ಸಾಗರ ರಕ್ಷಾ ಕವಚ ಕಾರ್ಯಾಚರಣೆ
Team Udayavani, Apr 12, 2018, 9:00 AM IST
ಮಂಗಳೂರು/ ಉಡುಪಿ: ಭಯೋತ್ಪಾದಕ ದಾಳಿ ಹಾಗೂ ಇತರ ಕೃತ್ಯಗಳನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಯಾವ ರೀತಿ ಅನುಸರಿಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಯಾವ ರೀತಿ ಸಮರ್ಥವಾಗಿವೆ ಎನ್ನುವುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಸಾಗರ ಕವಚ ಅಣುಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆ ಹಿನ್ನೆಲೆಯಲ್ಲಿ ರೈಲು ನಿಲ್ದಾಣ, ಬಸ್ ನಿಲ್ದಾಣ, ವಿಮಾನ ನಿಲ್ದಾಣ, ಶಾಪಿಂಗ್ ಮಾಲ್, ಬೀಚ್, ದೇವಸ್ಥಾನ, ಚರ್ಚ್, ಮಸೀದಿ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಮಂಗಳೂರು ನಗರದ ವಿವಿಧೆಡೆಗಳಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ವಾಹನ ತಪಾಸಣೆ ನಡೆಸಿದರು.
ಉಡುಪಿಯಲ್ಲಿ…
ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಹಭಾಗಿತ್ವದಲ್ಲಿ ಎ. 11ರಂದು ಅಣುಕು ಕಾರ್ಯಾಚರಣೆ ನಡೆಸಲಾಗಿದ್ದು, ಎ. 12ರಂದು ಮುಂದುವರಿಯಲಿದೆ. ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸುವುದು, ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುವಿನ ಸಾಮರಸ್ಯವನ್ನು ವೃದ್ಧಿಸುವುದು ಹಾಗೂ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಪ್ರಯೋಗವನ್ನು ನಡೆಸಲಾಗುತ್ತಿದೆ.
ಅಣುಕು ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲೆ/ಕಾಲೇಜು, ರೈಲು, ಬಸ್ ನಿಲ್ದಾಣ, ಬೀಚ್, ಬಂದರು, ಕಡಲ ಕಿನಾರೆ, ರಸ್ತೆ ಮೊದಲಾದ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುತ್ತದೆ. ಈ ಸಂದರ್ಭ ಪೊಲೀಸರು ವಾಹನ ತಪಾಸಣೆ ನಡೆಸಲಿದ್ದಾರೆ. ಸಾರ್ವಜನಿಕರು ಸಹಕರಿಸಬೇಕು. ಸಂಶಯಾಸ್ಪದ ವ್ಯಕ್ತಿ, ವಸ್ತುಗಳು ದೊರೆತಲ್ಲಿ ಯಾವುದೇ ರೀತಿ ಭಯಪಡದೆ ಸಮೀಪದ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧೀಕ್ಷಕರ ಕಚೇರಿ ಉಡುಪಿ ಕಂಟ್ರೋಲ್ ರೂಂ-100, ಕರಾವಳಿ ಕಾವಲು ಪಡೆ ಕಂಟ್ರೋಲ್ ರೂಂ-1093, ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ 1077/ 2574802 ಅನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.