೃಷಿ ಕ್ಷೇತ್ರದತ್ತ ಒಲವು ತೋರಲು ಕೂಡ ಇದು ಸಹಾಕವಾಗಲಿದೆ ಎಂದು ನರಸೀಪುರ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎನ್‌.ವಿ. ರಮೇಶ್‌ ಹೇಳುತ್ತಾರೆ.

ಗ್ರಾಪಂ ವ್ಯಾಪ್ತಿಯಲ್ಲಿರುವ ಸ್ಮಶಾನ,ಅರಣ್ಯ ಪ್ರದೇಶ ಸೇರಿದಂತೆ ಮತ್ತತಿರರ ಸ್ಥಳಗಳಲ್ಲಿ ಗಿಡುವ ಕಾರ್ಯಕ್ರಮವನ್ನು ಗ್ರಾಪಂನಿಂದ ಹಮ್ಮಿಕೊಳ್ಳುವ ಆಲೋಚನೆ ಇದೆ. ಆ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಗ್ರಾಪಂನಿಂದ ನರ್ಸರಿ ಅನ್ನು ಕೂಡ ತೆರೆಯಲಾಗಿದೆ. ಗಿಡಮರಗಳನ್ನು ಬೆಳೆಸಿ ಸಂರಕ್ಷಿಸುವುದಕ್ಕೆ ಪಂಚಾಯ್ತಿ ಹೆಚ್ಚಿನ ಆದ್ಯತೆ ನೀಡಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಾಪಂ ಕಾರ್ಯ ಕೇವಲ ಒಳಚರಂಡಿ, ರಸ್ತೆ ನಿರ್ಮಾಣ ಮಾಡುವುದು ಅಷ್ಟೇ ಅಲ್ಲ. ಪರಿಸರದ ಬಗ್ಗೆ ಕಾಳಜಿ ತೋರುವುದು ಸೇರಿದೆ. ಆ ಹಿನ್ನೆಲೆಯಲ್ಲೆ ಇದೀಗ ಗ್ರಾಪಂನ ಶಾಲಾ ವಿದ್ಯಾರ್ಥಿಗಳಲ್ಲಿ ಪರಿಸರದತ್ತ ಆಕರ್ಷಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಿದೆ. ಮುಂದಿನಗಳಲ್ಲಿ ಸ್ಮಶಾನ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವ ಆಲೋಚನೆ ಇದೆ. – ರಾಜೇಶ್‌, ಪಿಡಿಒ, ಹೂಸ್ಕೂರ್‌ ಗ್ರಾಪಂ

-ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.