Sarapady: ಮರಳುಗಾರಿಕೆ ಸ್ಥಳಕ್ಕೆ ಗಣಿ ಅಧಿಕಾರಿಗಳ ದಾಳಿ
Team Udayavani, Mar 4, 2024, 12:54 AM IST
ಬಂಟ್ವಾಳ: ಸರಪಾಡಿ ಗ್ರಾಮದ ಪೆರ್ಲ ಪಾದಿಲದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮರಳು ಹಾಗೂ ಅದಕ್ಕೆ ಬಳಸಲಾದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಇಲಾಖೆಯ ಉಪನಿರ್ದೇಶಕ ಗಿರೀಶ್ ಮೋಹನ್ ಎಸ್.ಎನ್. ಅವರು ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ್ದು, ಈ ವೇಳೆ ಕಾರ್ಮಿಕರು ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಲಾದ ದೋಣಿ, ಮೋಟಾರು, ಗ್ಯಾಸ್ ಸಿಲಿಂಡರ್, ಬುಟ್ಟಿ, ಹಾರೆ ಹಾಗೂ 25 ಎಂಟಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣವನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.