ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ
Team Udayavani, Dec 16, 2017, 12:12 PM IST
ಮಹಾನಗರ: ಯಾವುದೇ ವ್ಯಕ್ತಿ ಸ್ವಾಭಿಮಾನದಿಂದ ಜೀವನ ನಡೆಸಲು ಶಿಕ್ಷಣ ಅತಿ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಕ್ರೆಡೈ ಸಂಸ್ಥೆಯು ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಕೌಶಲ, ನೈಪುಣ್ಯವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದಲ್ಲಿ ಕ್ರೆಡೈ ಮಂಗಳೂರು ಘಟಕದ ವತಿಯಿಂದ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು.
ನಿರ್ಮಾಣ ಕ್ಷೇತ್ರವು ಹಲವು ಸಮಸ್ಯೆಗಳ ಮಧ್ಯೆ ಸಿಲುಕಿದ್ದರೂ ಕ್ರೆಡೈ ತನ್ನ ಸಾಮಾಜಿಕ ಕಳಕಳಿಯನ್ನು ಮರೆಯದೆ ಶಾಲೆಗಳ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳಿಗೆ ನೆರವಾಗುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಸಂಸ್ಥೆಯು ಅಂಗನವಾಡಿ ಕಟ್ಟಡ, ಶೌಚಾಲಯಗಳ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
25 ಮಂದಿಗೆ ವಿದ್ಯಾರ್ಥಿವೇತನ
ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಘಟಕಾಧ್ಯಕ್ಷ ಡಿ.ಬಿ. ಮೆಹ್ತಾ ಮಾತನಾಡಿ, ಸಂಸ್ಥೆಯು ತನ್ನ ಕಚೇರಿಯ ಬಾಡಿಗೆ ಶುಲ್ಕವನ್ನು ಸಾಮಾಜಿಕ ಸೇವಾ ಕಾರ್ಯಗಳಿಗೆ ಬಳಕೆ ಮಾಡುತ್ತಿದೆ. ಕಳೆದ 2 ವರ್ಷಗಳಲ್ಲಿ ಕಟ್ಟಡ ಕಾರ್ಮಿಕರಿಗೆ ಗುರುತಿನ ಚೀಟಿ, ಆರೋಗ್ಯ ಕಾರ್ಡ್ಗಳನ್ನು ವಿತರಿಸಲಾಗಿದೆ. ಈ ವರ್ಷ 25 ಮಂದಿಗೆ ವಿದ್ಯಾರ್ಥಿವೇತನ ವಿತರಿಸಲಾಗುತ್ತಿದ್ದು, ಮುಂದಿನ 5 ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 500 ದಾಟಲಿದೆ. ಪ್ರಸ್ತುತ ವಿದ್ಯಾರ್ಥಿವೇತನ ವಿತರಿಸಿದ ವಿದ್ಯಾರ್ಥಿಗಳಿಗೆ ಮುಂದಿನ ವರ್ಷಗಳಲ್ಲಿಯೂ ವೇತನ ವಿತರಿಸಲಾಗುವುದು. ಜತೆಗೆ ಕಾರ್ಮಿಕರಿಗೆ ಕೌಶಲಾಭಿವೃದ್ಧಿ ತರಬೇತಿಯನ್ನೂ ನೀಡಲಾಗಿದೆ. ಸರಕಾರಿ ಶಾಲೆಗಳಿಗೆ ಕಟ್ಟಡ, ಸ್ಮಾರ್ಟ್ ಕ್ಲಾಸನ್ನೂ ನಿರ್ಮಿಸಲಾಗಿದೆ ಎಂದರು.
ಮೇಯರ್ ಕವಿತಾ ಸನಿಲ್ ಶುಭ ಹಾರೈಸಿದರು. ಕ್ರೆಡೈ ಕರ್ನಾಟಕದ ಉಪಾಧ್ಯಕ್ಷ ಪುಷ್ಪರಾಜ್ ಜೈನ್, ಮಂಗಳೂರು ಘಟಕದ ಕೋಶಾಧಿಕಾರಿ ಡಾ| ಎರಲ್ ಪಿಂಟೊ, ಜತೆ ಕಾರ್ಯದರ್ಶಿ ವಿನೋದ್ ಪಿಂಟೊ ವೇದಿಕೆಯಲ್ಲಿದ್ದರು. ಉಪಾಧ್ಯಕ್ಷ ಸಿರಾಜ್ ಅಹ್ಮದ್ ಸ್ವಾಗತಿಸಿದರು. ಕಾರ್ಯದರ್ಶಿ ನವೀನ್ ಕರ್ಡೊಝಾ ವಂದಿಸಿದರು. ಮ್ಯಾನೇಜರ್ ರಾಜಶೇಖರ್ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.