BJP; ಸಾಮಾನ್ಯ ಕಾರ್ಯಕರ್ತರಿಗೆ ಒಲಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಗಾದಿ
Team Udayavani, Jan 16, 2024, 12:19 AM IST
ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
ಮಂಗಳೂರು: ಲೋಕಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ನಿಟ್ಟಿನಲ್ಲಿ ಹೊಸ ತಂಡವನ್ನು ರಾಜ್ಯದಲ್ಲಿ ರಚಿಸಲಾಗಿದ್ದು, ಈ ಪ್ರಕಾರ ಅನುಭವಿ ನಾಯಕ, ಬಿಲ್ಲವ ಸಮಾಜದ ಸತೀಶ್ ಕುಂಪಲ ಅವರಿಗೆ ದ.ಕ. ಜಿಲ್ಲೆಯ ಬಿಜೆಪಿ ಅಧ್ಯಕ್ಷ ಹುದ್ದೆ ದೊರೆತಿದೆ.
1987ರಿಂದ ಬಿಜೆಪಿ ಬೂತ್ ಚಟುವಟಿಕೆ ಆರಂಭಿಸಿ ಸತೀಶ್ 1989ರಲ್ಲಿ ಬಿಜೆಪಿ ಕುಂಪಲ ಬೂತ್ ಪ್ರಧಾನ ಕಾರ್ಯದರ್ಶಿಯಾಗಿ, 1994ರಲ್ಲಿ ಸೋಮೇಶ್ವರ ಗ್ರಾ.ಪಂ.ಕಾರ್ಯದರ್ಶಿಯಾಗಿ, 1999ರಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರ ಬಿಜೆಪಿ ಕಾರ್ಯದರ್ಶಿ, 2003ರಲ್ಲಿ ಪ್ರಧಾನ ಕಾರ್ಯದರ್ಶಿಯಾದ ಅವರು 2007, 2013 ಹಾಗೂ ಪ್ರಸ್ತುತ ಬಿಜೆಪಿ ದ.ಕ. ಜಿಲ್ಲಾ ಕಾರ್ಯದರ್ಶಿಯಾಗಿದ್ದಾರೆ.
ಎರಡು ಬಾರಿ ಸೋಮೇ ಶ್ವರ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾದ ಅವರು ಕೊಣಾಜೆ ಹಾಗೂ ಕೋಟೆ ಕಾರ್‌ನಿಂದ ಜಿ.ಪಂ. ಸದಸ್ಯ ರಾಗಿದ್ದರು. 2013ರಿಂದ 2015ರವರೆಗೆ ದ.ಕ. ಜಿ.ಪಂ. ಉಪಾಧ್ಯಕ್ಷರಾಗಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯು.ಟಿ. ಖಾದರ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದರು.ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಸ್ಥಾಪಕ ಅಧ್ಯಕ್ಷ ಸಹಿತ ವಿವಿಧ ಸಂಘ -ಸಂಸ್ಥೆಗಳಲ್ಲಿ ಮುಂಚೂಣಿಯಲ್ಲಿದ್ದಾರೆ.
ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾದ ನನಗೆ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನ ದೊರೆತಿದೆ. ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡುವೆ ಎಂದು ಸತೀಶ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್
ಕುಂದಾಪುರ: ಬಿಜೆಪಿ ಉಡುಪಿ ಜಿಲ್ಲೆ ಅಧ್ಯಕ್ಷರಾಗಿ ಬಿ. ಕಿಶೋರ್ ಕುಮಾರ್ ಕುಂದಾಪುರ ನೇಮಕವಾಗಿದ್ದಾರೆ.
ಅವರು ಕುಂದಾಪುರ ಮಂಡಲ ಬಿಜೆಪಿ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಾಜ್ಯ ಮೀನುಗಾರಿಕೆ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಸಂದರ್ಭ ಭಟ್ಕಳ ಸಹಿತ ವಿವಿಧ ಕ್ಷೇತ್ರಗಳ ಉಸ್ತುವಾರಿಯಾಗಿ, ಬೈಂದೂರು ವಿಧಾನಸಭೆ ಕ್ಷೇತ್ರ ಪ್ರಭಾರಿ ಸಹಿತ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸಿದ್ದರು.
2013ರಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ತೊರೆದು ಪಕ್ಷೇತರರಾಗಿ ಸ್ಪರ್ಧಿಸಿದಾಗ ಬಿಜೆಪಿ ಅಭ್ಯರ್ಥಿಯಾಗಿ ಕುಂದಾಪುರದಿಂದ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಕುಂದಾಪುರ ಅಥವಾ
ಬೈಂದೂರು ಕ್ಷೇತ್ರದ ಅಭ್ಯರ್ಥಿ ಯಾಗಿ ಕಿಶೋರ್ ಕುಮಾರ್ ಹೆಸರು ಮುನ್ನಲೆಯಲ್ಲಿತ್ತು.
ಉದ್ಯಮಿಯಾಗಿರುವ ಕಿಶೋರ್ ಕುಮಾರ್ ರಾಜಕೀಯದ ಹೊರತಾಗಿ ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿ ಕೊಂಡವರು. ಹೋರಾಟಗಳ ಮುಂಚೂಣಿ ವಹಿಸಿದವರು. ಕುಂದಾ ಪುರ ರೋಟರಾಕ್ಟ್ ಕ್ಲಬ್, ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಂಸ್ಥೆಯ ಮೂಲಕ ಸಾಂಸ್ಕೃತಿಕ ರಂಗದಲ್ಲಿಯೂ ನಿರಂತರ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ನಾಗಣ್ಣ ನಶ್ಯ ಮಾಲಕರಾಗಿರುವ ಅವರು ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿದ್ದರು. ರಾಜ್ಯ ಬಿಜೆಪಿ ಮೀನು ಗಾರಿಕೆ ಪ್ರಕೋಷ್ಠದ ಸಂಚಾಲಕರಾಗಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಗಿದ್ದ ಅವರು, ಪ್ರಸ್ತುತ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಭಡ್ತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.