Sand Case ಸುಜೀರು: ಅಕ್ರಮ ಮರಳಿನ ದಿಣ್ಣೆಗಳು ವಶ
Team Udayavani, Dec 23, 2023, 1:42 AM IST
ಬಂಟ್ವಾಳ: ಪುದು ಗ್ರಾಮದ ಸುಜೀರಿನ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 36 ಯೂನಿಟ್ ಮರಳಿನ ದಿಣ್ಣೆಯನ್ನು ಶುಕ್ರವಾರ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಪಿಎಎಸ್‌ಐ ಹರೀಶ್ ಎಂ.ಆರ್. ಹಾಗೂ ಸಿಬಂದಿ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ 60 ಸಾವಿರ ರೂ. ಮೌಲ್ಯದ 36 ಯೂನಿಟ್(12 ಲೋಡ್) ಮರಳನ್ನು ಅಲ್ಲಲ್ಲಿ ದಿಣ್ಣೆಗಳ ಮೂಲಕ ಯಾವುದೇ ಪರವಾನಿಗೆ ಪಡೆಯದೆ ಸಂಗ್ರಹಿಸಿಟ್ಟಿದ್ದರು. ಮರಳಿನ ದಿಣ್ಣೆಗಳನ್ನು ವಶಪಡಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಮರಳು ಸಾಗಾಟದ ಲಾರಿ ವಶ
ಬೆಳ್ತಂಗಡಿ: ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಧರ್ಮಸ್ಥಳ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಾರ್ಮಾಡಿಯ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಮರಳು ತೆಗೆದು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದಾಗ, ಧರ್ಮಸ್ಥಳ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬಂದಿ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಮೂರು ಮಾರ್ಗ ಜಂಕ್ಷನ್‌ನಲ್ಲಿ ಪತ್ತೆಹಚ್ಚಿ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮರಳುಗಾರಿಕೆ: 5 ದೋಣಿ ವಶಕ್ಕೆ
ಮಂಗಳೂರು: ಮಂಗಳೂರು ತಾಲೂಕಿನ ಅಡೂxರು ಗ್ರಾಮದ ಕೆಳಗಿನ ಕೆರೆಯಲ್ಲಿ ಅಕ್ರಮ ಮರಳುಗಾರಿಕೆಗೆ ಬಳಕೆ ಮಾಡುತ್ತಿದ್ದ 5 ದೋಣಿಗಳನ್ನು ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ.
ಗಣಿಗಾರಿಕೆ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು ದಾಸ್ತಾನಿರಿಸಿದ್ದ ಮರಳು ಕೂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.