ಸೌತಡ್ಕ ದೇವಸ್ಥಾನದಲ್ಲಿ ಮಹಿಳೆಯ ಬ್ಯಾಗ್ ನಿಂದ ಚಿನ್ನಾಭರಣ ಕಳವು ಪ್ರಕರಣ :ಓರ್ವ ಮಹಿಳೆಯ ಬಂಧನ
Team Udayavani, Jun 2, 2022, 3:58 PM IST
ಬೆಳ್ತಂಗಡಿ : ಸೌತಡ್ಕ ದೇವಸ್ಥಾನಕ್ಕೆ ಬಂದಿದ್ದ ಭಕ್ತರೊಬ್ಬರ ಬ್ಯಾಗ್ ನಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ಕುಷ್ಟಗಿಚಾಲ್ ಮನೆ ನಿವಾಸಿಯಾದ ಭೀಮವ್ವ (63ವರ್ಷ) ಎನ್ನಲಾಗಿದೆ.
ಪ್ರಕರಣದ ವಿವರ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಕ್ಷೇತ್ರ ಸೌತಡ್ಕಕ್ಕೆ ದೇವರ ದರ್ಶನ ಪಡೆಯಲು ಬೆಳ್ತಂಗಡಿ ಮೂಲದ ಮುಂಬೈ ನಿವಾಸಿಯಾದ ಬಾಲಚಂದ್ರ ಡಿ ಎಂಬುವವರು ಸಂಸಾರ ಸಮೇತ ಬಂದಿದ್ದರು ಈ ವೇಳೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಸಮಯದಲ್ಲಿ ಬಾಲಚಂದ್ರ ಅವರ ಪತ್ನಿಯ ಕೈಯಲ್ಲಿದ್ದ ವ್ಯಾನಿಟಿ ಬ್ಯಾಗ್ ನ ಜಿಪ್ ತೆರೆದು ಅದರಲ್ಲಿದ್ದ ವಜ್ರದ ನೆಕ್ಲೇಸ್, ಎರಡು ಉಂಗುರ, ಜುಮುಕಿ ಒಂದು ಜೊತೆ ಸೇರಿ ಸುಮಾರು ಮೂರು ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು, ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತು.
ಪೊಲೀಸ್ ಅಧೀಕ್ಷಕ ಋಷೀಕೇಶ್ ಸೋನಾವಣೆ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ರವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಗದಗ ಮೂಲದ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಉತ್ತರಪ್ರದೇಶದಲ್ಲಿ ತೆರಿಗೆ ವಿನಾಯ್ತಿ:ಸಾಮ್ರಾಟ್ ಪ್ರಥ್ವಿರಾಜ್ ಸಿನಿಮಾ ವೀಕ್ಷಿಸಿದ CM ಯೋಗಿ
ಹಲವು ಕಳವು ಪ್ರಕರಣಗಳಲ್ಲಿ ಭಾಗಿ :
ಆರೋಪಿ ಭೀಮವ್ವ ಅವಳ ಮೇಲೆ ಮುರುಡೇಶ್ವರ, ಭಟ್ಕಳ, ಸುಬ್ರಹ್ಮಣ್ಯ, ಸೇರಿ ಹಲವು ಕಡೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ಮಾನ್ಯ ಪೊಲೀಸ್ ಉಪಾಧೀಕ್ಷಕರು ಬಂಟ್ವಾಳ ಉಪವಿಭಾಗ ಮಾನ್ಯ ಶಿವಂಶು ರಜಪೂತ್ ಮತ್ತು ಪೊಲೀಸ್ ವೃತ್ತ ನಿರೀಕ್ಷಕರು ಬೆಳ್ತಂಗಡಿ ವೃತ್ತ ಶ್ರೀಶಿವಕುಮಾರ್ ರವರ ನೇತೃತ್ವದಲ್ಲಿ ಪಿಎಸ್ಐ ಕೃಷ್ಣಕಾಂತ ಅ ಪಾಟೀಲ್ ರವರ ವಿಶೇಷ ತಂಡದ ಸಿಬ್ಬಂದಿಗಳಾದ, ಹೆಚ್ ಸಿ ಬೆನ್ನಿಚ್ಚನ್, ಹೆಚ್ ಸಿ ಪ್ರಶಾಂತ್, ಹೆಚ್ ಸಿ ರಾಹುಲ್, ಹೆಚ್ ಸಿ ಸತೀಶನಾಯ್ಕ ಜಿ, ಹೆಚ್ ಸಿ ಶೇಖರ್ ,ಹೆಚ್ ಸಿ ಕೃಷ್ಣಪ್ಪ, ಹೆಚ್‌ಸಿ ರವೀಂದ್ರ ಪಿ ಸಿ ಅನಿಲ್ ಕುಮಾರ್ ,ಚಾಲಕ ಎಪಿಸಿ ಲೋಕೇಶ್, ಮಪಿಸಿ ಸೌಭಾಗ್ಯ ಮತ್ತು ಜಿಲ್ಲಾ ಗಣಕ ಯಂತ್ರದ ವಿಭಾಗದ ಸಂಪತ್ ಮತ್ತು ದಿವಾಕರ ರವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.