ಮರಳು ಅಡ್ಡೆಗೆ ದಾಳಿ: ಅಪಾರ ಸೊತ್ತು ವಶ
Team Udayavani, May 4, 2019, 6:33 AM IST
ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ಮೇ 3ರಂದು ದಾಳಿ ನಡೆಸಿದ ಬಂಟ್ವಾಳ ಉಪವಿಭಾಗ ಎಎಸ್ಪಿ ಸೈದುಲ್ ಅದಾವತ್ ನೇತೃತ್ವದ ತಂಡ 1.67 ಕೋ. ರೂ. ಮೊತ್ತದ ಸೊತ್ತುಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದೆ.
ಪುದು ಗ್ರಾಮದ ಸುಜೀರ್ನಲ್ಲಿ ನೇತ್ರಾವತಿ ನದಿಯ ಹಿನ್ನೀರಿನಿಂದ ಅಕ್ರಮವಾಗಿ ಮರಳು ತೆಗೆದು ಅದನ್ನು ಫಿಲ್ಟರ್ ಮಾಡಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಮಿಕರು ಸ್ಥಳ ದಿಂದ ಪರಾರಿಯಾಗಿದ್ದಾರೆ.
ಸ್ಥಳದಲ್ಲಿದ್ದ 24 ಲ.ರೂ. ಮೌಲ್ಯದ 3 ಟಿಪ್ಪರ್ ಲಾರಿಗಳು, 55 ಲ.ರೂ. ಮೌಲ್ಯದ ಎಲ್ ಆ್ಯಂಡ್ ಟಿ ಕಂಪೆನಿಯ ಒಂದು ಹಿಟಾಚಿ, 80 ಲ.ರೂ. ಮೌಲ್ಯದ ಕೊಬಿಲ್ ಕೋ ಕಂಪೆನಿಯ ಒಂದು ಹಿಟಾಚಿ, 6 ಲ. ರೂ. ಮೌಲ್ಯದ ಗ್ರೀನ್ ವಿಕ್ ಕಂಪೆನಿಯ ಒಂದು ಜನರೇಟರ್, 80 ಸಾ.ರೂ. ಮೌಲ್ಯದ ಮರಳು ಫಿಲ್ಟರ್ ಮಾಡುವ ಯುನಿಟ್, 1.10 ಲ. ರೂ. ಮೌಲ್ಯದ 35 ಲೋಡ್ ಮರಳನ್ನು ವಶಕ್ಕೆ ಪಡೆಯ ಲಾಗಿದೆ ಎಂದು ಪೊಲೀ ಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
Christmas: ಸಿಲಿಕಾನ್ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್ಮಸ್ ಸಂಭ್ರಮ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.