ಭೂಗತ ಕೇಬಲ್ ಅಳವಡಿಸಲು 50 ಕೋ.ರೂ.
Team Udayavani, Sep 30, 2017, 10:30 AM IST
ಮಲ್ಲಿಕಟ್ಟೆ: ನಗರದಲ್ಲಿ ಭೂಗತ ಕೇಬಲ್ ಅಳವಡಿಸುವ ಮೂಲಕ ವಿದ್ಯುತ್ ತಂತಿಗಳು ತೂಗಾಡುವುದನ್ನು ತಪ್ಪಿಸಿ ನಗರವನ್ನು ಸುಂದರಗೊಳಿಸಲು 50 ಕೋ.ರೂ. ಅನುದಾನವನ್ನು ಪಡೆಯಲಾಗತ್ತಿದೆ ಎಂದು ಶಾಸಕ ಜೆ.ಆರ್.ಲೋಬೋ ತಿಳಿಸಿದರು.
ಇಲ್ಲಿನ ತಮ್ಮ ಕಚೇರಿಯಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮೆಸ್ಕಾಂ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಪ್ರಾಯೋಗಿಕವಾಗಿ ಎ.ಬಿ.ಶೆಟ್ಟಿ ವೃತ್ತದಿಂದ ಕಂಕನಾಡಿ ಕರಾವಳಿ ಸರ್ಕಲ್‌ವರೆಗೆ 10 ಕೋ.ರೂ. ವೆಚ್ಚದಲ್ಲಿ ಭೂಗತ ಕೇಬಲ್ ಅಳವಡಿಸುವುವ ಕೆಲಸ ಬಹುತೇಕ ಮುಕ್ತಾಯ ಹಂತದಲ್ಲಿದೆ. ಇದನ್ನು ಆದಷ್ಟು ಬೇಗ ಮುಗಿಸಿ ನವೆಂಬರ್ ತಿಂಗಳಲ್ಲಿ ಇಂಧನ ಖಾತೆ ಸಚಿವರಿಂದ ಉದ್ಘಾಟನೆ ಮಾಡಿಸಲಾಗುವುದು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮಂಗಳೂರನ್ನು ಆಧುನೀಕರಣಗೊಳಿಸಲು ಸುಮಾರು 300 ಕೋಟಿ ರೂಪಾಯಿ ಪಡೆಯಲು ಪ್ರಯತ್ನಿಸಲಾಗುವುದು ಎಂದರು.
ನೆಹರೂ ಮೈದಾನ್ ಮತ್ತು ಉರ್ವದಲ್ಲಿ ವಿದ್ಯುತ್ ಕೇಂದ್ರ ಸ್ಥಾಪಿಸಲು ಜಾಗ ಪಡೆಯಲು ಪ್ರಯತ್ನ ನಡೆಯುತ್ತಿದೆ. ಈಗಾಗಲೇ ಉನ್ನತಮಟ್ಟದ ಅಧಿಕಾರಿಗಳ ಜತೆ ಮಾತುಕತೆ ಮಾಡಲಾಗಿದೆ. ಆದಷ್ಟು ಬೇಗ ಅದಕ್ಕೂ ಶಂಕುಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.
ಇಲಾಖೆಯಲ್ಲಿ ದಾರಿ ದೀಪ ಆನ್ ಆಫ್ ಮಾಡಲು ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ 719 ಆಧುನಿಕ ಬಾಕ್ಸ್ ಖರೀದಿಸಬೇಕಾಗಿದ್ದು, ಈಗಾಗಲೇ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
ಮೆಸ್ಕಾಂ ಎಕ್ಸಿಕೂಟಿವ್ ಎಂಜಿನಿಯರ್ ಮಂಜಪ್ಪ, ಸಲಹಾ ಸಮಿತಿ ಸದಸ್ಯರಾದ ಮೋಹನ್ ಮೆಂಡನ್, ದುರ್ಗಾ ಪ್ರಸಾದ್ ಹಾಗೂ ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.