ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಶರತ್‌ ಆಸ್ಪತ್ರೆಯಲ್ಲಿ ನಿಧನ


Team Udayavani, Jul 7, 2017, 8:08 PM IST

Sharath-Death-600.jpg

ಮಂಗಳೂರು: ಬಿ.ಸಿ. ರೋಡ್‌ನ‌ಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳಿಂದ ಚೂರಿ ಇರಿತಕ್ಕೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೆಸ್ಸೆಸ್‌ ಕಾರ್ಯಕರ್ತ ಶರತ್‌ ಮಡಿವಾಳ (28) ಅವರು ಶುಕ್ರವಾರ ಸಂಜೆಯ ವೇಳೆಗೆ ಚಿಕಿತ್ಸೆ ಫ‌ಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಂಭೀರ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶರತ್‌ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಏನೂ ಆಗದೆ ಯಥಾ ಸ್ಥಿತಿಯಲ್ಲಿತ್ತು.

ಕಳೆದ ಮಂಗಳವಾರ ರಾತ್ರಿ ತಮ್ಮ ಲಾಂಡ್ರಿ ಅಂಗಡಿಯನ್ನು ಮುಚ್ಚುತ್ತಿದ್ದ ಸಂದರ್ಭದಲ್ಲಿ ಬೈಕ್‌ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಶರತ್‌ ಅವರ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಅವರ ತಲೆ ಮತ್ತು ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗಳಾಗಿತ್ತು. ಚಿಂತಾಜನಕ ಸ್ಥಿತಿಯಲ್ಲಿಯೇ ಸ್ಥಳೀಯರು ಶರತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶರತ್‌ ಹತ್ಯೆ ಯತ್ನ ಪ್ರಕರಣ : ಆರೋಪಿಗಳ ಸುಳಿವಿಲ್ಲ; ತನಿಖೆಗೆ 6 ತಂಡ
ಬಿ.ಸಿ. ರೋಡ್‌ನ‌ಲ್ಲಿ ಜು. 4ರಂದು ರಾತ್ರಿ ನಡೆದಿರುವ ಮರಣಾಂತಿಕ ಹಲ್ಲೆ ಪ್ರಕರಣದ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ. ಆರೋಪಿಗಳ ಶೋಧಕ್ಕಾಗಿ ಆರು ತನಿಖಾ ತಂಡಗಳನ್ನು ರಚಿಸಲಾಗಿದೆ. ಈಗಾಗಲೇ 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರೂ ಮಹತ್ವದ ಸುಳಿವು ಲಭಿಸಿಲ್ಲ ಎಂದು ಜಿಲ್ಲಾ ಪೊಲೀಸ್‌ ಅಧೀಕ್ಷಕ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.

ಬಂಟ್ವಾಳ ನಗರ ಠಾಣೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲಾಂಡ್ರಿಗೆ ನುಗ್ಗಿ ಅದರ ಮಾಲಕರ ಪುತ್ರ ಶರತ್‌ ಮೇಲೆ ದಾಳಿ ನಡೆಸಿದ ಪ್ರಕರಣವನ್ನು ಎಲ್ಲ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ. ಮಂಗಳೂರು ಕಮಿಷನರೆಟ್‌ ವ್ಯಾಪ್ತಿಯಲ್ಲಿ ಮೂರು ತಂಡಗಳು, ಜಿಲ್ಲೆಯ ಇತರ ಪ್ರದೇಶಗಳಲ್ಲಿ ಮೂರು ತನಿಖಾ ತಂಡಗಳು ಕಾರ್ಯಾಚರಿಸುತ್ತಿವೆ ಎಂದರು.

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.