ಧರ್ಮಪಾಲನೆ, ಶಿಸ್ತು, ಸಂಯಮದಿಂದ ಪುಣ್ಯಪ್ರಾಪ್ತಿ
Team Udayavani, Jul 27, 2017, 7:50 AM IST
ಚಾತುರ್ಮಾಸ್ಯ- ಋಷಿಮಂಡಲ ಆರಾಧನೆಯಲ್ಲಿ ಮುನಿಶ್ರೀ
ಬಂಟ್ವಾಳ: ಸಮ್ಯಕ್ ಜ್ಞಾನ, ಸಮ್ಯಕ್ ದರ್ಶನ ಮತ್ತು ಸಮ್ಯಕ್ ಚಾರಿತ್ರ್ಯ ಪಾಲನೆ ಮಾಡುವುದು ಅಗತ್ಯ ಎಂದು 108 ಮುನಿಶ್ರೀ ವೀರಸಾಗರ ಮಹಾರಾಜರು ಹೇಳಿದರು. ಪಾಣೆಮಂಗಳೂರಿನಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯ – ಋಷಿಮಂಡಲ ಆರಾಧನೆ ಸಂದರ್ಭ ಮಂಗಲ ಪ್ರವಚನ ನೀಡಿದರು.
ಜೀವನದಲ್ಲಿ ಧರ್ಮಾಚರಣೆಗೆ ಮಹತ್ವವಿದೆ. ಧರ್ಮಪಾಲನೆ, ಶಿಸ್ತು ಸಂಯಮ ಆಳವಡಿಸಿಕೊಂಡು ಜೀವನ ನಡೆಸಿದರೆ ಪುಣ್ಯಪ್ರಾಪ್ತಿಯಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಮುನಿಶ್ರೀಗಳ ಪಾವನ ಸಾನ್ನಿಧ್ಯದಲ್ಲಿ ಋಷಿಮಂಡಲ ಆರಾಧನೆಯನ್ನು ಮೂಡಬಿದಿರೆಯ ವೀರೇಂದ್ರ ಕುಮಾರ್ ಕುಟುಂಬ, ಸರ್ವ ಮಂಗಳ ಮಹಿಳಾ ಸಂಘ ಪ್ರಾಯೋಜಕತ್ವವದಲ್ಲಿ ಶ್ರಾವಕ ಬಂಧುಗಳ ಭಾಗವಹಿಸುವಿಕೆಯಲ್ಲಿ ನಡೆಸಲಾಯಿತು. ಮಂಗಲ ಪ್ರವಚನದ ಅನಂತರ ಧರ್ಮ ಸಭೆಯಲ್ಲಿ ಶಂಕಾ -ಸಮಾಧಾನ ನಡೆಯಿತು. ಶ್ರಾವಕ ಬಂಧುಗಳ ಅನೇಕ ಧಾರ್ಮಿಕ ಪ್ರಶ್ನೆಗಳಿಗೆ ಮುನಿಶ್ರೀಗಳು ಉತ್ತರಿಸಿದರು. ಸಾಮೂಹಿಕ ಆರಾಧನೆ ಕಾರ್ಯಕ್ರಮದಲ್ಲಿ ಮಂಗಳೂರು, ಮೂಡಬಿದಿರೆ, ವೇಣೂರು, ಪುತ್ತೂರು, ಕಾರ್ಕಳ, ಸಂಸೆ ಮುಂತಾದ ಕಡೆಗಳಿಂದ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು.
ಮೂಡಬಿದಿರೆಯ ಶಾಸಕ ಕೆ. ಅಭಯಚಂದ್ರ ಜೈನ್, ಮಂಜುಳಾ ದಂಪತಿ, ವಿಜಯರಾಜ್ ಅಧಿಕಾರಿ ವೇಣೂರು, ಜಿನೇಂದ್ರ ಜೈನ್ ಮಂಗಳೂರು ಮುಂತಾದವರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಸಮಿತಿಯ ರತ್ನಾಕರ್ ಜೈನ್, ಕಾರ್ಯಾಧ್ಯಕ್ಷ ಸುದರ್ಶನ್ ಜೈನ್, ಸಂಪತ್ ಕುಮಾರ್ ಶೆಟ್ಟಿ, ಧರಣೇಂದ್ರ ಇಂದ್ರ, ಸುಭಾಶ್ಚಂದ್ರ ಜೈನ್, ಭುವನೇಂದ್ರ ಇಂದ್ರ, ಹರ್ಷರಾಜ್ ಬಲ್ಲಾಳ್, ದೀಪಕ್ ಇಂದ್ರ ಕೆ., ಪ್ರವೀಣ್ ಕುಮಾರ್, ಆದಿರಾಜ್ ಜೈನ್, ಭರತ್ ರಾಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.