ಸಂಸ್ಕೃತ ಸಿಂಧುಃ ಸಮ್ಮೇಳನ


Team Udayavani, Jan 29, 2018, 11:02 AM IST

29-Jan-5.jpg

ಸುರತ್ಕಲ್‌ : ದೇಶದಲ್ಲಿ ಸಂಸ್ಕೃತ ಭಾಷೆಯ ಚಟುವಟಿಕೆ ನಿರಂತರವಾಗಿ ನಡೆಯುತ್ತಿದ್ದು, ಇದು ಜನ ಮಾನಸಕ್ಕೆ ಮುಟ್ಟುವಲ್ಲಿ ಹಿಂದುಳಿದಿದೆ. ಇದಕ್ಕಾಗಿ ಸಂಸ್ಕೃತ ಭಾರತೀ ದೇಶಾದ್ಯಂತ ಸಮ್ಮೆಳನ ನಡೆಸಿ ಸಂಸ್ಕೃತವನ್ನು ಮತ್ತಷ್ಟು ಶ್ರೀಮಂತಗೊಳಿಸುವ ಕೆಲಸ ಮಾಡುತ್ತಿದೆ ಎಂದು ಸಂಸ್ಕೃತ ಭಾರತೀ ಇದರ ಅಖಿಲ ಭಾರತ ಪ್ರಚಾರ ಪ್ರಮುಖ್‌ ಸತ್ಯನಾರಾಯಣ ಹೇಳಿದರು.

ಸುರತ್ಕಲ್‌ ಗೋವಿಂದ ದಾಸ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ವತಿಯಿಂದ ಸಂಸ್ಕೃತ ಭಾರತೀ ಸಹ ಯೋಗದಲ್ಲಿ ನಡೆದ ಸಂಸ್ಕೃತ ಸಿಂಧುಃ ಸಮ್ಮೇಳನದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಇಂದು ಸಂಸ್ಕೃತ ವಿದೇಶದಲ್ಲಿ ಬಹು ಬೇಡಿಕೆಯ ಭಾಷೆಯಾಗಿದೆ. 

ಭಾರತದಲ್ಲಿ ಸಂಸ್ಕೃತ ಕುಂಠಿತವಾಗದಂತೆ ನಾವೆಲ್ಲ ತಡೆಯಬೇಕಾಗಿದೆ ಎಂದರು. ಇಂದು ವಿದ್ಯಾರ್ಥಿಗಳು ಸಂಸ್ಕೃತದತ್ತ ಒಲವು ತೋರುವ ಲಕ್ಷಣ ಕಂಡು ಬರುತ್ತಿದೆ. ಸಮೀಪದ ಎಡ ಪಕ್ಷಗಳ ಅ ಧಿಕಾರದಲ್ಲಿರುವ ಕೇರಳ ರಾಜ್ಯವೊಂದರಲ್ಲೇ ಐನೂರು ಸಂಸ್ಕೃತ ಶಿಕ್ಷಕರ ನೇಮಕಕ್ಕೆ ಸರಕಾರ ಒಲವು ತೋರಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಸಂಸ್ಕೃತದ ಉಳಿವಿಗೆ ಸಮ್ಮೇಳನ ಪೂರಕ
ಕಟೀಲು ಶ್ರೀ ಕ್ಷೇತ್ರದ ಹರಿನಾರಾಯಣದಾಸ ಆಸ್ರಣ್ಣ ಮಾತನಾಡಿ, ಸಂಸ್ಕೃತ ಉಳಿಸಲು ಮತ್ತು ಭವಿಷ್ಯದ ಪೀಳಿಗೆಗೆ ಆಸಕ್ತಿದಾಯಕ ವಿಷಯವನ್ನಾಗಿ ಪರಿಚಯಿಸಲು ಈ ಸಮ್ಮೇಳನ ಪೂರಕ ವಾತಾವರಣ ಸೃಷ್ಟಿಸಲು ದೃಢ ನಿರ್ಧಾರ ಕೈಗೊಳ್ಳಬೇಕು ಎಂದರು.

ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತ ಐ. ರಮಾನಂದ ಭಟ್‌ ಸಮ್ಮೇಳನವನ್ನು ಉದ್ಘಾಟಿಸಿದರು. ಹಿಂದೂ ವಿದ್ಯಾದಾಯಿನಿ ಸಂಘ ಸುರತ್ಕಲ್‌ ಇದರ ಅಧ್ಯಕ್ಷ ಜನಾರ್ದನ ಇಡ್ಯಾ ಅಧ್ಯಕ್ಷತೆ ವಹಿಸಿದ್ದರು. ಎಂ.ಆರ್‌. ವಾಸುದೇವ ರಾವ್‌ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್‌ .ಐ.ಟಿ.ಕೆ. ಸುರತ್ಕಲ್‌ ಇದರ ಪ್ರೊ| ಅಶ್ವಿ‌ನಿ ಚತುರ್ವೇದಿ, ರಾಜ್ಯ ಕಸಪಾ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಗೋವಿಂದದಾಸ ಪದವಿ ಕಾಲೇಜು ಪ್ರಾಂಶುಪಾಲ ಡಾ| ಮುರಳೀಧರ ರಾವ್‌, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮೀ ಪಿ., ಹಿಂದೂ ವಿದ್ಯಾದಾಯಿನಿ ಸಂಘದ ಪದಾಧಿಕಾರಿಗಳು, ವಿವಿಧ ವಿಭಾಗದ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿತರಿದ್ದರು. ಉಪನ್ಯಾಸಕ ಪೈಕ ವೆಂಕಟರಮಣ ಸ್ವಾಗತಿಸಿದರು. ದಿವಸ್ಪತಿ ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ವಂದಿಸಿದರು.

ಸಂಸ್ಕೃತ ಕೊಡುಗೆ ಅನನ್ಯ
ವಿಧಾನ ಪರಿಷತ್‌ ಸದಸ್ಯ ಕ್ಯಾ| ಗಣೇಶ್‌ ಕಾರ್ಣಿಕ್‌ ಮಾತನಾಡಿ, ಸಂಸ್ಕೃತಿ ಮತ್ತು ಭಾಷೆಗೆ ಪರಸ್ಪರ ಸಂಬಂಧವಿದೆ. ಪರಿಸರ ಸಹ್ಯ ವಾತಾವರಣ ಸೃಷ್ಟಿಸಲು ಹಿಂದಿನ ಕಾಲದಲ್ಲಿ ಸಂಸ್ಕೃತ ಬಹುದೊಡ್ಡ ಕೊಡುಗೆ ನೀಡಿದೆ. ಇಂದಿನ ಮಾಲಿನ್ಯಕಾರಕ ಜಗತ್ತಿನ ಬದಲಾವಣೆಗೆ ಸಂಸ್ಕೃತ ಶಕ್ತಿ ತುಂಬಬಲ್ಲದು. ಆಂಗ್ಲ ಮಾಧ್ಯಮ ಹೊಟ್ಟೆಪಾಡಿಗೆ ಉದ್ಯೋಗ ಪಡೆದುಕೊಳ್ಳಲು ಸಹಾಯವಾಗಬಹುದು ಎಂಬ ಕಾರಣದಿಂದ ಇಂದು ಅದರತ್ತ ಮುಖಮಾಡಲಾಗಿದೆ. ಸಂಸ್ಕೃತವನ್ನು ಅವಗಣನೆ ಮಾಡುವ ಬದಲು ನಿತ್ಯ ಕಾಯಕದಲ್ಲಿ ಬಳಸಿಕೊಳ್ಳುವ ಕಾರ್ಯವಾಗಬೇಕು ಎಂದರು.

ಟಾಪ್ ನ್ಯೂಸ್

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

POLICE-5

Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.