ಕಲ್ಲಾಪುವಿನಲ್ಲಿ ಉಪ್ಪು ನೀರಿನ ಒರತೆ 

Team Udayavani, Mar 23, 2018, 11:35 AM IST

23-March-6.jpg

ಪಡುಪಣಂಬೂರು: ಕುಡಿಯುವ ನೀರಿನ ಬವಣೆಯು ಕೆಲವೊಂದು ಪ್ರದೇಶಗಳಲ್ಲಿ ಉತ್ತಮವಾಗಿದ್ದರೂ ಸಹ ನೈಸರ್ಗಿಕವಾಗಿ ಕೆಲವೊಂದು ಕಡೆಗಳಲ್ಲಿ ನೀರಿನ ನಿರ್ವಹಣೆಯಲ್ಲಿ ತೊಡಕಾಗುತ್ತಿರುವುದು ಪಡುಪಣಂಬೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕಲ್ಲಾಪು ಪ್ರದೇಶದಲ್ಲಿ ಕಂಡು ಬಂದಿದೆ.

ಈ ಪ್ರದೇಶದಲ್ಲಿ ಸುಮಾರು 200 ಮನೆಗಳಿದ್ದು, ಅವರಲ್ಲಿ 32 ಮನೆಗಳು ಕುಡಿಯುವ ನೀರಿನ ಸಂಪರ್ಕ ಹೊಂದಿದೆ. ಇನ್ನುಳಿದ ಮನೆಗಳಲ್ಲಿ ತೆರೆದ ಬಾವಿ ಹಾಗೂ ಕೊಳವೆ ಬಾವಿಗಳನ್ನು ಹೊಂದಿದ್ದಾರೆ. ಒಂದೆರಡು ಮನೆಗಳಲ್ಲಿ ಬಾವಿಯಿದ್ದರೂ ಕಲ್ಲಾಪುವಿನಲ್ಲಿ ಪ್ರತ್ಯೇಕವಾಗಿ ಸಮಿತಿಯೊಂದು ನಿರ್ವಹಣೆ ನಡೆಸುತ್ತಿದೆ. ಒಂದು ಕೊಳವೆ ಬಾವಿಯಿಂದ ನೀರಿನ ಸಂಪರ್ಕವನ್ನು ಹೊಂದಲಾಗಿದೆ.

ಏಪ್ರಿಲ್‌-ಮೇ ತಿಂಗಳಿನಲ್ಲಿ ಸಮಸ್ಯೆ
ವರ್ಷದ ಎಲ್ಲ ತಿಂಗಳಿನಲ್ಲಿ ಕುಡಿಯುವ ನೀರಿನ ಸಾಕಷ್ಟು ಒರತೆ ಇದ್ದು, ನಿರ್ವಹಣೆಯಲ್ಲಿ ಅಷ್ಟೇನು ಸಮಸ್ಯೆ ಕಂಡಿಲ್ಲ. ಆದರೆ ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ನೀರಿನ ಒಳ ಹರಿವಿನಲ್ಲಿ ಉಪ್ಪಿನಾಂಶ ಕಂಡು ಬರುವುದರಿಂದ ಇದು ಇಲ್ಲಿನ ನೀರಿನ ನಿರ್ವಹಣೆಗೂ ಬಹಳ ತೊಂದರೆ ಆಗಿದೆ. ಆ ಸಂದರ್ಭದಲ್ಲಿ ಅನಿವಾರ್ಯವಾಗಿ ಟ್ಯಾಂಕರ್‌ ಮೂಲಕ ನೀರಿನ ಸಂಪರ್ಕವನ್ನು ನೀಡಲಾಗುತ್ತದೆ.

ಹೆಚ್ಚುವರಿ ಕೊಳವೆ ಬಾವಿ
ಎರಡು ತಿಂಗಳ ಹಿಂದೆ ನೀರನ್ನು ಹೆಚ್ಚುವರಿಯಾಗಿ ಶೇಖರಿಸಲು ಪ್ರತ್ಯೇಕ ಕೊಳವೆ ಬಾವಿಯನ್ನು ಶಾಸಕ ಅಭಯಚಂದ್ರ ಜೈನ್‌ ಅವರ ಅನುದಾನದಲ್ಲಿ ಕೊರೆಯಲಾಗಿದೆ. ಇದರಲ್ಲಿ 6 ಇಂಚು ನೀರು ಸಿಕ್ಕಿದೆಯಾದರೂ ಅದರಲ್ಲೂ ಎಪ್ರಿಲ್‌ ಮೇ ತಿಂಗಳಿನಲ್ಲಿ ಉಪ್ಪು ನೀರು ಬರುವ ಸಾಧ್ಯತೆ ಇದೆ ಎಂದು ಪಂಚಾಯತ್‌ ಹೇಳಿಕೊಂಡಿದೆ. ಇದಕ್ಕಾಗಿಯೇ ಶಾಶ್ವತ ಪರಿಹಾರವಾಗಿ ತುಂಬೆಯಿಂದ ಮೂಲ್ಕಿಗೆ ಸರಬರಾಜು ಆಗುತ್ತಿರುವ ನೀರಿನ ಸಂಪರ್ಕ ಅಥವಾ ಕಿನ್ನಿಗೋಳಿಯ ಬಹುಗ್ರಾಮ ಯೋಜನೆಯಲ್ಲಿನ ನೀರಿನ ಸಂಪರ್ಕ ಸಿಕ್ಕಲ್ಲಿ ಪರಿಹಾರ ಕಂಡು ಕೊಳ್ಳಬಹುದು ಎಂಬ ಅಭಿಪ್ರಾಯ ಕೇಳಿ ಬಂದಿದೆ.

ಶಾಶ್ವತ ಪರಿಹಾರಕ್ಕೆ ಪ್ರಯತ್ನ
ಮೂರು ವರ್ಷಗಳ ಹಿಂದೆಯೇ ತುಂಬೆ ಸಂಪರ್ಕ ಪಡೆಯಲು ಮನವಿ ಸಲ್ಲಿಸಿದ್ದೇವೆ. ಸಮಸ್ಯೆ ಪರಿಹರಿಸಲು ಪ್ರಯತ್ನ ಸಾಗಿದೆ. ಕಲ್ಲಾಪುವಿನಲ್ಲಿನ ಉಪ್ಪು ನೀರಿನ ಒರತೆಯಿಂದ ಗ್ರಾಮಸ್ಥರು ಪಂಚಾಯತ್‌ನ್ನು ದೂರುವುದು ಸಹಜವಾದರೂ ನೀರನ್ನು ಟ್ಯಾಂಕರ್‌ ಮೂಲಕ ನೀಡುವ ವ್ಯವಸ್ಥೆ ಮಾಡುತ್ತಿದ್ದೇವೆ.
– ಮೋಹನ್‌ದಾಸ್‌, ಅಧ್ಯಕ್ಷರು,
 ಪಡುಪಣಂಬೂರು ಗ್ರಾ.ಪಂ

ನೀರು ನಿರ್ವಹಣೆಯೂ ಸರಿಯಾಗಬೇಕು
ಕುಡಿಯುವ ನೀರಿನ ಬವಣೆಯಿಂದ ಆಗಾಗ ತೊಂದರೆಯಾಗುತ್ತದೆ. ಈ ಬಗ್ಗೆ ಗ್ರಾಮ ಪಂಚಾಯತ್‌ ಸಹಿತ ಸ್ಥಳೀಯ ಸಮಿತಿಯು ನೀರು ನಿರ್ವಹಣೆಯಲ್ಲಿನ ತೊಡಕನ್ನು ಸರಿಯಾಗಿ ಮಾಡಬೇಕು. ಉಪ್ಪು ನೀರಿನ ಸಮಸ್ಯೆ ಪರಿಹರಿಸಲು ಪ್ರಯತ್ನವಾಗಬೇಕು. ನಳ್ಳಿ ನೀರಿನ ಸಂಪರ್ಕವನ್ನೇ ನಂಬಿದವರಿಗೆ ಕಷ್ಟವಾಗುತ್ತದೆ.
-ಶಂಕರ ಶೆಟ್ಟಿಗಾರ್‌,ಸ್ಥಳೀಯರು

ನರೇಂದ್ರ ಕೆರೆಕಾಡು

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.